ಮಣಿಪುರ: ಜುಲೈನಲ್ಲಿ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಹತ್ಯೆ, ಶವದ ಚಿತ್ರಗಳು ವೈರಲ್

ಮಣಿಪುರದಲ್ಲಿ ಜುಲೈನಲ್ಲಿ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆದರೆ ಶವಗಳಿನ್ನೂ ಪತ್ತೆಯಾಗಿಲ್ಲ. ಶವದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಇಬ್ಬರು ವಿದ್ಯಾರ್ಥಿಗಳು ಪೊದೆಯ ಸಮೀಪ ಬಿದ್ದಿರುವುದನ್ನು ನೀವು ಚಿತ್ರದಲ್ಲಿ ಕಾಣಬಹುದು. ಆದರೆ ಆ ಜಾಗ ಯಾವುದು, ಹತ್ಯೆಯ ಹಿಂದಿನ ಕಾರಣಗಳೇನು, ಶವ ಎಲ್ಲಿದೆ ಎಂಬ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಮಣಿಪುರ: ಜುಲೈನಲ್ಲಿ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಹತ್ಯೆ, ಶವದ ಚಿತ್ರಗಳು ವೈರಲ್
ಮಣಿಪುರImage Credit source: News 9
Follow us
ನಯನಾ ರಾಜೀವ್
|

Updated on: Sep 26, 2023 | 8:57 AM

ಮಣಿಪುರದಲ್ಲಿ ಜುಲೈನಲ್ಲಿ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆದರೆ ಶವಗಳಿನ್ನೂ ಪತ್ತೆಯಾಗಿಲ್ಲ. ಶವದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಇಬ್ಬರು ವಿದ್ಯಾರ್ಥಿಗಳು ಪೊದೆಯ ಸಮೀಪ ಬಿದ್ದಿರುವುದನ್ನು ನೀವು ಚಿತ್ರದಲ್ಲಿ ಕಾಣಬಹುದು. ಆದರೆ ಆ ಜಾಗ ಯಾವುದು, ಹತ್ಯೆಯ ಹಿಂದಿನ ಕಾರಣಗಳೇನು, ಶವ ಎಲ್ಲಿದೆ ಎಂಬ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಕೊಲೆಗಾರರು ಯಾರೇ ಆಗಿರಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮಣಿಪುರ ಸರ್ಕಾರ ಹೇಳಿದೆ. ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದೆ, ಜುಲೈನಲ್ಲಿ ಅಂಗಡಿಯೊಂದರಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಇಬ್ಬರು ವಿದ್ಯಾರ್ಥಿಗಳು ಕಾಣಿಸಿಕೊಂಡಿದ್ದರು. ಅಂದಿನಿಂದ ಅವರು ನಾಪತ್ತೆಯಾಗಿದ್ದರು.

ಚಿತ್ರವೊಂದರಲ್ಲಿ ಮೈಥಿ ಸಮುದಾಯದ ಇಬ್ಬರು ವಿದ್ಯಾರ್ಥಿಗಳಾದ ಹಿಜಾಮ್ ಲಿಂಥೋಯಿಂಗಂಬಿ ಮತ್ತು 20 ವರ್ಷದ ಫಿಜಾಮ್ ಹೇಮ್‌ಜೀತ್ ಕುಳಿತಿರುವುದನ್ನು ಕಾಣಬಹುದು. ಅವರ ಹಿಂದೆ ಬಂದೂಕು ಹಿಡಿದ ಇಬ್ಬರು ವ್ಯಕ್ತಿಗಳು ಸ್ಪಷ್ಟವಾಗಿ ಗೋಚರಿಸುತ್ತಾರೆ.

ಎರಡನೇ ಚಿತ್ರದಲ್ಲಿ ವಿದ್ಯಾರ್ಥಿಗಳಿಬ್ಬರ ಶವಗಳು ಪೊದೆಗಳ ನಡುವೆ ಬಿದ್ದಿರುವುದು ಕಂಡು ಬಂದಿದೆ. ಆದಾಗ್ಯೂ, ಈ ಫೋಟೋ ಮಣಿಪುರದ ಯಾವ ಪ್ರದೇಶದಲ್ಲಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪೊಲೀಸರು ಮತ್ತು ತನಿಖಾ ಸಂಸ್ಥೆ ಶವ ಪತ್ತೆಗೆ ಪ್ರಯತ್ನಿಸುತ್ತಿದೆ.

ವಿಷಯ ಬೆಳಕಿಗೆ ಬಂದ ನಂತರ ತಕ್ಷಣವೇ ಸಿಬಿಐಗೆ ಹಸ್ತಾಂತರಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಈ ಘಟನೆಯ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಲಾಗುವುದು. ಅಪರಾಧಿಗಳ ಪತ್ತೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನೂ ಆರಂಭಿಸಿವೆ. ಶಾಂತಿ ಕಾಪಾಡಲು ಮತ್ತು ತನಿಖಾಧಿಕಾರಿಗಳು ತಮ್ಮ ಕೆಲಸ ಮಾಡಲು ಅವಕಾಶ ಮಾಡಿಕೊಡುವಂತೆ ಸರ್ಕಾರ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಮೇ 4 ರಂದು ತೌಬಲ್ ಜಿಲ್ಲೆಯಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆ ನಡೆದಿದೆ. ಇದರ ವಿಡಿಯೋ ಜುಲೈ 19 ರಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಕೆಲವರು ಇಬ್ಬರು ಮಹಿಳೆಯರನ್ನು ಬಟ್ಟೆ ಬಿಚ್ಚಿಸಿ, ಅವರೊಂದಿಗೆ ಅಶ್ಲೀಲ ಕೃತ್ಯ ಎಸಗಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

ಮತ್ತಷ್ಟು ಓದಿ: ಮಣಿಪುರದಲ್ಲಿ ಮತ್ತೆ ಹಿಂಸಾಚಾರ, 3 ಜನ ಸಾವು

ಸಾವಿರ ಜನರ ಗುಂಪು ಗ್ರಾಮದ ಮೇಲೆ ದಾಳಿ ನಡೆಸಿತ್ತು. ನನ್ನ ಹೆಂಡತಿ ಮತ್ತು ಗ್ರಾಮಸ್ಥರನ್ನು ಗುಂಪಿನಿಂದ ರಕ್ಷಿಸಲು ನನಗೆ ಸಾಧ್ಯವಾಗಲಿಲ್ಲ. ಪೊಲೀಸರೂ ನಮಗೆ ಭದ್ರತೆ ನೀಡಿಲ್ಲ. ಗುಂಪು ಮೂರು ಗಂಟೆಗಳ ಕಾಲ ದೌರ್ಜನ್ಯವನ್ನು ಮುಂದುವರೆಸಿತು. ನನ್ನ ಹೆಂಡತಿ ಹೇಗೋ ಒಂದು ಹಳ್ಳಿಯಲ್ಲಿ ಆಶ್ರಯ ಪಡೆದಳು ಎಂದು ಮಹಿಳೆಯ ಪತಿ ತಿಳಿಸಿದ್ದರು.

ಮಣಿಪುರದಲ್ಲಿ ಇದುವರೆಗೆ 175 ಸಾವು, 1100 ಮಂದಿ ಗಾಯಗೊಂಡಿದ್ದಾರೆ. ಮಣಿಪುರದಲ್ಲಿ ಕಳೆದ 4 ತಿಂಗಳಿನಿಂದ ನಡೆಯುತ್ತಿರುವ ಜಾತಿ ಹಿಂಸಾಚಾರದಲ್ಲಿ ಇದುವರೆಗೆ 175 ಮಂದಿ ಸಾವನ್ನಪ್ಪಿದ್ದಾರೆ. 1100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇಷ್ಟೇ ಅಲ್ಲ, 5172 ಅಗ್ನಿಸ್ಪರ್ಶ ಪ್ರಕರಣಗಳು ವರದಿಯಾಗಿದ್ದು, ಇದರಲ್ಲಿ 4786 ಮನೆಗಳು ಮತ್ತು 386 ಧಾರ್ಮಿಕ ಸ್ಥಳಗಳಿಗೆ ಬೆಂಕಿ ಮತ್ತು ಧ್ವಂಸ ಘಟನೆಗಳು ಸೇರಿವೆ.

ಇದುವರೆಗೆ 160 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 6 ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 65 ಸಾವಿರಕ್ಕೂ ಹೆಚ್ಚು ಮಂದಿ ಮನೆ ತೊರೆದಿದ್ದಾರೆ. 5 ಸಾವಿರಕ್ಕೂ ಹೆಚ್ಚು ಬೆಂಕಿ ಹಚ್ಚಿದ ಘಟನೆಗಳು ನಡೆದಿವೆ. 6 ಸಾವಿರ ಪ್ರಕರಣಗಳು ದಾಖಲಾಗಿದ್ದು, 144 ಮಂದಿಯನ್ನು ಬಂಧಿಸಲಾಗಿದೆ. ರಾಜ್ಯದಲ್ಲಿ 36 ಸಾವಿರ ಭದ್ರತಾ ಸಿಬ್ಬಂದಿ ಹಾಗೂ 40 ಐಪಿಎಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಬೆಟ್ಟ ಮತ್ತು ಕಣಿವೆ ಜಿಲ್ಲೆಗಳಲ್ಲಿ ಒಟ್ಟು 129 ಹುದ್ದೆಗಳನ್ನು ಸ್ಥಾಪಿಸಲಾಗಿದೆ.

ವಿವಾದ ಶುರುವಾಗಿದ್ದು ಹೇಗೆ: ತಮಗೂ ಬುಡಕಟ್ಟು ಸ್ಥಾನಮಾನ ನೀಡಬೇಕು ಎಂದು ಮೈಥಿ ಸಮುದಾಯ ಆಗ್ರಹಿಸಿದೆ. ಈ ಕುರಿತು ಸಮುದಾಯದವರು ಮಣಿಪುರ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. 1949ರಲ್ಲಿ ಮಣಿಪುರ ಭಾರತದೊಂದಿಗೆ ವಿಲೀನವಾಯಿತು ಎಂಬುದು ಸಮುದಾಯದ ವಾದವಾಗಿತ್ತು. ಅದಕ್ಕೂ ಮೊದಲು ಅವರಿಗೆ ಬುಡಕಟ್ಟು ಎಂಬ ಸ್ಥಾನಮಾನವಿತ್ತು. ಇದಾದ ಬಳಿಕ ಮೈಥಿಯನ್ನು ಪರಿಶಿಷ್ಟ ಪಂಗಡಕ್ಕೆ (ಎಸ್‌ಟಿ) ಸೇರಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶಿಫಾರಸು ಮಾಡಿತ್ತು.

ಮೈಥಿ ವಾದವೇನು: ವರ್ಷಗಳ ಹಿಂದೆ ತಮ್ಮ ರಾಜರು ಮ್ಯಾನ್ಮಾರ್‌ನಿಂದ ಕುಕಿಗಳನ್ನು ಯುದ್ಧಕ್ಕೆ ಕರೆಸಿಕೊಂಡಿದ್ದರು ಎಂದು ಮೈಥಿ ಬುಡಕಟ್ಟು ಜನರು ನಂಬುತ್ತಾರೆ. ನಂತರ ಅವರು ಶಾಶ್ವತ ನಿವಾಸಿಗಳಾದರು. ಈ ಜನರು ಉದ್ಯೋಗಕ್ಕಾಗಿ ಕಾಡುಗಳನ್ನು ಕಡಿದು ಕೃಷಿಯನ್ನು ಪ್ರಾರಂಭಿಸಿದರು. ಇದರಿಂದಾಗಿ ಮಣಿಪುರ ಮಾದಕ ದ್ರವ್ಯ ಕಳ್ಳಸಾಗಣೆಯ ತ್ರಿಕೋನವಾಗಿ ಮಾರ್ಪಟ್ಟಿದೆ.

ನಾಗಾ-ಕುಕಿ ವಿರುದ್ಧವೇಕೆ: ಉಳಿದೆರಡು ಬುಡಕಟ್ಟುಗಳು ಮೈಥಿ ಸಮುದಾಯಕ್ಕೆ ಮೀಸಲಾತಿ ನೀಡುವುದನ್ನು ವಿರೋಧಿಸುತ್ತಿವೆ. ರಾಜ್ಯದ 60 ವಿಧಾನಸಭಾ ಸ್ಥಾನಗಳಲ್ಲಿ 40 ಈಗಾಗಲೇ ಮೈಥಿ ಪ್ರಾಬಲ್ಯ ಇಂಫಾಲ್ ಕಣಿವೆಯಲ್ಲಿವೆ ಎಂದು ಅವರು ಹೇಳುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ, ಮೈಥಿ ಎಸ್‌ಟಿ ವರ್ಗದಲ್ಲಿ ಮೀಸಲಾತಿ ಪಡೆದರೆ, ಅವರ ಹಕ್ಕುಗಳು ವಿಭಜನೆಯಾಗುತ್ತವೆ.

ಮಣಿಪುರದ 60 ಶಾಸಕರ ಪೈಕಿ 40 ಶಾಸಕರು ಮೈಥಿ ಮತ್ತು 20 ಶಾಸಕರು ನಾಗಾ-ಕುಕಿ ಬುಡಕಟ್ಟಿನವರು. ಇದುವರೆಗೆ 12 ಸಿಎಂಗಳಲ್ಲಿ ಇಬ್ಬರು ಮಾತ್ರ ಬುಡಕಟ್ಟು ಜನಾಂಗದವರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ