Manipur Violence: ಮಣಿಪುರದಲ್ಲಿ ಸೇನೆಗೆ ಮಹಿಳೆಯರೇ ದೊಡ್ಡ ಸವಾಲು, ಫೋಟೊ ಹಂಚಿಕೊಂಡ ಸೈನಿಕರು

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಸೇನೆಗೆ ಪ್ರತಿಭಟನಾ ನಿರತ ಮಹಿಳೆಯರೇ ದೊಡ್ಡ ಸವಾಲಾಗಿದ್ದಾರೆ. ಉದ್ದೇಶಪೂರ್ವಕವಾಗಿಯೇ ಸೇನೆಯ ಕಾರ್ಯಾಚರಣೆಗೆ ಅಡ್ಡಿಪಡಿಸುವ ಪ್ರಯತ್ನ ನಡೆಯುತ್ತಿದೆ.

Manipur Violence: ಮಣಿಪುರದಲ್ಲಿ ಸೇನೆಗೆ ಮಹಿಳೆಯರೇ ದೊಡ್ಡ ಸವಾಲು, ಫೋಟೊ ಹಂಚಿಕೊಂಡ ಸೈನಿಕರು
ಮಣಿಪುರ ಗಲಭೆImage Credit source: Hindustan Times
Follow us
ನಯನಾ ರಾಜೀವ್
|

Updated on: Jun 27, 2023 | 10:03 AM

ಹಿಂಸಾಚಾರ ಪೀಡಿತ ಮಣಿಪುರ(Manipur)ದಲ್ಲಿ ಸೇನೆಗೆ ಪ್ರತಿಭಟನಾ ನಿರತ ಮಹಿಳೆಯರೇ ದೊಡ್ಡ ಸವಾಲಾಗಿದ್ದಾರೆ. ಉದ್ದೇಶಪೂರ್ವಕವಾಗಿಯೇ ಸೇನೆಯ ಕಾರ್ಯಾಚರಣೆಗೆ ಅಡ್ಡಿಪಡಿಸುವ ಪ್ರಯತ್ನ ನಡೆಯುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನಾ ನಿರತ ಮಹಿಳೆಯರು ರಸ್ತೆ ತಡೆ ನಡೆಸುತ್ತಿದ್ದು, ಸೇನಾ ಸಿಬ್ಬಂದಿಗೆ ತಮ್ಮ ಕಾರ್ಯಾಚರಣೆಯನ್ನು ಮುಂದುವರೆಸಲು ಸಾಧ್ಯವಾಗುತ್ತಿಲ್ಲ ಎಂದು ಸೇನೆ ಹೇಳಿದೆ. ಜತೆಗೆ ಫೋಟೊವನ್ನು ಕೂಡ ಹಂಚಿಕೊಂಡಿದೆ.

ಮಣಿಪುರದಲ್ಲಿ ಮಹಿಳೆಯರು ಉದ್ದೇಶಪೂರ್ವಕವಾಗಿ ತಮ್ಮ ಕಾರ್ಯಾಚರಣೆಗೆ ಅಡ್ಡಿಪಡಿವುದು ಕಾನೂನು ಬಾಹಿರ ಎಂದು ಸೇನೆ ಹೇಳಿದೆ. ಭದ್ರತಾ ಸಿಬ್ಬಂದಿಯ ಚಲನವಲನವನ್ನು ನಿರ್ಬಂಧಿಸುವುದು ಕಾನೂನು ಬಾಹಿರ ಮಾತ್ರವಲ್ಲ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವುದು ಕಷ್ಟವಾಗುತ್ತಿದೆ.

ಸೋಮವಾರ ತಡರಾತ್ರಿ, ಭಾರತೀಯ ಸೇನೆಯು ಟ್ವೀಟ್​ ಮಾಡಿದ್ದು, ಇದರಲ್ಲಿ ಮಹಿಳಾ ಕಾರ್ಯಕರ್ತರು ಯೋಧರನ್ನು ಮುಂದೆ ಸಾಗದಂತೆ ತಡೆಯುತ್ತಿರುವುದನ್ನು ಕಾಣಬಹುದು.

ಮತ್ತಷ್ಟು ಓದಿ: Manipur Violence: ಅನಿವಾರ್ಯವಾಗಿ ಮಹಿಳೆಯರ ಒತ್ತಾಯಕ್ಕೆ ಮಣಿದು 12 ಉಗ್ರರ ಬಿಡುಗಡೆ ಮಾಡಿದ ಸೇನೆ

ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಕ್ಷಣವೇ ನಿಲ್ಲಿಸಬೇಕೆಂದು ಒತ್ತಾಯಿಸಿ ಮೈಥಿ ಸಮುದಾಯದ ಸದಸ್ಯರು ಮಹಾರಾಷ್ಟ್ರದ ಪುಣೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಗಲಭೆಯಲ್ಲಿ 100ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ, 60 ಸಾವಿರ ಮಂದಿ ಸ್ಥಳಾಂತರಗೊಂಡಿದ್ದಾರೆ. ನಿತ್ಯವೂ ಗುಂಡಿನ ಚಕಮಕಿ ನಡೆಯುತ್ತಿದ್ದು, ಜನರು ಯುದ್ಧದ ಪರಿಸ್ಥಿತಿಯಲ್ಲಿ ಬದುಕುತ್ತಿದ್ದಾರೆ.

ಒಂದೆರಡು ದಿನಗಳ ಹಿಂದೆ 12 ಉಗ್ರರನ್ನು ಸೇನೆಯು ಬಂಧಿಸಿತ್ತು ಆದರೆ ಮಹಿಳೆಯರ ಒತ್ತಾಯದ ಮೇರೆಗೆ ಅವರನ್ನು ಬಿಡುಗಡೆ ಮಾಡಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ