ಲೋಕಸಭೆಯಲ್ಲಿ ಅಕ್ರಮ ಗಣಿಗಾರಿಕೆ ಪ್ರಸ್ತಾಪ; ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಸಂಸದೆ ಸುಮಲತಾ ಒತ್ತಾಯ

ಅಕ್ರಮ ಗಣಿಗಾರಿಕೆಯಿಂದ ಪರಿಸರ ಮಾಲಿನ್ಯವಾಗುತ್ತಿದೆ. ಕಲುಷಿತ ಗಾಳಿಯಿಂದ ಜನರಿಗೆ ರೋಗಗಳು ಕಾಣಿಸಿಕೊಳ್ಳುತ್ತಿವೆ ಎಂದು ಹೇಳಿದ್ದಾರೆ. ನಿಯಂತ್ರಣ ಕ್ರಮ ಕೈಗೊಳ್ಳುವಂತೆ ಪ್ರಶ್ನೋತ್ತರ ಕಲಾಪದ ವೇಳೆ ಸುಮಲತಾ ಒತ್ತಾಯಿಸಿದ್ದಾರೆ.

ಲೋಕಸಭೆಯಲ್ಲಿ ಅಕ್ರಮ ಗಣಿಗಾರಿಕೆ ಪ್ರಸ್ತಾಪ; ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಸಂಸದೆ ಸುಮಲತಾ ಒತ್ತಾಯ
ಸುಮಲತಾ ಅಂಬರೀಷ್
Follow us
TV9 Web
| Updated By: ganapathi bhat

Updated on:Aug 06, 2021 | 3:26 PM

ದೆಹಲಿ: ಅಕ್ರಮ ಗಣಿಗಾರಿಕೆಯಿಂದ ಪರಿಸರ ಮಾಲಿನ್ಯವಾಗುತ್ತಿದೆ. ಸ್ಫೋಟಕಗಳಿಂದ ವಾತಾವರಣ ಕಲುಷಿತವಾಗುತ್ತಿದೆ. ಕಲುಷಿತ ಗಾಳಿಯಿಂದ ಜನರಿಗೆ ರೋಗಗಳು ಉಲ್ಬಣ ಆಗುತ್ತಿದೆ ಎಂದು ಮಂಡ್ಯ ಸಂಸದೆ ಸುಮಲತಾ ಲೋಕಸಭೆಯಲ್ಲಿ ಇಂದು (ಆಗಸ್ಟ್ 6) ಮಾತನಾಡಿದ್ದಾರೆ. ಇದರಿಂದ ಕರ್ನಾಟಕದಲ್ಲಿ ಮಹತ್ವ ಪಡೆದಿದ್ದ ಅಕ್ರಮ ಗಣಿಗಾರಿಕೆ ಪ್ರಕರಣ ಮತ್ತೆ ಲೋಕಸಭೆಯಲ್ಲಿ ಪ್ರತಿಧ್ವನಿಸಿದಂತಾಗಿದೆ.

ಲೋಕಸಭೆಯಲ್ಲಿ ಅಕ್ರಮ ಗಣಿಗಾರಿಕೆ ಪ್ರಸ್ತಾಪಿಸಿದ ಸಂಸದೆ ಸುಮಲತಾ, ಅಕ್ರಮ ಗಣಿಗಾರಿಕೆ ನಿಯಂತ್ರಣಕ್ಕೆ ಕ್ರಮಕೈಗೊಳ್ಳಲು ಒತ್ತಾಯ ಮಾಡಿದ್ದಾರೆ. ಲೋಕಸಭೆಯಲ್ಲಿ ಮಂಡ್ಯ ಸಂಸದೆ ಸುಮಲತಾ ಒತ್ತಾಯ ಮಾಡಿದ್ದಾರೆ. ಅಕ್ರಮ ಗಣಿಗಾರಿಕೆಯಿಂದ ಪರಿಸರ ಮಾಲಿನ್ಯವಾಗುತ್ತಿದೆ. ಕಲುಷಿತ ಗಾಳಿಯಿಂದ ಜನರಿಗೆ ರೋಗಗಳು ಕಾಣಿಸಿಕೊಳ್ಳುತ್ತಿವೆ ಎಂದು ಹೇಳಿದ್ದಾರೆ. ನಿಯಂತ್ರಣ ಕ್ರಮ ಕೈಗೊಳ್ಳುವಂತೆ ಪ್ರಶ್ನೋತ್ತರ ಕಲಾಪದ ವೇಳೆ ಸುಮಲತಾ ಒತ್ತಾಯಿಸಿದ್ದಾರೆ.

ಮಂಡ್ಯ: 11 ಕಲ್ಲು ಗಣಿ ಗುತ್ತಿಗೆಗಳ ರದ್ದು, 11 ಹೊಸ ಚೆಕ್‌ಪೋಸ್ಟ್ ಸ್ಥಾಪನೆ ಮಂಡ್ಯ  ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಜುಲೈ 28 ರಂದು ನಡೆದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ( ಗಣಿ ) ಸಭೆಯಲ್ಲಿ ಅವಧಿ ವಿಸ್ತರಿಸಿ ನೀಡಿದ ಕಲ್ಲು ಗಣಿಗುತ್ತಿಗೆಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಪ್ರಾಧಿಕಾರದಿಂದ ಇದುವರೆಗೂ ಪರಿಸರ ವಿಮೋಚನಾ ಪತ್ರವನ್ನು ಪಡೆದು ಕಚೇರಿಗೆ ಹಾಜರುಪಡಿಸದೆ ಇರುವ 11 ಕಲ್ಲು ಗಣಿ ಗುತ್ತಿಗೆಗಳನ್ನು ರದ್ದುಪಡಿಸಲು ನಿರ್ಣಯಿಸಲಾಗಿರುತ್ತದೆ. ಅದರಂತೆ ಮಂಡ್ಯ ಜಿಲ್ಲೆಯಾದ್ಯಂತ ಪರಿಸರ ವಿಮೋಚನಾ ಪತ್ರ ಪಡೆಯದೆ ಇದ್ದ 11 ಕಲ್ಲು ಗಣಿ ಗುತ್ತಿಗೆಗಳನ್ನು ಜುಲೈ 31 ರಿಂದ ಜಾರಿಗೆ ಬರುವಂತೆ ರದ್ದುಪಡಿಸಲಾಗಿರುತ್ತದೆ .

ಪಾಂಡವಪುರ ತಾಲ್ಲೂಕು ಬೇಬಿ ಬೆಟ್ಟದ ಕಾವಲು ಗ್ರಾಮದ ವ್ಯಾಪ್ತಿಯಲ್ಲಿನ 11 ಕ್ರಷರ್ ಘಟಕಗಳನ್ನು ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಜಿಲ್ಲಾ ಕಲ್ಲು ಪುಡಿ ಮಾಡುವ ಘಟಕಗಳ ಲೈಸೆನ್ಸಿಂಗ್ ಮತ್ತು ನಿಯಂತ್ರಣ ಪ್ರಾಧಿಕಾರ, ಮಂಡ್ಯ ಜಿಲ್ಲೆ ರವರು ಜುಲೈ 28 ರಂದು ನಡೆದ ಜಿಲ್ಲಾ ಕಲ್ಲು ಪುಡಿ ಮಾಡುವ ಘಟಕಗಳ ಲೈಸೆನ್ಸಿಂಗ್ ಮತ್ತು ನಿಯಂತ್ರಣ ಪ್ರಾಧಿಕಾರ ಸಭೆಯ ತೀರ್ಮಾನದಂತೆ ರದ್ದುಪಡಿಸಿರುತ್ತಾರೆ.

ಹಿರಿಯ ಭೂವಿಜ್ಞಾನಿ ಮತ್ತು ಸದಸ್ಯ ಕಾರ್ಯದರ್ಶಿ, ಜಿಲ್ಲಾ ಕಲ್ಲು ಪುಡಿ ಮಾಡುವ ಘಟಕಗಳ ಲೈಸೆನ್ಸಿಂಗ್ ಮತ್ತು ನಿಯಂತ್ರಣ ಪ್ರಾಧಿಕಾರ, ಮಂಡ್ಯ ಜಿಲ್ಲೆ ಇವರು ಕ್ರಷರ್ ಪರವಾನಿಗೆಗೆ ಸಹಿ ಮಾಡಿ ವಿತರಿಸಿರುವ ಕ್ರಷರ್ ಪರವಾನಿಗೆಗಳನ್ನು ಜುಲೈ 28 ರಂದು ನಡೆದ ಜಿಲ್ಲಾ ಕಲ್ಲುಪುಡಿ ಮಾಡುವ ಘಟಕಗಳ ಲೈಸೆನ್ಸಿಂಗ್ ಮತ್ತು ನಿಯಂತ್ರಣ ಪ್ರಾಧಿಕಾರ ಸಭೆಯಲ್ಲಿ ರದ್ದುಪಡಿಸಲು ತೀರ್ಮಾನಿಸಲಾಗಿದ್ದು, ಅದರಂತೆ ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಜಿಲ್ಲಾ ಕಲ್ಲುಪುಡಿ ಮಾಡುವ ಘಟಕಗಳ ಲೈಸೆನ್ಸಿಂಗ್ ಮತ್ತು ನಿಯಂತ್ರಣ ಪ್ರಾಧಿಕಾರ, ಮಂಡ್ಯ ಜಿಲ್ಲೆ ರವರು 22 ಕ್ರಷರ್‌ಗಳ ಕ್ರಷರ್‌ ಪರವಾನಿಗೆ ( ಫಾರಂ- A ) ಯನ್ನು ರದ್ದುಪಡಿಸಿರುತ್ತಾರೆ .

ಇದನ್ನೂ ಓದಿ: ಅಂಬರೀಷ್​-ಸುಮಲತಾ ಹಾದಿಯಲ್ಲೇ ನಡೆಯಲಿದ್ದಾರಾ ಅಭಿಷೇಕ್​? ಚುನಾವಣೆಗೆ ಸ್ಪರ್ಧೆ ಮಾಡುವ ಸೂಚನೆ ನೀಡಿದ ಅಂಬಿ ಕುಡಿ

Sumalatha Press Meet: ಮಂಡ್ಯದಲ್ಲಿನ ಅಕ್ರಮ ಗಣಿಗಾರಿಕೆ ಬಗ್ಗೆ ರಾಜ್ಯಪಾಲರಿಗೆ ಮಾಹಿತಿ: ಸಂಸದೆ ಸುಮಲತಾ

(Mandya MP Sumalatha Ambareesh on Illegal Mining at Loksabha)

Published On - 3:15 pm, Fri, 6 August 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್