ಕಾಂಗ್ರೆಸ್(Congress)ನ ಸಮಾವೇಶವೊಂದರಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಮಣಿಪುರದ ಉಖ್ರುಲ್ನಲ್ಲಿ ನಡೆದಿದೆ. ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಂಪಿಸಿಸಿ ಅಧ್ಯಕ್ಷ ಕೆ.ಮೇಘಚಂದ್ರ, ಚಿಂಗೈ ವಿಧಾನಸಭಾ ಕ್ಷೇತ್ರದ ಟೀನೆಮ್ ಗ್ರಾಮದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಉಖ್ರುಲ್ ಜಿಲ್ಲೆಯ (ಮಣಿಪುರದ ಹೊರ ಕ್ಷೇತ್ರ) ಕಾಂಗ್ರೆಸ್ ಅಭ್ಯರ್ಥಿ ಆಲ್ಫ್ರೆಡ್ ಕಂಗಮ್ ಆರ್ಥರ್ ಮೇಲೆ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.
ಉಖ್ರುಲ್‌ನ ಪಯೋರಿ ಶಿರುಯಿ ಗ್ರಾಮದ ಟಿಕೆ ವುಡ್‌ಲ್ಯಾಂಡ್ ರೆಸಾರ್ಟ್‌ನಲ್ಲಿ ಮಾಜಿ ಶಾಸಕ ಆಲ್ಫ್ರೆಡ್ ಮೇಲೆ ಶಸ್ತ್ರಸಜ್ಜಿತ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.
ಅಭ್ಯರ್ಥಿಯಾಗಿ ಆಲ್ಫ್ರೆಡ್ ಕಂಗಮ್ ಆರ್ಥರ್ ಕಳೆದ ಮೂರು ದಿನಗಳಿಂದ ಚುನಾವಣಾ ಪ್ರಚಾರದ ಭಾಗವಾಗಿ ಜನರನ್ನು ಭೇಟಿಯಾಗುತ್ತಿದ್ದಾರೆ ಎಂದು ಮೇಘಚಂದ್ರ ಹೇಳಿದರು.
ಮತ್ತಷ್ಟು ಓದಿ: ಅಮೆರಿಕದಲ್ಲಿ ಮನೆಯಲ್ಲಿ ಗುಂಡಿನ ದಾಳಿ; 6 ತಿಂಗಳ ಮಗು, ತಾಯಿ ಸೇರಿ 6 ಜನ ಸಾವು
ಈ ಪರಿಸ್ಥಿತಿಯಲ್ಲಿ ಮಾರ್ಚ್ 18 ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಟಿಕೆ ವುಡ್‌ಲ್ಯಾಂಡ್ ರೆಸಾರ್ಟ್‌ನಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.
ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಟೀನೆಮ್ ಗ್ರಾಮದಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಆಲ್ಫ್ರೆಡ್ ಮೇಲೆ ಮತ್ತೆ ದಾಳಿ ನಡೆಸಿದ್ದಾರೆ ಎಂದು ಎಂಪಿಸಿಸಿ ಅಧ್ಯಕ್ಷರು ತಿಳಿಸಿದ್ದಾರೆ. ಇದೇ ಪರಿಸ್ಥಿತಿ ಮುಂದುವರಿದರೆ ಮಣಿಪುರದಲ್ಲಿ ಚುನಾವಣೆ ನಡೆಯುವುದಿಲ್ಲ ಎಂದು ಹೇಳಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ