ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಉದ್ಘಾಟಿಸಬೇಕಿದ್ದ ಜಿಮ್​ ಅನ್ನು ಧ್ವಂಸಗೊಳಿಸಿ ಬೆಂಕಿ ಇಟ್ಟ ಕಿಡಿಗೇಡಿಗಳು

|

Updated on: Apr 28, 2023 | 9:15 AM

ಮಣಿಪುರ(Manipur)ದ ಚುರಾಚಂದ್​ಪುರ ಜಿಲ್ಲೆಯಲ್ಲಿ ಶುಕ್ರವಾರ ಮುಖ್ಯಮಂತ್ರಿ ಎನ್​ ಬಿರೇನ್​ ಸಿಂಗ್ ಅವರು ಪಾಲ್ಗೊಳ್ಳಬೇಕಿದ್ದ ಕಾರ್ಯಕ್ರಮಕ್ಕೆಂದು ಸಿದ್ಧಗೊಂಡಿದ್ದ ಸ್ಥಳವನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿ ಬೆಂಕಿ ಹಚ್ಚಿರುವ ಘಟನೆ ನಡೆದಿದೆ

ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಉದ್ಘಾಟಿಸಬೇಕಿದ್ದ ಜಿಮ್​ ಅನ್ನು ಧ್ವಂಸಗೊಳಿಸಿ ಬೆಂಕಿ ಇಟ್ಟ ಕಿಡಿಗೇಡಿಗಳು
ಮಣಿಪುರ ಜಿಮ್
Image Credit source: Economic Times
Follow us on

ಮಣಿಪುರ(Manipur)ದ ಚುರಾಚಂದ್​ಪುರ ಜಿಲ್ಲೆಯಲ್ಲಿ ಶುಕ್ರವಾರ ಮುಖ್ಯಮಂತ್ರಿ ಎನ್​ ಬಿರೇನ್​ ಸಿಂಗ್ ಅವರು ಪಾಲ್ಗೊಳ್ಳಬೇಕಿದ್ದ ಕಾರ್ಯಕ್ರಮಕ್ಕೆಂದು ಸಿದ್ಧಗೊಂಡಿದ್ದ ಸ್ಥಳವನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಅವರು ಜಿಮ್​-ಕಮ್ ಸ್ಪೋರ್ಟ್ಸ್​ ಸೌಲಭ್ಯ ಉದ್ಘಾಟಿಸುವವರಿದ್ದರು. ಕಿಡಿಗೇಡಿಗಳು ಜಿಮ್​ನಲ್ಲಿರುವ ಸೌಲಭ್ಯವನ್ನು ಧ್ವಂಸಗೊಳಿಸಿದ್ದಷ್ಟೇ ಅಲ್ಲದೆ ಕಾರ್ಯಕ್ರಮ ನಿಯೋಜನೆಗೊಂಡಿರುವ ಸ್ಥಳಕ್ಕೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಗುಂಪನ್ನು ಚದುರಿಸಿದರು ಅಷ್ಟರಲ್ಲಾಗಲೇ ಕುರ್ಚಿಗಳು ಕೂಡ ಸಂಪೂರ್ಣ ಸುಟ್ಟು ಹೋಗಿದ್ದವು, ಜತೆಗೆ ಜಿಮ್​ ಉಪಕರಣಗಳಿಗೂ ಹಾನಿಯಾಗಿತ್ತು.

ಮತ್ತಷ್ಟು ಓದಿ: ಬೆಂಗಳೂರಲ್ಲಿ ಮೊತ್ತೊಂದು ಅಗ್ನಿ ಅವಘಡ: ಐದಾರು ಗುಜರಿ ಗೋಡೌನ್‌ಗಳಿಗೆ ಹೊತ್ತಿಕೊಂಡ ಬೆಂಕಿ

ಇದೀಗ ಆ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಶುಕ್ರವಾರ ಮಧ್ಯಾಹ್ನ ಬಿರೇನ್ ಸಿಂಗ್ ನ್ಯೂ ಲಮ್ಕಾದಲ್ಲಿರುವ ಪಿಟಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ಹೊಸದಾಗಿ ಸ್ಥಾಪಿಸಲಾದ ತೆರೆದ ಜಿಮ್ ಅನ್ನು ಉದ್ಘಾಟಿಸಬೇಕಿತ್ತು.

ಈ ಕಾರಣದಿಂದ ಮುಖ್ಯಮಂತ್ರಿಗಳ ಕಾರ್ಯಕ್ರಮ ರದ್ದಾಗಿದೆಯೇ ಎಂಬುದನ್ನು ಜಿಲ್ಲಾಡಳಿತ ಇನ್ನೂ ಖಚಿತಪಡಿಸಿಲ್ಲ. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ.

ಜಿಲ್ಲೆಯಲ್ಲಿ ಶಾಂತಿ ಭಂಗ, ಸಾರ್ವಜನಿಕ ನೆಮ್ಮದಿಗೆ ಭಂಗ ಮತ್ತು ಮಾನವ ಜೀವ ಮತ್ತು ಆಸ್ತಿಪಾಸ್ತಿಗಳಿಗೆ ಗಂಭೀರ ಅಪಾಯ ಉಂಟಾಗಬಹುದು ಎಂಬ ವರದಿಯನ್ನು ಉಲ್ಲೇಖಿಸಿ ಪೊಲೀಸರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 9:15 am, Fri, 28 April 23