Manipur: ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಘರ್ಷಣೆ, ಇಬ್ಬರು ಸಾವು 25ಕ್ಕೂ ಅಧಿಕ ಮಂದಿಗೆ ಗಾಯ

ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದೆ. ಕಳೆದ ಒಂದು ವರ್ಷದಿಂದ ಕುಕಿ ಹಾಗೂ ಮೈಥಿ ಸಮುದಾಯದ ನಡುವೆ ಘರ್ಷಣೆ ನಡೆಯುತ್ತಿದ್ದ 100ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಮತ್ತೆ ಹಿಂಸಾಚಾರ ನಡೆದಿದೆ, ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಘರ್ಷಣೆ ನಡೆದಿದ್ದು ಇಬ್ಬರು ಸಾವನ್ನಪ್ಪಿದ್ದು, 25ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

Manipur: ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಘರ್ಷಣೆ, ಇಬ್ಬರು ಸಾವು 25ಕ್ಕೂ ಅಧಿಕ ಮಂದಿಗೆ ಗಾಯ
ಹಿಂಸಾಚಾರImage Credit source: NDTV
Follow us
ನಯನಾ ರಾಜೀವ್
|

Updated on: Feb 16, 2024 | 8:05 AM

ಮಣಿಪುರ(Manipur)ದ ಚುರಾಚಂದ್‌ಪುರ ಜಿಲ್ಲೆಯಲ್ಲಿ ಹೆಡ್‌ಕಾನ್ಸ್‌ಟೇಬಲ್‌ನ ಸೆಲ್ಫಿ ವೈರಲ್ ಆಗಿದ್ದು, ಅವರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಪ್ರತಿಭಟನಾಕಾರರು ಭದ್ರತಾ ಪಡೆಗಳೊಂದಿಗೆ ಘರ್ಷಣೆ ನಡೆಸಿದ್ದು, ಇಬ್ಬರು ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ. ಚುರಾಚಂದ್‌ಪುರ ಪೊಲೀಸ್ ವರಿಷ್ಠಾಧಿಕಾರಿ ಶಿವಾನಂದ್ ಸುರ್ವೆ ಅವರ ಪ್ರಕಾರ, ಫೆಬ್ರವರಿ 14 ರಂದು ಶಸ್ತ್ರಸಜ್ಜಿತ ವ್ಯಕ್ತಿಗಳೊಂದಿಗೆ ವೀಡಿಯೊ ಮಾಡುತ್ತಿರುವ ಕ್ಲಿಪ್ ವೈರಲ್ ಆದ ನಂತರ ಚುರಾಚಂದ್‌ಪುರ ಜಿಲ್ಲಾ ಪೊಲೀಸ್‌ನ ಸಿಯಾಮ್ಲಾಲ್‌ಪಾಲ್ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಲಾಗಿದೆ.

ಪೊಲೀಸರ ಮಾಹಿತಿ ಮೇರೆಗೆ ಪ್ರತಿಭಟನಾಕಾರರು ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದರು. ಸೇವೆಯಿಂದ ಅಮಾನತುಗೊಂಡಿರುವ ಪೊಲೀಸ್ ಪೇದೆಯನ್ನು ಮರು ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನಾಕಾರರು ಜಿಲ್ಲಾ ಪೊಲೀಸ್ ಮುಖ್ಯಸ್ಥರ ಕಚೇರಿ ಬಳಿ ಬಸ್ ಮತ್ತು ಇತರ ಕಟ್ಟಡಗಳಿಗೆ ಬೆಂಕಿ ಹಚ್ಚಿದ್ದರು.

ಪೊಲೀಸರು, ಚುರಚಂದ್‌ಪುರದಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ರಾಪಿಡ್ ಆಕ್ಷನ್ ಫೋರ್ಸ್ (RAF) ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ್ದಾರೆ ಎಂದು ಹೇಳಿದರು. ಘಟನೆಯಲ್ಲಿ ಹಲವಾರು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪೂರ್ವಾನುಮತಿ ಇಲ್ಲದೆ ಠಾಣೆಯಿಂದ ಹೊರಹೋಗದಂತೆ ಹೆಡ್ ಕಾನ್‌ಸ್ಟೆಬಲ್‌ಗೆ ತಿಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಮಣಿಪುರದಲ್ಲಿ ಮತ್ತೆ ಹಿಂಸಾಚಾರ, 3 ಜನ ಸಾವು

ಮಣಿಪುರದಲ್ಲಿ ಹಿಂಸಾಚಾರ ಮತ್ತೊಮ್ಮೆ ಹೆಚ್ಚಾಗಿದೆ. 400 ಜನರ ಶಸ್ತ್ರಸಜ್ಜಿತ ಗುಂಪು ಚುರಚಂದಪುರ ಎಸ್ಪಿ-ಡಿಸಿ ಕಚೇರಿಗಳನ್ನು ಸುತ್ತುವರೆದಿದೆ. ಗುಂಪು ಸರ್ಕಾರಿ ವಾಹನಗಳಿಗೆ ಬೆಂಕಿ ಹಚ್ಚಿದೆ. ಸರ್ಕಾರಿ ಆಸ್ತಿ ಧ್ವಂಸ ಮಾಡಿದ್ದಾರೆ. ವಾಸ್ತವವಾಗಿ, ಇಡೀ ಹಿಂಸಾಚಾರವು ಪೊಲೀಸ್ ಹೆಡ್ ಕಾನ್‌ಸ್ಟೆಬಲ್‌ನ ಅಮಾನತಿನಿಂದ ಸಂಭವಿಸಿದೆ. ಘರ್ಷಣೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದೇ ವೇಳೆ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಆದರೆ, ಪೊಲೀಸರು ಮತ್ತು ಭದ್ರತಾ ಪಡೆಗಳು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಸಿಯಾಂಲಾಲ್‌ಪಾಲ್ ಗ್ರಾಮದ ಶಸ್ತ್ರಸಜ್ಜಿತ ವ್ಯಕ್ತಿಗಳು ಮತ್ತು ಸ್ವಯಂಸೇವಕರೊಂದಿಗೆ ಕುಳಿತಿರುವ ವಿಡಿಯೋ ವೈರಲ್ ಆಗಿದೆ.

ಈ ಹಿನ್ನೆಲೆಯಲ್ಲಿ ಚುರಚಂದಪುರ ಎಸ್ಪಿ ಶಿವಾನಂದ್ ಸುರ್ವೆ ಅವರು ಹೆಡ್ ಕಾನ್‌ಸ್ಟೆಬಲ್‌ನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ