Manipur Landslide: ಮಣಿಪುರದಲ್ಲಿ ಭಾರೀ ಭೂಕುಸಿತ; ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆ; 60ಕ್ಕೂ ಹೆಚ್ಚು ಮಂದಿ ನಾಪತ್ತೆ
ಮಣಿಪುರದ ನೋನಿ ಜಿಲ್ಲೆಯ ತುಪುಲ್ ರೈಲು ನಿಲ್ದಾಣದ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಗ್ರಾಮಸ್ಥರು, ಸೇನೆ ಮತ್ತು ರೈಲ್ವೆ ಸಿಬ್ಬಂದಿ ಮತ್ತು ಕಾರ್ಮಿಕರು ಸೇರಿದಂತೆ 60 ಜನರು ಅವಶೇಷಗಳಡಿ ಸಿಲುಕಿದ್ದಾರೆ ಎನ್ನಲಾಗಿದೆ.
ಮಣಿಪುರ: ಮಣಿಪುರದಲ್ಲಿ ಭಾರೀ ಮಳೆಯಿಂದ ಭೂಕುಸಿತ (Manipur Landslide) ಸಂಭವಿಸಿದ್ದು, ಸಾವಿನ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಮಣಿಪುರದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಅವಶೇಷಗಳಡಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಅವಶೇಷಗಳಡಿ ಸಿಲುಕಿದ್ದ 23 ಜನರನ್ನು ಹೊರತರಲಾಗಿದ್ದು, ಅವರಲ್ಲಿ 14 ಮಂದಿ ಸಾವನ್ನಪ್ಪಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.
ಅವಶೇಷಗಳಡಿ ಎಷ್ಟು ಜನ ಸಿಲುಕಿದ್ದಾರೆ ಎಂಬ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ಗ್ರಾಮಸ್ಥರು, ಸೇನೆ ಮತ್ತು ರೈಲ್ವೆ ಸಿಬ್ಬಂದಿ ಮತ್ತು ಕಾರ್ಮಿಕರು ಸೇರಿದಂತೆ 60 ಜನರು ಅವಶೇಷಗಳಡಿ ಸಿಲುಕಿದ್ದಾರೆ ಎನ್ನಲಾಗಿದೆ. ಪ್ರತಿಕೂಲ ಹವಾಮಾನದ ನಡುವೆಯೂ ಭಾರತೀಯ ಸೇನೆಯ ಅಸ್ಸಾಂ ರೈಫಲ್ಸ್ ಮತ್ತು ಪ್ರಾದೇಶಿಕ ಸೇನೆಯ ಪಡೆಗಳು ದಿನವಿಡೀ ಭೂಕುಸಿತಕ್ಕೆ ಒಳಗಾದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರೆಸಿವೆ. ಮಣಿಪುರದ ನೋನಿ ಜಿಲ್ಲೆಯ ತುಪುಲ್ ರೈಲು ನಿಲ್ದಾಣದ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ.
Last night a massive landslide stuck at the Tupul Yard Railway Construction Camp in Noney District, Manipur where the entire B Company of 107 (TA) 11 Gorkha Rifles, railway officials and other civilians have been buried. pic.twitter.com/uYN4FOEkQP
— Raju Bista (@RajuBistaBJP) June 30, 2022
ಮಣಿಪುರದಲ್ಲಿ ನಿರಂತರ ಮಳೆಯಿಂದಾಗಿ ಉಂಟಾದ ಭೂಕುಸಿತದ ಪರಿಸ್ಥಿತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರೊಂದಿಗೆ ಮಾತುಕತೆ ನಡೆಸಿ, ಮಾಹಿತಿ ಪಡೆದಿದ್ದಾರೆ. ಹಾಗೇ, ಕೇಂದ್ರ ಸರ್ಕಾರದಿಂದ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದ್ದಾರೆ.
ಇದನ್ನೂ ಓದಿ: Manipur Landslide ಮಣಿಪುರದಲ್ಲಿ ಭಾರೀ ಭೂಕುಸಿತ: 8 ಸಾವು, 50ಕ್ಕೂ ಹೆಚ್ಚು ಮಂದಿ ನಾಪತ್ತೆ
Disturbing news coming from #Manipur . #ManipurLandslide has left 7 armymen & 1 railway men dead. 20 army personal including 1 officer missin,Search operation on. Shame on media! None covered it. May God be with our men soldiers.let’s pray for the safety of our men.#JaiHind pic.twitter.com/W4eIFXvavB
— Major Madhan Kumar ?? (@major_madhan) June 30, 2022
Sad to hear unfortunate news of massive landslide in Noney district of #Manipur . My heartfelt condolences to families who have lost their loved ones ??
Prayers for speedy recovery and safety of injured & missing. May Almighty give strength to the efforts of rescuing agencies. pic.twitter.com/8wVVFLZa73
— Sonal Goel IAS (@sonalgoelias) June 30, 2022
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೂಡ ಗುರುವಾರ ಮಣಿಪುರದಲ್ಲಿ ಭೂಕುಸಿತದಿಂದ ಜನರು ಮತ್ತು ಸಶಸ್ತ್ರ ಪಡೆಗಳ ಸಿಬ್ಬಂದಿಯ ಸಾವಿಗೆ ಸಂತಾಪ ಸೂಚಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವ ಜನರ ಸುರಕ್ಷತೆಗಾಗಿ ಪ್ರಾರ್ಥಿಸುವುದಾಗಿ ಟ್ವೀಟ್ ಮಾಡಿದ್ದಾರೆ. ಮಣಿಪುರದ ನೋನಿಯಲ್ಲಿ ಭೂಕುಸಿತದಿಂದ ನಾಗರಿಕರು ಮತ್ತು ಸಶಸ್ತ್ರ ಪಡೆಗಳ ಸಿಬ್ಬಂದಿಯ ಜೀವಹಾನಿ ಅತ್ಯಂತ ದುರದೃಷ್ಟಕರವಾಗಿದೆ. ಅಗಲಿದ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ನಡೆಯುತ್ತಿರುವ ಜನರ ಸುರಕ್ಷತೆಗಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ರಾಷ್ಟ್ರಪತಿ ಕೋವಿಂದ್ ಟ್ವೀಟ್ ಮಾಡಿದ್ದಾರೆ.
The loss of lives of civilians and Armed Forces personnel due to a landslide in Noney, Manipur is extremely unfortunate. My heartfelt condolences to the bereaved families. I pray for the safety of the people for whom rescue and relief operations are underway.
— President of India (@rashtrapatibhvn) June 30, 2022
ಬುಧವಾರ ರಾತ್ರಿ ತೂಪುಲ್ ಯಾರ್ಡ್ ರೈಲ್ವೆ ನಿರ್ಮಾಣ ಶಿಬಿರದಲ್ಲಿ ಈ ಘಟನೆ ನಡೆದಿದೆ. ಭೂಕುಸಿತ ಪೀಡಿತ ಪ್ರದೇಶದಿಂದ ಇದುವರೆಗೆ ಟೆರಿಟೋರಿಯಲ್ ಆರ್ಮಿಯ 13 ಯೋಧರು ಮತ್ತು ಐವರು ನಾಗರಿಕರನ್ನು ರಕ್ಷಿಸಲಾಗಿದೆ.