ಮಣಿಪುರದ ಕುಕಿ ಬಂಡುಕೋರರ ಗುಂಪು, ಸ್ವಯಂಸೇವಕರ ನಡುವೆ ಗುಂಡಿನ ಚಕಮಕಿ; ನಾಲ್ವರು ಸಾವು

ಮಣಿಪುರದ ತೆಂಗನೌಪಾಲ್ ಜಿಲ್ಲೆಯಲ್ಲಿ ಒಂದೇ ಸಮುದಾಯದ ಸದಸ್ಯರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಯುನೈಟೆಡ್ ಕುಕಿ ಲಿಬರೇಶನ್ ಫ್ರಂಟ್ (ಯುಕೆಎಲ್‌ಎಫ್) ಉಗ್ರ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ಮಣಿಪುರದ ಕುಕಿ ಬಂಡುಕೋರರ ಗುಂಪು, ಸ್ವಯಂಸೇವಕರ ನಡುವೆ ಗುಂಡಿನ ಚಕಮಕಿ; ನಾಲ್ವರು ಸಾವು
ಸಾಂದರ್ಭಿಕ ಚಿತ್ರ
Follow us
ಸುಷ್ಮಾ ಚಕ್ರೆ
|

Updated on: Aug 11, 2024 | 1:42 PM

ಮಣಿಪುರ: ಮಣಿಪುರದ ತೆಂಗ್ನೌಪಾಲ್ ಜಿಲ್ಲೆಯಲ್ಲಿ ನಡೆದ ಮಾರಣಾಂತಿಕ ಗುಂಡಿನ ಚಕಮಕಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಒಂದೇ ಸಮುದಾಯದ ಉಗ್ರಗಾಮಿಗಳು ಮತ್ತು ಗ್ರಾಮದ ಸ್ವಯಂಸೇವಕರ ನಡುವಿನ ಘರ್ಷಣೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಯುನೈಟೆಡ್ ಕುಕಿ ಲಿಬರೇಶನ್ ಫ್ರಂಟ್ (ಯುಕೆಎಲ್‌ಎಫ್)ನ ಉಗ್ರರು ಮತ್ತು ಮೂವರು ಗ್ರಾಮ ಸ್ವಯಂಸೇವಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೊಲ್ನೊಮ್ ಪ್ರದೇಶದಲ್ಲಿ ಶುಕ್ರವಾರ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ಉಗ್ರಗಾಮಿ ಮತ್ತು ಎಲ್ಲಾ ಮೂವರು ಸ್ವಯಂಸೇವಕರು ಸಾವನ್ನಪ್ಪಿದ್ದಾರೆ.

ಇಲ್ಲಿನ ಪಲ್ಲೆಲ್ ಪ್ರದೇಶದಲ್ಲಿ ಲೆವಿ ನಿಯಂತ್ರಣದ ವಿವಾದದಿಂದ ಗುಂಡಿನ ಚಕಮಕಿ ಸಂಭವಿಸಿದೆ ಎಂದು ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ, ಈ ಘಟನೆಯ ಮತ್ತೊಂದು ಕೋನವನ್ನು ಸಹ ಪ್ರಸಾರ ಮಾಡಲಾಗುತ್ತಿದೆ ಎಂದು ವರದಿಯಾಗಿದೆ. ಇದರ ಪ್ರಕಾರ ಕುಕಿ ಗ್ರಾಮದ ಸ್ವಯಂಸೇವಕರ ಅಪಹರಣಕ್ಕೆ ಪ್ರತೀಕಾರವಾಗಿ ಈ ಗುಂಡಿನ ಚಕಮಕಿ ನಡೆದಿದೆ. ಈ ಘರ್ಷಣೆಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ವಿವರಗಳನ್ನು ಇದುವರೆಗೆ ಅಧಿಕಾರಿಗಳು ಬಿಡುಗಡೆ ಮಾಡಿಲ್ಲ.

ಇದನ್ನೂ ಓದಿ: Bangladesh Crisis: ಬಾಂಗ್ಲಾದೇಶದ ಹಿಂಸಾಚಾರದ ಬಗ್ಗೆ ಪ್ರಧಾನಿ ನಿವಾಸದಲ್ಲಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ

ಇದಲ್ಲದೆ, ಈ ಘಟನೆಗೆ ಸಂಬಂಧಿಸಿದಂತೆ, ಪ್ರತೀಕಾರವಾಗಿ ಯುಕೆಎಲ್‌ಎಫ್‌ನ ಸ್ವಯಂ-ಶೈಲಿಯ ಅಧ್ಯಕ್ಷ ಎಸ್‌ಎಸ್ ಹಾಕಿಪ್ ಅವರ ನಿವಾಸಕ್ಕೆ ಗ್ರಾಮಸ್ಥರು ಬೆಂಕಿ ಹಚ್ಚಿದ್ದಾರೆ. ಈ ಘಟನೆಯ ನಂತರ, ಭದ್ರತಾ ಪಡೆಗಳು ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಗಳನ್ನು ನಡೆಸಿದ್ದವು. ಆದರೆ ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಉದ್ವಿಗ್ನತೆ ಮುಂದುವರಿದಿದ್ದರೂ ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Bangladesh Violence: ಬಾಂಗ್ಲಾದೇಶದಲ್ಲಿ ಹಿಂದೂಗಳು, ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರಕ್ಕೆ ಆರ್‌ಎಸ್‌ಎಸ್ ಖಂಡನೆ

ಈ ಹಿಂಸಾಚಾರವು ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಸಂಘರ್ಷಕ್ಕೆ ಸೇರಿದ್ದಾಗಿದೆ. ಇದರಿಂದ ಕಳೆದ ವರ್ಷ ಮೇ ತಿಂಗಳಿನಿಂದ 200ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು. ಇದರಿಂದಾಗಿ ಸಾವಿರಾರು ಜನರನ್ನು ಸ್ಥಳಾಂತರಿಸಲಾಗಿತ್ತು. ಈ ಘರ್ಷಣೆಯು ಪ್ರಾಥಮಿಕವಾಗಿ ಇಂಫಾಲ್ ಕಣಿವೆ ಮೂಲದ ಮೈಟೆಯಿ ಸಮುದಾಯ ಮತ್ತು ಪಕ್ಕದ ಬೆಟ್ಟಗಳ ಕುಕಿ ಸಮುದಾಯದ ನಡುವಿನ ಘರ್ಷಣೆಗಳನ್ನು ಒಳಗೊಂಡಿದೆ. ಈ ಪ್ರದೇಶದಲ್ಲಿ ಈಗಾಗಲೇ ಅಸ್ಥಿರ ಪರಿಸ್ಥಿತಿಯನ್ನು ಉಲ್ಬಣಗೊಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಮೆರಿಕ ಅಧ್ಯಕ್ಷರಾಗಿ ಪದಗ್ರಹಣ ಬಳಿಕ ಸಖತ್​ ಸ್ಟೆಪ್​​​ ಹಾಕಿದ ಟ್ರಂಪ್
ಅಮೆರಿಕ ಅಧ್ಯಕ್ಷರಾಗಿ ಪದಗ್ರಹಣ ಬಳಿಕ ಸಖತ್​ ಸ್ಟೆಪ್​​​ ಹಾಕಿದ ಟ್ರಂಪ್
ಬೆಳಗಾವಿ ಅಧಿವೇಶನ ನಿಸ್ಸಂದೇಹವಾಗಿ ಕಾಂಗ್ರೆಸ್ ಪಕ್ಷದ ಜಾತ್ರೆ: ಶಿವಕುಮಾರ್
ಬೆಳಗಾವಿ ಅಧಿವೇಶನ ನಿಸ್ಸಂದೇಹವಾಗಿ ಕಾಂಗ್ರೆಸ್ ಪಕ್ಷದ ಜಾತ್ರೆ: ಶಿವಕುಮಾರ್
ಕರ್ತವ್ಯನಿರತ ಪೊಲೀಸರ ಮೇಲೆ ಜೋರು ಮಾಡಲು ಮುಂದಾದ ಕಾಂಗ್ರೆಸ್ಸಿಗರು
ಕರ್ತವ್ಯನಿರತ ಪೊಲೀಸರ ಮೇಲೆ ಜೋರು ಮಾಡಲು ಮುಂದಾದ ಕಾಂಗ್ರೆಸ್ಸಿಗರು
ಕಾಂಗ್ರೆಸ್ ಅಧಿವೇಶನದಲ್ಲಿ ಭಾಗಿಯಾಗಲು ಸೋಮಶೇಖರ್ ಬಂದಿರುವರೇ?
ಕಾಂಗ್ರೆಸ್ ಅಧಿವೇಶನದಲ್ಲಿ ಭಾಗಿಯಾಗಲು ಸೋಮಶೇಖರ್ ಬಂದಿರುವರೇ?
Video: ಪ್ರಬಲ ಭೂಕಂಪಕ್ಕೆ ನಲುಗಿದ ತೈವಾನ್
Video: ಪ್ರಬಲ ಭೂಕಂಪಕ್ಕೆ ನಲುಗಿದ ತೈವಾನ್
‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
ಕೊಪ್ಪಳ: ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಗೆ‌ ಬೋರ್​ವೆಲ್ ಕೊರೆಸಿದ ರೈತ
ಕೊಪ್ಪಳ: ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಗೆ‌ ಬೋರ್​ವೆಲ್ ಕೊರೆಸಿದ ರೈತ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು