AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರದಲ್ಲಿ ಕಾಂಗ್ರೆಸ್​ ಸಮಾವೇಶದ ವೇಳೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

ಮಣಿಪುರದ ಉಖ್ರುಲ್​ನಲ್ಲಿ ನಡೆದ ಕಾಂಗ್ರೆಸ್​ ಸಮಾವೇಶದಲ್ಲಿ ಗುಂಡಿನ ಸದ್ದು ಕೇಳಿದೆ. ಕಾಂಗ್ರೆಸ್​ ಅಭ್ಯರ್ಥಿ ಆಲ್ಫ್ರೆಡ್ ಕಂಗಮ್ ಮೇಲೆ ಶಸ್ತ್ರ ಸಜ್ಜಿತ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.

ಮಣಿಪುರದಲ್ಲಿ ಕಾಂಗ್ರೆಸ್​ ಸಮಾವೇಶದ ವೇಳೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ
Image Credit source: India Today
ನಯನಾ ರಾಜೀವ್
|

Updated on: Mar 20, 2024 | 7:47 AM

Share

ಕಾಂಗ್ರೆಸ್​(Congress)ನ ಸಮಾವೇಶವೊಂದರಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಮಣಿಪುರದ ಉಖ್ರುಲ್​ನಲ್ಲಿ ನಡೆದಿದೆ. ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಂಪಿಸಿಸಿ ಅಧ್ಯಕ್ಷ ಕೆ.ಮೇಘಚಂದ್ರ, ಚಿಂಗೈ ವಿಧಾನಸಭಾ ಕ್ಷೇತ್ರದ ಟೀನೆಮ್ ಗ್ರಾಮದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಉಖ್ರುಲ್ ಜಿಲ್ಲೆಯ (ಮಣಿಪುರದ ಹೊರ ಕ್ಷೇತ್ರ) ಕಾಂಗ್ರೆಸ್ ಅಭ್ಯರ್ಥಿ ಆಲ್ಫ್ರೆಡ್ ಕಂಗಮ್ ಆರ್ಥರ್ ಮೇಲೆ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.

ಉಖ್ರುಲ್‌ನ ಪಯೋರಿ ಶಿರುಯಿ ಗ್ರಾಮದ ಟಿಕೆ ವುಡ್‌ಲ್ಯಾಂಡ್ ರೆಸಾರ್ಟ್‌ನಲ್ಲಿ ಮಾಜಿ ಶಾಸಕ ಆಲ್ಫ್ರೆಡ್ ಮೇಲೆ ಶಸ್ತ್ರಸಜ್ಜಿತ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

ಅಭ್ಯರ್ಥಿಯಾಗಿ ಆಲ್ಫ್ರೆಡ್ ಕಂಗಮ್ ಆರ್ಥರ್ ಕಳೆದ ಮೂರು ದಿನಗಳಿಂದ ಚುನಾವಣಾ ಪ್ರಚಾರದ ಭಾಗವಾಗಿ ಜನರನ್ನು ಭೇಟಿಯಾಗುತ್ತಿದ್ದಾರೆ ಎಂದು ಮೇಘಚಂದ್ರ ಹೇಳಿದರು.

ಮತ್ತಷ್ಟು ಓದಿ: ಅಮೆರಿಕದಲ್ಲಿ ಮನೆಯಲ್ಲಿ ಗುಂಡಿನ ದಾಳಿ; 6 ತಿಂಗಳ ಮಗು, ತಾಯಿ ಸೇರಿ 6 ಜನ ಸಾವು

ಈ ಪರಿಸ್ಥಿತಿಯಲ್ಲಿ ಮಾರ್ಚ್ 18 ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಟಿಕೆ ವುಡ್‌ಲ್ಯಾಂಡ್ ರೆಸಾರ್ಟ್‌ನಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.

ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಟೀನೆಮ್ ಗ್ರಾಮದಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಆಲ್ಫ್ರೆಡ್ ಮೇಲೆ ಮತ್ತೆ ದಾಳಿ ನಡೆಸಿದ್ದಾರೆ ಎಂದು ಎಂಪಿಸಿಸಿ ಅಧ್ಯಕ್ಷರು ತಿಳಿಸಿದ್ದಾರೆ. ಇದೇ ಪರಿಸ್ಥಿತಿ ಮುಂದುವರಿದರೆ ಮಣಿಪುರದಲ್ಲಿ ಚುನಾವಣೆ ನಡೆಯುವುದಿಲ್ಲ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!