Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohan Bhagwat: ಮಣಿಪುರಕ್ಕೆ ಆದ್ಯತೆ ನೀಡಬೇಕು, ಹಿಂಸೆ ನಿಲ್ಲಿಸಬೇಕು; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಾರ್ವಜನಿಕ ಭಾಷಣದ ವೇಳೆ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಲ್ಲಿ ಶಾಂತಿಗಾಗಿ ಧ್ವನಿಯೆತ್ತಿದ್ದಾರೆ. ಮಣಿಪುರ ರಾಜ್ಯವು 2 ಜನಾಂಗೀಯ ಸಮುದಾಯಗಳ ನಡುವಿನ ಘರ್ಷಣೆಗಳಿಂದ ಜರ್ಜರಿತವಾಗಿದೆ ಎಂದಿದ್ದಾರೆ.

Mohan Bhagwat: ಮಣಿಪುರಕ್ಕೆ ಆದ್ಯತೆ ನೀಡಬೇಕು, ಹಿಂಸೆ ನಿಲ್ಲಿಸಬೇಕು; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
ಮೋಹನ್ ಭಾಗವತ್
Follow us
ಸುಷ್ಮಾ ಚಕ್ರೆ
|

Updated on: Jun 10, 2024 | 9:44 PM

ನವದೆಹಲಿ: ಮಣಿಪುರದಲ್ಲಿ (Manipur) ಇತ್ತೀಚೆಗಷ್ಟೇ ನಡೆದ ವಿಧಾನಸಭಾ ಚುನಾವಣೆಯಲ್ಲಿ ನೀರಸ ಪ್ರದರ್ಶನ ನೀಡಿದ ಬಿಜೆಪಿ ವಿರುದ್ಧ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್​ಎಸ್​ಎಸ್​) ಸಾರ್ವಜನಿಕವಾಗಿ ಟೀಕೆ ಮಾಡಿದೆ. ನಾಗ್ಪುರದಲ್ಲಿ ಆರ್‌ಎಸ್‌ಎಸ್ ಪ್ರಶಿಕ್ಷಣಾರ್ಥಿಗಳ ಗುಂಪನ್ನು ಉದ್ದೇಶಿಸಿ ಮಾತನಾಡಿದ ಆರ್‌ಎಸ್‌ಎಸ್ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಇಂದು ಸಂಜೆ ಹಿಂಸಾಚಾರ ಪೀಡಿತ ಮಣಿಪುರದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ ಮೇ ತಿಂಗಳಲ್ಲಿ ಹಿಂಸಾಚಾರ ಭುಗಿಲೆದ್ದ ನಂತರ ಮೊದಲ ಬಾರಿಗೆ ಈಶಾನ್ಯ ರಾಜ್ಯವಾದ ಮನಣಿಪುರದ ಕುರಿತು ಮಾತನಾಡಿದ ಮೋಹನ್ ಭಾಗವತ್, “ಮಣಿಪುರವು ಒಂದು ವರ್ಷದಿಂದ ಶಾಂತಿಗಾಗಿ ಕಾಯುತ್ತಿದೆ. ಇಲ್ಲಿ ಹಿಂಸಾಚಾರವನ್ನು ನಿಲ್ಲಿಸುವುದಕ್ಕೆ ಆದ್ಯತೆ ನೀಡಬೇಕು” ಎಂದು ಹೇಳಿದ್ದಾರೆ.

“ನಾವು ಆರ್ಥಿಕತೆ, ರಕ್ಷಣಾ ಕಾರ್ಯತಂತ್ರ, ಕ್ರೀಡೆ, ಸಂಸ್ಕೃತಿ, ತಂತ್ರಜ್ಞಾನ ಮುಂತಾದ ಹಲವು ಕ್ಷೇತ್ರಗಳಲ್ಲಿ ದಾಪುಗಾಲು ಹಾಕಿದ್ದೇವೆ. ಇದರರ್ಥ ನಾವು ಎಲ್ಲಾ ಸವಾಲುಗಳನ್ನು ಜಯಿಸಿದ್ದೇವೆ ಎಂದಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಇಂದೋರ್​: ಪ್ರಧಾನಿ ಮೋದಿ ಪ್ರಮಾಣ ವಚನ ವೇಳೆ ಬಿಜೆಪಿ ಕಚೇರಿಗೆ ಬೆಂಕಿ

ಮೋಹನ್ ಭಾಗವತ್ ಅವರು ಹೊಸ ಸರ್ಕಾರಕ್ಕೆ ಸಲಹೆಯನ್ನು ನೀಡಿದ್ದರು. “ಚುನಾವಣೆಯು ಒಮ್ಮತವನ್ನು ನಿರ್ಮಿಸುವ ಪ್ರಕ್ರಿಯೆಯಾಗಿದೆ. ಸಂಸತ್ತಿಗೆ 2 ಬದಿಗಳಿವೆ, ಆದ್ದರಿಂದ ಯಾವುದೇ ಪ್ರಶ್ನೆಯ ಎರಡೂ ಅಂಶಗಳನ್ನು ಪರಿಗಣಿಸಬಹುದು” ಎಂದು ಮೋಹನ್ ಭಾಗವತ್ ಅವರು ಪ್ರತಿಪಕ್ಷವನ್ನು ಹೊಂದುವ ಮಹತ್ವವನ್ನು ಒತ್ತಿಹೇಳುವ ಮಾತುಗಳಲ್ಲಿ ಹೇಳಿದ್ದಾರೆ.

ಬಿಜೆಪಿಯ ಗುರಿಯು ಕಾಂಗ್ರೆಸ್ ಮುಕ್ತ ಭಾರತವಾಗಿದೆ. ಆದರೆ, ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಪುಟಿದೆದ್ದು, 2019ರ ಸ್ಕೋರ್ ಅನ್ನು 52 ರಿಂದ 99ಕ್ಕೆ ಹೆಚ್ಚಿಸಿದೆ. ಜನಾದೇಶ ಆಗಿನ ಬಿಜೆಪಿ ಸಂಖ್ಯೆಯನ್ನು ಕಡಿಮೆಗೊಳಿಸಿದೆ ಎಂದು ಅವರು ಬೇಸರ ಹೊರಹಾಕಿದ್ದಾರೆ. ಜನಾದೇಶ ಏಕೆ ಮತ್ತು ಹೇಗೆ ಎಂಬುದು ಸಂಘಕ್ಕೆ ಸಂಬಂಧಿಸುವುದಿಲ್ಲ ಎಂದು ಮೋಹನ್ ಭಾಗವತ್ ಹೇಳಿದ್ದಾರೆ.

ಚುನಾವಣೆಗಳು ಪ್ರಜಾಪ್ರಭುತ್ವದ ಅತ್ಯಗತ್ಯ ಪ್ರಕ್ರಿಯೆ. ಇದರಲ್ಲಿ ಎರಡು ಕಡೆ ಇರುವುದರಿಂದ ಸ್ಪರ್ಧೆ ಏರ್ಪಟ್ಟಿದೆ. ಇದು ಸ್ಪರ್ಧೆಯಾಗಿರುವುದರಿಂದ ತನ್ನನ್ನು ತಾನು ಮುಂದಕ್ಕೆ ಕೊಂಡೊಯ್ಯುವ ಪ್ರಯತ್ನಗಳನ್ನು ಮಾಡಲಾಗುತ್ತದೆ. ಆದರೆ ಅದಕ್ಕೊಂದು ಘನತೆ ಇದೆ. ಸುಳ್ಳನ್ನು ಬಳಸಬಾರದು. ಸಂಸತ್ತಿಗೆ ಹೋಗಿ ನಮ್ಮ ದೇಶವನ್ನು ನಡೆಸಲು ಜನರು ಆಯ್ಕೆಯಾಗುತ್ತಿದ್ದಾರೆ ಎಂದು ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ಇದನ್ನೂ ಓದಿ: BJP President: ಬಿಜೆಪಿ ನೂತನ ಅಧ್ಯಕ್ಷ ಯಾರಾಗಲಿದ್ದಾರೆ?; ಅಚ್ಚರಿಯ ಪಟ್ಟಿಯಲ್ಲಿದೆ ಕರ್ನಾಟಕದ ನಾಯಕನ ಹೆಸರು!

ಮೋದಿ ಅವರು ಎರಡನೇ ಅವಧಿಯಲ್ಲಿ ಭಾರತದ ಪ್ರಧಾನಿಯಾಗಿದ್ದಾಗ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಲಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಕಳೆದ ವರ್ಷ ರಾಜ್ಯವು ಹಿಂಸಾಚಾರದಲ್ಲಿ ಮುಳುಗಿದ್ದಾಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಣಿಪುರಕ್ಕೆ ಭೇಟಿ ನೀಡಿದ್ದರು. ಈ ವರ್ಷ ಮಣಿಪುರದಿಂದಲೂ ತಮ್ಮ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಪ್ರಾರಂಭಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ