Manipur violence: ಹಿಂಸಾಚಾರದಲ್ಲಿ ಹೊತ್ತಿ ಉರಿದ ಮಣಿಪುರ, ಪರಿಸ್ಥಿತಿ ಹದಗೆಟ್ಟರೆ ಕಂಡಲ್ಲಿ ಗುಂಡು ಹಾರಿಸಲು ಆದೇಶ
ಮೈತಿ ಪ್ರಾಬಲ್ಯದ ಇಂಫಾಲ್ ಪಶ್ಚಿಮ, ಕಾಕ್ಚಿಂಗ್, ತೌಬಲ್, ಜಿರಿಬಾಮ್ ಮತ್ತು ಬಿಷ್ಣುಪುರ್ ಜಿಲ್ಲೆಗಳಲ್ಲಿ ಮತ್ತು ಬುಡಕಟ್ಟು ಪ್ರಾಬಲ್ಯದ ಚುರಾಚಂದ್‌ಪುರ, ಕಾಂಗ್‌ಪೋಕ್ಪಿ ಮತ್ತು ತೆಂಗ್‌ನೌಪಾಲ್ ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ.
ಎಲ್ಲ ರೀತಿಯ ಮನವೊಲಿಕೆ, ಎಚ್ಚರಿಕೆಗಳು ಮುಗಿದರೆ, ಹಿಂಸಾಚಾರ ಪೀಡಿತ ಮಣಿಪುರದಲ್ಲಿ (Manipur) ಪರಿಸ್ಥಿತಿ ಕೈ ಮೀರಿ ಹೋದರೆ ಕಂಡಲ್ಲಿ ಗುಂಡು ಹಾರಿಸಲು (shoot-at-sight orders) ಸರ್ಕಾರ ಆದೇಶಿಸಿದೆ. ಬುಡಕಟ್ಟು ಅಲ್ಲದ ಮೈತಿ ಸಮುದಾಯಕ್ಕೆ (non-tribal Meiteis)ಎಸ್‌ಟಿ ಸ್ಥಾನಮಾನದ ಬೇಡಿಕೆಯನ್ನು ಪ್ರತಿಭಟಿಸಿ ಆಲ್ ಟ್ರೈಬಲ್ ಸ್ಟೂಡೆಂಟ್ ಯೂನಿಯನ್ ಮಣಿಪುರ ಆಯೋಜಿಸಿದ್ದ ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆಯ ಹಿಂಸಾಚಾರಕ್ಕೆ ತಿರುಗಿದ್ದು , ಕಂಡಲ್ಲಿ ಗುಂಡು ಹಾರಿಸಲು ಸರ್ಕಾರ ಆದೇಶಿಸಿದೆ.
ಮೇ 3, 2023 ರಂದು ನಡೆದ ಬುಡಕಟ್ಟು ಒಗ್ಗಟ್ಟಿನ ಮಾರ್ಚ್ನಲ್ಲಿ ಸಂಭವಿಸಿದ ಹಿಂಸಾತ್ಮಕ ಘಟನೆಗಳ ನಂತರ ರಾಜ್ಯದಲ್ಲಿ ಸಾರ್ವಜನಿಕ ಸುವ್ಯವಸ್ಥೆ ಮತ್ತು ನೆಮ್ಮದಿಯನ್ನು ಕಾಪಾಡುವ ಸಲುವಾಗಿ, ಮಣಿಪುರದ ರಾಜ್ಯಪಾಲರು ಎಲ್ಲಾ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು, ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ಗಳು ಮತ್ತು ಎಲ್ಲಾ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್‌ಗಳು/ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್‌ಗಳಿಗೆ ಸಂಬಂಧಿಸಿದ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಪರಿಸ್ಥಿತಿ ಕೈ ಮೀರಿದ ಸಂದರ್ಭದಲ್ಲಿ ಆದೇಶಗಳನ್ನು ಹೊರಡಿಸಲು ಅಧಿಕಾರ ನೀಡಿದ್ದಾರೆ. CrPC, 1973 ರ ಅಡಿಯಲ್ಲಿ ಕಾನೂನಿನ ನಿಬಂಧನೆಗಳ ಅಡಿಯಲ್ಲಿ ಎಲ್ಲಾ ರೀತಿಯ ಮನವೊಲಿಕೆ, ಎಚ್ಚರಿಕೆ ಮುಗಿದಿದ್ದು, ಪರಿಸ್ಥಿತಿ ನಿಯಂತ್ರಣಾತೀತವಾದರೆ ಮಾತ್ರ ಈ ಆದೇಶವನ್ನು ಬಳಸಬೇಕು ಎಂದು ಹೇಳಲಾಗಿದೆ.
My humble appeal to everyone in the State to cooperate with the Government in maintaining peace & harmony at this hour. pic.twitter.com/qViqbuflWr
— N.Biren Singh (@NBirenSingh) May 4, 2023
ರಾಜ್ಯದ ಜನಸಂಖ್ಯೆಯ ಶೇ 40ರಷ್ಟಿರುವ ಬುಡಕಟ್ಟು ಜನಾಂಗದವರು ನಡೆಸಿದ ಮೆರವಣಿಗೆಗೆ ಸಂಬಂಧಿಸಿದಂತೆ ಮಣಿಪುರದಲ್ಲಿ ಬುಧವಾರ ಸಮುದಾಯಗಳ ನಡುವೆ ಘರ್ಷಣೆಗಳು ನಡೆದವು. ಅವರು ಮೈತಿ ಸಮುದಾಯದ ಎಸ್‌ಟಿ ಸ್ಥಾನಮಾನವನ್ನು ವಿರೋಧಿಸುತ್ತಿದ್ದಾರೆ. ಮೈತಿ ಸಮುದಾಯದ ಬೇಡಿಕೆಯ ಮೇರೆಗೆ ಕೇಂದ್ರಕ್ಕೆ ಶಿಫಾರಸು ಕಳುಹಿಸುವಂತೆ ಮಣಿಪುರ ಹೈಕೋರ್ಟ್ ಇತ್ತೀಚೆಗೆ ರಾಜ್ಯ ಸರ್ಕಾರವನ್ನು ಕೇಳಿದೆ.
ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ದಾಳಿಗಳು ಮತ್ತು ಪ್ರತೀಕಾರದ ದಾಳಿಗಳು ನಡೆಯುತ್ತಿವೆ. ಹಿಂಸಾಚಾರ ಪೀಡಿತ ಪ್ರದೇಶಗಳಿಂದ ಸುಮಾರು 5,000 ಜನರನ್ನು ಸ್ಥಳಾಂತರಿಸಲಾಗಿದೆ.
ಇದನ್ನೂ ಓದಿ: ಮಣಿಪುರ ಹಿಂಸಾಚಾರ; ಕಲಬುರಗಿ ಚುನಾವಣಾ ಪ್ರಚಾರ ರದ್ದು, ದೆಹಲಿಗೆ ತೆರಳಿದ ಅಮಿತ್ ಶಾ
ತಪ್ಪು ತಿಳುವಳಿಕೆಯಿಂದ ಹಿಂಸಾಚಾರ ನಡೆದಿದೆ ಎಂದು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಹೇಳಿದ್ದಾರೆ. ಮೈತಿ ಪ್ರಾಬಲ್ಯದ ಇಂಫಾಲ್ ಪಶ್ಚಿಮ, ಕಾಕ್ಚಿಂಗ್, ತೌಬಲ್, ಜಿರಿಬಾಮ್ ಮತ್ತು ಬಿಷ್ಣುಪುರ್ ಜಿಲ್ಲೆಗಳಲ್ಲಿ ಮತ್ತು ಬುಡಕಟ್ಟು ಪ್ರಾಬಲ್ಯದ ಚುರಾಚಂದ್‌ಪುರ, ಕಾಂಗ್‌ಪೋಕ್ಪಿ ಮತ್ತು ತೆಂಗ್‌ನೌಪಾಲ್ ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ