AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿನ್ನೋದು ಏನೋ ಇರಬಹುದೆಂದು ಆಸ್ಪತ್ರೆಯಲ್ಲಿ ರೋಗಿ ಬಳಿ ಇದ್ದ ಒಡವೆ ಬ್ಯಾಗ್ ಕದ್ದೊಯ್ದ ನಾಯಿ

ಮಂದಸೌರ್ ಆಸ್ಪತ್ರೆಯಲ್ಲಿ ನಾಯಿಯೊಂದು 4 ಲಕ್ಷ ರೂ. ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ಕದ್ದ ಘಟನೆ ವೈರಲ್ ಆಗಿದೆ. ಸಿಸಿಟಿವಿಯಲ್ಲಿ ಸೆರೆಯಾದ ಈ ದೃಶ್ಯದಲ್ಲಿ, ನಾಯಿ ಆಹಾರವೆಂದು ಭಾವಿಸಿ ಬ್ಯಾಗ್ ಒಯ್ದಿದ್ದು, ಪೊಲೀಸರು ಅದನ್ನು ಮರಳಿ ನೀಡಿದ್ದಾರೆ. ಆದರೆ, ಈ ಘಟನೆ ಸರ್ಕಾರಿ ಆಸ್ಪತ್ರೆಗಳಲ್ಲಿನ ಕಳಪೆ ಭದ್ರತೆ, ಬೀದಿ ಪ್ರಾಣಿಗಳ ಹಾವಳಿ ಮತ್ತು ರೋಗಿಗಳ ಸುರಕ್ಷತೆ, ನೈರ್ಮಲ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ತಿನ್ನೋದು ಏನೋ ಇರಬಹುದೆಂದು ಆಸ್ಪತ್ರೆಯಲ್ಲಿ ರೋಗಿ ಬಳಿ ಇದ್ದ ಒಡವೆ ಬ್ಯಾಗ್ ಕದ್ದೊಯ್ದ ನಾಯಿ
ನಾಯಿ
ನಯನಾ ರಾಜೀವ್
|

Updated on: Aug 26, 2026 | 8:24 AM

Share

ಮಂದಸೌರ್, ಆಗಸ್ಟ್ 26: ನಾಯಿ(Dog)ಯೊಂದು ಒಡವೆ ಬ್ಯಾಗ್ ಹೊತ್ತೊಯ್ದಿರುವ ವಿಚಿತ್ರ ಘಟನೆ ಮಧ್ಯಪ್ರದೇಶದ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಮಹಿಳೆಯೊಬ್ಬರ 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 2 ಸಾವಿರ ರೂ. ನಗದು ಇದ್ದ ಚೀಲವನ್ನು ಬೀದಿ ನಾಯಿಯೊಂದು ಆಹಾರವೆಂದು ತಪ್ಪಾಗಿ ಭಾವಿಸಿ ಬಾಯಲ್ಲಿ ಕಚ್ಚಿಕೊಂಡು ಹೋಗಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ.

ಕಾಯಂಪುರ ಗ್ರಾಮದ ನಿವಾಸಿ ಲತಾ ಬಾಯಿ ಎಂಬ ಮಹಿಳೆ ಆಸ್ಪತ್ರೆಯ ಜನರಲ್ ವಾರ್ಡ್‌ನಲ್ಲಿದ್ದಾಗ ತಮ್ಮ ಆಭರಣದ ಬ್ಯಾಗ್ ನಾಪತ್ತೆಯಾಗಿರುವುದನ್ನು ಕಂಡು ಗಾಬರಿಗೊಂಡು ಕೊತ್ವಾಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪೊಲೀಸರು ಕಳ್ಳತನದ ಜಾಡು ಹಿಡಿಯಲು ಆಸ್ಪತ್ರೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಮುಂಜಾನೆ ಸಮಯದಲ್ಲಿ ಬೀದಿ ನಾಯಿಯೊಂದು ವಾರ್ಡ್‌ನೊಳಗೆ ಬಂದು ಬ್ಯಾಗ್ ಅನ್ನು ಕಚ್ಚಿಕೊಂಡು ಆರಾಮವಾಗಿ ಹೊರನಡೆಯುತ್ತಿರುವ ದೃಶ್ಯ ಕಂಡು ಅಚ್ಚರಿಪಟ್ಟರು. ಪೊಲೀಸರು ತಕ್ಷಣ ನಾಯಿ ತೆರಳಿದ ಮಾರ್ಗವನ್ನು ಶೋಧಿಸಿ, ಆಸ್ಪತ್ರೆಯ ಆವರಣದಲ್ಲಿದ್ದ ಬ್ಯಾಗ್ ಅನ್ನು ಆಭರಣ ಮತ್ತು ನಗದಿನೊಂದಿಗೆ ಸುರಕ್ಷಿತವಾಗಿ ವಶಪಡಿಸಿಕೊಂಡು ಮಹಿಳೆಗೆ ಮರಳಿಸಿದ್ದಾರೆ.

ಮತ್ತಷ್ಟು ಓದಿ: Rabies Vaccine: ಭಾರತದಲ್ಲಿ ಹೆಚ್ಚುತ್ತಲೇ ಇದೆ ನಾಯಿ ಕಚ್ಚುವಿಕೆ; ಲಸಿಕೆ ಪಡೆದರೂ ರೇಬೀಸ್ ಬರಲು ಸಾಧ್ಯವೇ?

ನೆಟ್ಟಿಗರು “ಇದು ದೇಶದ ಅತ್ಯಂತ ಶ್ರೀಮಂತ ನಾಯಿ”, ಆಸ್ಪತ್ರೆಯ ಸೆಕ್ಯುರಿಟಿ ಚೆಕ್ ಮಾಡಲು ಬಂದ ಸ್ಪೆಷಲ್ ಆಫೀಸರ್ ಎಂದೆಲ್ಲಾ ತಮಾಷೆಯ ಕಮೆಂಟ್‌ಗಳ ಮೂಲಕ ಪ್ರತಿಕ್ರಿಯಿಸಿದ್ದಾರೆ.

ವಿಡಿಯೋ

ಆಸ್ಪತ್ರೆಗಳ ಒಳಗೆ ಬೀದಿ ನಾಯಿಗಳ ಹಾವಳಿ: ಈ ಘಟನೆಯು ನಗು ಮೂಡಿಸಿದರೂ, ಸರ್ಕಾರಿ ಆಸ್ಪತ್ರೆಗಳ ಜನರಲ್ ವಾರ್ಡ್ ಮತ್ತು ತುರ್ತು ಚಿಕಿತ್ಸಾ ಘಟಕಗಳ ಒಳಗೆ ಬೀದಿ ಪ್ರಾಣಿಗಳು ಮುಕ್ತವಾಗಿ ಓಡಾಡುತ್ತಿರುವುದು ರೋಗಿಗಳ ಸುರಕ್ಷತೆ ಮತ್ತು ನೈರ್ಮಲ್ಯದ (Hygiene) ಮೇಲಿನ ಗಂಭೀರ ಲೋಪವನ್ನು ಬಯಲಿಗೆಳೆದಿದೆ.

ಸೋಂಕು ಮತ್ತು ರೇಬಿಸ್ ಭೀತಿ: ಆಸ್ಪತ್ರೆಗಳಲ್ಲಿ ನವಜಾತ ಶಿಶುಗಳು ಮತ್ತು ಶಸ್ತ್ರಚಿಕಿತ್ಸೆಗೆ ಒಳಗಾದ ರೋಗಿಗಳು ಇರುವುದರಿಂದ, ಪ್ರಾಣಿಗಳಿಂದ ಹರಡುವ ಸೋಂಕುಗಳು ಹಾಗೂ ಕಡಿತದ ಅಪಾಯವನ್ನು ತಡೆಗಟ್ಟಲು ಭದ್ರತಾ ಸಿಬ್ಬಂದಿಯನ್ನು ಕಟ್ಟುನಿಟ್ಟಾಗಿ ನಿಯೋಜಿಸುವಂತೆ ಸಾರ್ವಜನಿಕರು ಆಡಳಿತ ಮಂಡಳಿಯನ್ನು ಆಗ್ರಹಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಓಂಪ್ರಕಾಶ್ ರಾವ್ ನನ್ನ ಗುರುಗಳು: ‘ಪ್ರೇಮದ ಊರಲಿ’ ಡೈರೆಕ್ಟರ್ ಹೆಮ್ಮೆಯ ಮಾತು
ಓಂಪ್ರಕಾಶ್ ರಾವ್ ನನ್ನ ಗುರುಗಳು: ‘ಪ್ರೇಮದ ಊರಲಿ’ ಡೈರೆಕ್ಟರ್ ಹೆಮ್ಮೆಯ ಮಾತು
ಇ-ಕೆವೈಸಿ ನೆಪದಲ್ಲಿ ಹಣ ವಸೂಲಿ
ಇ-ಕೆವೈಸಿ ನೆಪದಲ್ಲಿ ಹಣ ವಸೂಲಿ
ಹನೂರಿನ ಇಂಡಿಗನತ್ತ-ಮೆಂದಾರೆ ಗ್ರಾಮಸ್ಥರ ನರಕಯಾತನೆ
ಹನೂರಿನ ಇಂಡಿಗನತ್ತ-ಮೆಂದಾರೆ ಗ್ರಾಮಸ್ಥರ ನರಕಯಾತನೆ
‘ಪ್ರೇಮದ ಊರಲಿ’ ನಟಿಯರಿಗೆ ಕನ್ನಡದ ಬಗ್ಗೆ ಸಂಕಲ್ಪ ಮಾಡಿಸಿದ ರಂಗಾಯಣ ರಘು
‘ಪ್ರೇಮದ ಊರಲಿ’ ನಟಿಯರಿಗೆ ಕನ್ನಡದ ಬಗ್ಗೆ ಸಂಕಲ್ಪ ಮಾಡಿಸಿದ ರಂಗಾಯಣ ರಘು
ಕೊನೆಗೂ ತಾಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಮುಹೂರ್ತ ಫಿಕ್ಸ್
ಕೊನೆಗೂ ತಾಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಮುಹೂರ್ತ ಫಿಕ್ಸ್
ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅನುಮೋದನೆ
ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅನುಮೋದನೆ
ದಸರಾ, ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಹಾಲಿನ ದರ 8 ರೂ. ಹೆಚ್ಚಳ
ದಸರಾ, ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಹಾಲಿನ ದರ 8 ರೂ. ಹೆಚ್ಚಳ
ಕೆಪಿಎಸ್​ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ,ಸದಸ್ಯೆ ಗೀತಾ ಇಡಿ ವಶಕ್ಕೆ
ಕೆಪಿಎಸ್​ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ,ಸದಸ್ಯೆ ಗೀತಾ ಇಡಿ ವಶಕ್ಕೆ
ಬಿಗ್​​ಬಾಸ್ ಕನ್ನಡ: ‘ಅಯ್ಯೋ ಉರಿ’ ಕಣ್ಣೀರು ಹಾಕಿದ ಕಿರಣ್ ಶಾಸ್ತ್ರಿ
ಬಿಗ್​​ಬಾಸ್ ಕನ್ನಡ: ‘ಅಯ್ಯೋ ಉರಿ’ ಕಣ್ಣೀರು ಹಾಕಿದ ಕಿರಣ್ ಶಾಸ್ತ್ರಿ
ನಮ್ಮ್ ಸಿಎಂ ಫೋನ್‌ಗೆ ಸಿಗಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್
ನಮ್ಮ್ ಸಿಎಂ ಫೋನ್‌ಗೆ ಸಿಗಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್