Tripura Chief Minister: ಮಾಣಿಕ್ ಸಹಾ 2ನೇ ಬಾರಿಗೆ ತ್ರಿಪುರಾ ಮುಖ್ಯಮಂತ್ರಿ: ಮಾ.8ಕ್ಕೆ ಪ್ರಮಾಣ ವಚನ
Manik Saha: ತ್ರಿಪುರಾ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ 2ನೇ ಬಾರಿಗೆ ಮುಂದುವರಿಯಲಿದ್ದಾರೆ. ಇಂದು ಸಂಜೆ ಬಿಜೆಪಿ ಪಕ್ಷದ ಶಾಸಕರ ಸಭೆಯಲ್ಲಿ, ಮಾಣಿಕ್ ಸಹಾ ಅವರನ್ನು ಶಾಸಕಾಂಗ ಸಭೆಯ ನಾಯಕರನ್ನಾಗಿ ನೇಮಕ ಮಾಡಲಾಗಿದೆ.
ಅಗರ್ತಲ: ತ್ರಿಪುರಾ (Tripura) ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ (Manik Saha) 2ನೇ ಬಾರಿಗೆ ಮುಂದುವರಿಯಲಿದ್ದಾರೆ. ಇಂದು ಸಂಜೆ ಬಿಜೆಪಿ ಪಕ್ಷದ ಶಾಸಕರ ಸಭೆಯಲ್ಲಿ, ಮಾಣಿಕ್ ಸಹಾ ಅವರನ್ನು ಶಾಸಕಾಂಗ ಸಭೆಯ ನಾಯಕರನ್ನಾಗಿ ನೇಮಕ ಮಾಡಲಾಗಿದೆ. ಇದೀಗ 2ನೇ ಅವಧಿಗೆ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಮುಖ್ಯಮಂತ್ರಿ ಮತ್ತು ನೂತನ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭ ಬುಧವಾರ ನಡೆಯಲಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಭಾಗವಹಿಸಲಿದ್ದಾರೆ.
Tripura | Manik Saha has been elected as legislative party leader by BJP MLAs. He will be the CM of the state.
(File Pic) pic.twitter.com/ItKNX1VI3k
— ANI (@ANI) March 6, 2023
Published On - 6:39 pm, Mon, 6 March 23