Manipur Violence: ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಜೂ.24ರಂದು ಸರ್ವಪಕ್ಷಗಳ ಸಭೆ ಕರೆದ ಅಮಿತ್ ಶಾ
ಮಣಿಪುರ(Manipur)ದ ಪರಿಸ್ಥಿತಿಯನ್ನು ಚರ್ಚಿಸಲು ಕೇಂದ್ರ ಸರ್ಕಾರ ಜೂನ್ 24 ರಂದು ಸರ್ವಪಕ್ಷ ಸಭೆಯನ್ನು ಕರೆದಿದೆ.
ಮಣಿಪುರ(Manipur)ದ ಪರಿಸ್ಥಿತಿಯನ್ನು ಚರ್ಚಿಸಲು ಕೇಂದ್ರ ಸರ್ಕಾರ ಜೂನ್ 24 ರಂದು ಸರ್ವಪಕ್ಷ ಸಭೆಯನ್ನು ಕರೆದಿದೆ. ಮಣಿಪುರದ ಪರಿಸ್ಥಿತಿಯನ್ನು ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಜೂನ್ 24 ರಂದು ಮಧ್ಯಾಹ್ನ 3 ಗಂಟೆಗೆ ನವದೆಹಲಿಯಲ್ಲಿ ಸರ್ವಪಕ್ಷ ಸಭೆಯನ್ನು ಕರೆದಿದ್ದಾರೆ ಎಂದು ಟ್ವೀಟ್ ಮೂಲಕ ತಿಳಿಸಲಾಗಿದೆ. ಸುಮಾರು 50 ದಿನಗಳ ಕಾಲ ಮಣಿಪುರದಲ್ಲಿ ಶಾಂತಿ ಮರುಸ್ಥಾಪಿಸಲು ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಆದರೂ ಹಿಂಸಾಚಾರದ ಘಟನೆಗಳು ನಿಲ್ಲುತ್ತಿಲ್ಲ ಈ ಹಿನ್ನೆಲೆಯಲ್ಲಿ ಸಭೆ ಕರೆಯಲಾಗಿದೆ.
ಮಣಿಪುರದ ಪರಿಸ್ಥಿತಿಯನ್ನು ಚರ್ಚಿಸಲು ಸರ್ಕಾರದಿಂದ ಸರ್ವಪಕ್ಷ ಸಭೆ ನಡೆಸುವಂತೆ ಪ್ರತಿಪಕ್ಷಗಳು ನಿರಂತರವಾಗಿ ಒತ್ತಾಯಿಸುತ್ತಿವೆ. ಜೂನ್ 16 ರಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಟ್ವೀಟ್ ಮಾಡುವ ಮೂಲಕ ಕೇಂದ್ರವನ್ನು ಗುರಿಯಾಗಿಸಿಕೊಂಡು ಪ್ರಧಾನಿ ನರೇಂದ್ರ ಮೋದಿ ಅವರು ತಕ್ಷಣ ಸರ್ವಪಕ್ಷ ಸಭೆ ಕರೆಯಬೇಕು ಎಂದು ಕೇಳಿದ್ದರು.
ಮತ್ತಷ್ಟು ಓದಿ: Manipur violence: ಮಣಿಪುರ ಹಿಂಸಾಚಾರ ನಮ್ಮ ರಾಷ್ಟ್ರದ ಆತ್ಮಸಾಕ್ಷಿಯಲ್ಲಿ ಆಳವಾದ ಗಾಯವನ್ನುಂಟುಮಾಡಿದೆ: ಸೋನಿಯಾ ಗಾಂಧಿ
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಬುಧವಾರ ಸಂಜೆ ಗೃಹ ಸಚಿವರನ್ನು ಭೇಟಿ ಮಾಡಿದ ನಂತರ ಈ ಘೋಷಣೆ ಮಾಡಲಾಗಿದೆ. ಶರ್ಮಾ ಅವರು ಈಶಾನ್ಯ ಪ್ರಜಾಸತ್ತಾತ್ಮಕ ಒಕ್ಕೂಟದ (NEDA) ಸಂಚಾಲಕರೂ ಆಗಿದ್ದಾರೆ. ಶರ್ಮಾ ಅವರು ಕೆಲವು ದಿನಗಳ ಹಿಂದೆ ಇಂಫಾಲಕ್ಕೆ ಭೇಟಿ ನೀಡಿದ್ದರು ಮತ್ತು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಮತ್ತು ಇತರ ಹಲವು ನಾಯಕರನ್ನು ಭೇಟಿ ಮಾಡಿದ್ದರು.
ಅಮಿತ್ ಶಾ ಅವರು ಕಳೆದ ತಿಂಗಳು ನಾಲ್ಕು ದಿನಗಳ ಕಾಲ ಮಣಿಪುರಕ್ಕೆ ಭೇಟಿ ನೀಡಿದ್ದರು ಮತ್ತು ರಾಜ್ಯದಲ್ಲಿ ಶಾಂತಿ ನೆಲೆಸುವ ಪ್ರಯತ್ನದ ಭಾಗವಾಗಿ ಸಮಾಜದ ವಿವಿಧ ಕ್ಷೇತ್ರಗಳ ಜನರನ್ನು ಭೇಟಿ ಮಾಡಿದ್ದರು. ಇದಕ್ಕೂ ಮುನ್ನ, ಮಣಿಪುರದ ಬಿಷ್ಣುಪುರ್ ಜಿಲ್ಲೆಯ ಕ್ವಾಕ್ಟಾ ಪ್ರದೇಶದ ಕಲ್ವರ್ಟ್ ಬಳಿ ಎಸ್‌ಯುವಿ ವಾಹನ ಸ್ಫೋಟಗೊಂಡು ಮೂವರು ಸಾವನ್ನಪ್ಪಿದ್ದರು.
ಜೂನ್ 15 ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಣಿಪುರದ ಪರಿಸ್ಥಿತಿಯ ಬಗ್ಗೆ ಟ್ವೀಟ್ ಮಾಡಿದ್ದರು. ಪ್ರಧಾನಿ ಮೋದಿ ಏಕೆ ಮೌನ ವಹಿಸಿದ್ದಾರೆ ಎಂದು ಆರೋಪಿಸಿದ ಅವರು, ಮಣಿಪುರದಲ್ಲಿ ಶಾಂತಿಯನ್ನು ಮರು ಸ್ಥಾಪಿಸಲು ಸರ್ವಪಕ್ಷಗಳ ನಿಯೋಗವನ್ನು ಕಳುಹಿಸಬೇಕು ಎಂದು ಒತ್ತಾಯಿಸಿದ್ದರು.
ಹಿಂಸಾಚಾರದ ವಿಚಾರವಾಗಿ ಸೋನಿಯಾ ಗಾಂಧಿ ಪ್ರತಿಕ್ರಿಯಿಸಿದ್ದಾರೆ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಣಿಪುರದ ಪರಿಸ್ಥಿತಿಗೆ ಪ್ರತಿಕ್ರಿಯಿಸುವಾಗ ಶಾಂತಿಗಾಗಿ ಮನವಿ ಮಾಡಿದರು. ಹಿಂಸಾಚಾರವು ಜನರ ಜೀವನವನ್ನು ನಾಶಪಡಿಸುತ್ತಿದೆ, ಕುಳಿತು ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕಿದೆ ಎಂದು ಹೇಳಿದ್ದಾರೆ.
ಮಣಿಪುರ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮಾತನಾಡಿ, ಹಿಂಸಾಚಾರವನ್ನು ತಡೆಯಲು ಸರ್ಕಾರ ಸಂಪನ್ಮೂಲಗಳನ್ನು ಬಳಸುತ್ತಿಲ್ಲ ಎಂದು ಅವರು ಆರೋಪಿಸಿದ್ದರು, ಪ್ರಧಾನಿ ಅವರು ಎಲ್ಲಿ ಬೇಕಾದರೂ ಹೋಗಲಿ ಆದರೆ ಅದಕ್ಕೂ ಮೊದಲು ಆಂತರಿಕ ಪರಿಸ್ಥಿತಿಯನ್ನು ನಿಭಾಯಿಸಬೇಕು ಎಂದು ಪ್ರವಾರ್ ಹೇಳಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:48 am, Thu, 22 June 23