Manipur Landslide: ಮಣಿಪುರದಲ್ಲಿ ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 42ಕ್ಕೆ ಏರಿಕೆ; 27 ಜನ ಇನ್ನೂ ನಾಪತ್ತೆ

ಮಣಿಪುರದ ನೋನಿ ಜಿಲ್ಲೆಯಲ್ಲಿ ರೈಲ್ವೆ ನಿರ್ಮಾಣ ಸ್ಥಳದಲ್ಲಿ ಸಂಭವಿಸಿದ ಭಾರೀ ಭೂಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಭಾನುವಾರ 42ಕ್ಕೆ ಏರಿಕೆಯಾಗಿದೆ. ಇನ್ನೂ 25 ಜನರಿಗಾಗಿ ಶೋಧ ಕಾರ್ಯಗಳು ನಡೆಯುತ್ತಿದೆ.

Manipur Landslide: ಮಣಿಪುರದಲ್ಲಿ ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 42ಕ್ಕೆ ಏರಿಕೆ; 27 ಜನ ಇನ್ನೂ ನಾಪತ್ತೆ
ಮಣಿಪುರದಲ್ಲಿ ಭೂಕುಸಿತವಾದ ಸ್ಥಳ
Image Credit source: DNA
TV9kannada Web Team

| Edited By: Sushma Chakre

Jul 04, 2022 | 10:13 AM

ಮಣಿಪುರ: ಮಣಿಪುರದಲ್ಲಿ ಭಾರೀ ಮಳೆಯಿಂದ ಭೂಕುಸಿತ (Manipur Landslide) ಸಂಭವಿಸಿದ್ದು, ಸಾವಿನ ಸಂಖ್ಯೆ 42ಕ್ಕೆ ಏರಿಕೆಯಾಗಿದೆ. ಮಣಿಪುರದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಅವಶೇಷಗಳಡಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಭಾನುವಾರ ಇನ್ನೂ ಮೂರು ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಮಣಿಪುರದ ನೋನಿ ಜಿಲ್ಲೆಯ ರೈಲ್ವೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತದಿಂದ ಒಟ್ಟು ಸಾವುನೋವುಗಳ ಸಂಖ್ಯೆ 42ಕ್ಕೆ ಏರಿಕೆಯಾಗಿದೆ. ಇನ್ನೂ 27 ಜನರಿಗಾಗಿ ಶೋಧ ಪ್ರಯತ್ನಗಳು ನಡೆಯುತ್ತಿವೆ.

ಶನಿವಾರ ರಾತ್ರಿಯಿಂದ ತುಪುಲ್ ಪ್ರದೇಶದಲ್ಲಿ ಭಾರೀ ಮಳೆ ಮತ್ತು ಭೂಕುಸಿತಗಳು ಸಂಭವಿಸಿದ್ದು, ಇದು ಶೋಧ ಕಾರ್ಯಾಚರಣೆಯ ಮೇಲೆ ಪರಿಣಾಮ ಬೀರಿವೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಮಣಿಪುರದ ನೋನಿ ಜಿಲ್ಲೆಯಲ್ಲಿ ರೈಲ್ವೆ ನಿರ್ಮಾಣ ಸ್ಥಳದಲ್ಲಿ ಸಂಭವಿಸಿದ ಭಾರೀ ಭೂಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಭಾನುವಾರ 42ಕ್ಕೆ ಏರಿಕೆಯಾಗಿದೆ. ಇನ್ನೂ 25 ಜನರಿಗಾಗಿ ಶೋಧ ಕಾರ್ಯಗಳು ನಡೆಯುತ್ತಿದ್ದು, ಇನ್ನೂ ಮೂರು ಮೃತದೇಹಗಳು ಪತ್ತೆಯಾಗಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾಪತ್ತೆಯಾದ ಉಳಿದ 6 ಪ್ರಾದೇಶಿಕ ಸೇನಾ ಸಿಬ್ಬಂದಿ ಮತ್ತು 19 ನಾಗರಿಕರನ್ನು ಹುಡುಕುವ ಪ್ರಯತ್ನವು ಮುಂದುವರಿದಿದೆ. ಸೇನೆ, ಅಸ್ಸಾಂ ರೈಫಲ್ಸ್, ಟೆರಿಟೋರಿಯಲ್ ಆರ್ಮಿ, ಎಸ್‌ಡಿಆರ್‌ಎಫ್ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಶೋಧ ಕಾರ್ಯಾಚರಣೆಯ ಭಾಗವಾಗಿದೆ.

ಇದನ್ನೂ ಓದಿ: Manipur Landslide: ಮಣಿಪುರದಲ್ಲಿ ಭಾರೀ ಭೂಕುಸಿತ; ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆ; 60ಕ್ಕೂ ಹೆಚ್ಚು ಮಂದಿ ನಾಪತ್ತೆ

ಕಳೆದ ರಾತ್ರಿ ಭಾರೀ ಮಳೆ ಮತ್ತು ತಾಜಾ ಭೂಕುಸಿತದಿಂದಾಗಿ ಪ್ರತಿಕೂಲ ಹವಾಮಾನದ ಹೊರತಾಗಿಯೂ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮಣಿಪುರದ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರ ಘೋಷಿಸಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ರಾಜ್ಯದ 9 ಯೋಧರು ಮಣಿಪುರದ ಭೂಕುಸಿತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಮಣಿಪುರದ ಭೂಕುಸಿತದಲ್ಲಿ ಸಾವನ್ನಪ್ಪಿದವರಲ್ಲಿ ಡಾರ್ಜಿಲಿಂಗ್ ಬೆಟ್ಟಗಳ ಒಂಬತ್ತು ಯೋಧರು (107 ಪ್ರಾದೇಶಿಕ ಸೇನಾ ಘಟಕ) ಇದ್ದಾರೆ ಎಂದು ತಿಳಿದು ಆಘಾತವಾಗಿದೆ. ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ: Manipur Landslide ಮಣಿಪುರದಲ್ಲಿ ಭಾರೀ ಭೂಕುಸಿತ: 8 ಸಾವು, 50ಕ್ಕೂ ಹೆಚ್ಚು ಮಂದಿ ನಾಪತ್ತೆ

ಶನಿವಾರ ರಾತ್ರಿ ತುಪುಲ್ ಪ್ರದೇಶದಲ್ಲಿ ಭಾರೀ ಮಳೆ ಮತ್ತು ತಾಜಾ ಭೂಕುಸಿತಗಳು ಸಂಭವಿಸಿದ ಹಿನ್ನೆಲೆಯಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದುವರೆಗೆ ಪತ್ತೆಯಾದ 42 ಜನರಲ್ಲಿ 27 ಮಂದಿ ಪ್ರಾದೇಶಿಕ ಸೇನಾ ಸಿಬ್ಬಂದಿಯಾಗಿದ್ದಾರೆ. ಅವರಲ್ಲಿ 17 ಮಂದಿ ನಾಗರಿಕರು ಸೇರಿದ್ದಾರೆ ಎಂದು ಗುವಾಹಟಿಯ ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

ಇಲ್ಲಿಯವರೆಗೆ, 13 ಪ್ರಾದೇಶಿಕ ಸೇನಾ ಸಿಬ್ಬಂದಿ ಮತ್ತು ಐದು ನಾಗರಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. 7 ಪ್ರಾದೇಶಿಕ ಸೇನಾ ಸಿಬ್ಬಂದಿಯ ಮೃತದೇಹಗಳನ್ನು ಅವರ ಸ್ವಗ್ರಾಮಗಳಾದ ಕೊಲ್ಕತ್ತಾ ಮತ್ತು ಪಶ್ಚಿಮ ಬಂಗಾಳದ ಬಾಗ್ಡೋಗ್ರಾ ಮತ್ತು ತ್ರಿಪುರಾದ ಅಗರ್ತಲಾಕ್ಕೆ ಕಳುಹಿಸಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ. ಇಂಫಾಲದಲ್ಲಿ ಅವರಿಗೆ ಸಂಪೂರ್ಣ ಸೇನಾ ಗೌರವವನ್ನು ನೀಡಲಾಯಿತು.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada