ಮಣಿಪುರ(Manipur)ದಲ್ಲಿ ಹಿಂಸಾಚಾರ ಮುಂದುವರೆದಿದೆ, ಎರಡು ಪ್ರತ್ಯೇಕ ಘಟನೆಗಳಲ್ಲಿ ಅಪರಿಚಿತ ದುಷ್ಕರ್ಮಿಗಳು ಐವರು ನಾಗರಿಕರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಹೇಳಿಕೆಯ ಪ್ರಕಾರ, ಬಿಷ್ಣುಪುರ್ ಜಿಲ್ಲೆಯ ನಿಂಗ್‌ತೌಖೋಂಗ್ ಖಾ ಖುನೌದಲ್ಲಿ ನಾಲ್ವರು ನಾಗರಿಕರು ಮತ್ತು ಕಾಂಗ್‌ಪೋಕ್ಪಿ ಜಿಲ್ಲೆಯ ಕಾಂಗ್‌ಚುಪ್ ಚಿಂಗ್‌ಖಾಂಗ್‌ನಲ್ಲಿ ಒಬ್ಬರನ್ನು ಅಪರಿಚಿತ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.
ಬಿಷ್ಣುಪುರ ಜಿಲ್ಲೆಯಲ್ಲಿ ಐವರನ್ನು ಹತ್ಯೆ ಮಾಡಿದ್ದ ಹಂತಕರನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಓಯಿನಮ್ ಬಮೊನ್‌ಜಾವೊ ಸಿಂಗ್ (61), ಅವರ ಮಗ ಒಯಿನಮ್ ಮಣಿತೊಂಬ ಸಿಂಗ್ (32), ಥಿಯಂ ಸೋಮೇಂದ್ರೊ ಸಿಂಗ್ (55) ಮತ್ತು ನಿಂಗ್‌ತೌಜಮ್ ನಬದ್ವೀಪ್ ಸಿಂಗ್ (40) ಎಂದು ಗುರುತಿಸಲಾಗಿದೆ.
ಕಾಂಗ್‌ಪೋಕ್ಪಿಯಲ್ಲಿ ಮೃತಪಟ್ಟ ನಾಗರಿಕನನ್ನು ಥಿಯಮ್ ಕೊಂಜಿನ್ ನಿವಾಸಿ ತಖೆಲ್ಲಂಬಮ್ ಮನೋರಂಜನ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಕಾಂಗ್‌ಚುಪ್ ಚಿಂಗ್‌ಖಾಂಗ್ ಬಳಿಯ ಬಂಕರ್ ಹಿಲ್ಸ್‌ನಲ್ಲಿ ಮನೋರಂಜನ್ ಮೃತದೇಹ ಪತ್ತೆಯಾಗಿದೆ.
ಮತ್ತಷ್ಟು ಓದಿ: ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಕಮಾಂಡೋ ಹತ್ಯೆ
ಬುಧವಾರ ಮತ್ತು ಗುರುವಾರ ಮಧ್ಯರಾತ್ರಿ ಶಸ್ತ್ರಸಜ್ಜಿತ ದುಷ್ಕರ್ಮಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ರಾತ್ರಿ, ತೌಬಲ್ ಜಿಲ್ಲೆಯ ಖಂಗಾಬೋಕ್‌ನಲ್ಲಿ ಗುಂಪೊಂದು ಗಡಿ ಭದ್ರತಾ ಪಡೆ ಮೇಲೆ ಗುಂಡು ಹಾರಿಸಿತ್ತು, ಘಟನೆಯಲ್ಲಿ ಮೂವರು ಯೋಧರು ಗಾಯಗೊಂಡಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ