AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manipur Violence: ಮಣಿಪುರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದ ಪೊಲೀಸರು

ಮಣಿಪುರ(Manipur)ದಲ್ಲಿ ಕಳೆದ ಒಂದು ತಿಂಗಳಿಂದ ಹಿಂಸಾಚಾರ ಭುಗಿಲೆದ್ದಿದೆ ನೂರಾರು ಮಂದಿ ಜೀವ ಕಳೆದುಕೊಂಡಿದ್ದಾರೆ.

Manipur Violence: ಮಣಿಪುರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದ ಪೊಲೀಸರು
ಶಸ್ತ್ರಾಸ್ತ್ರಗಳು
ನಯನಾ ರಾಜೀವ್
|

Updated on: Jun 28, 2023 | 8:23 AM

Share

ಮಣಿಪುರ(Manipur)ದಲ್ಲಿ ಕಳೆದ ಒಂದು ತಿಂಗಳಿಂದ ಹಿಂಸಾಚಾರ ಭುಗಿಲೆದ್ದಿದೆ ನೂರಾರು ಮಂದಿ ಜೀವ ಕಳೆದುಕೊಂಡಿದ್ದಾರೆ. ಇದೀಗ ಮಣಿಪುರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಾಗಾಲ್ಯಾಂಡ್​ನ ಕೊಹಿಮಾ ಬಳಿ ಶಸ್ತ್ರಾಸ್ತ್ರ, ಮದ್ದುಗುಂಡುಗಳು, ಎರಡು ಪಿಸ್ತೂಲು, ನಾಲ್ಕು ಮ್ಯಾಗಜಿನ್​ಗಳು, ಸ್ಫೋಟಕಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಅಸ್ಸಾಂ ರೈಫಲ್ಸ್​ ಹಾಗೂ ಕೊಹಿಮಾ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ.

ಗುಪ್ತಚರ ಮಾಹಿತಿ ಮೇರೆಗೆ ಜೂನ್ 26ರಂದು ಬೆಳಗಿನ ಜಾವ 2 ಗಮಟೆ ವೇಳೆಗೆ ಅಸ್ಸಾಂ ರೈಫಲ್ಸ್ ಮತ್ತು ಕೊಹಿಮಾ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.ಕಾರ್ಯಾಚರಣೆಯಲ್ಲಿ ವಾಹನವನ್ನು ಮೊದಲು ಪತ್ತೆ ಹಚ್ಚಿದರು ಬಳಿಕ ಸತತ 4 ಗಂಟೆಗಳ ಕಾಲ ಕಣ್ಣಿಡಲಾಗಿತ್ತು.

ಮತ್ತಷ್ಟು ಓದಿ: Manipur violence: ಮಣಿಪುರ ಹಿಂಸಾಚಾರ: ಸಚಿವರ ಒಡೆತನದ ಖಾಸಗಿ ಗೋಡೌನ್‌ಗೆ ಬೆಂಕಿ ಹಚ್ಚಿದ ಜನರ ಗುಂಪು

ಬೆಳಿಗ್ಗೆ 6 ಗಂಟೆ ಸುಮಾರಿಗೆ ಜಂಟಿ ತಂಡವು ವಾಹನವನ್ನು ಶೋಧಿಸಿ ಎರಡು ಪಿಸ್ತೂಲ್‌ಗಳು, ನಾಲ್ಕು ಮ್ಯಾಗಜೀನ್‌ಗಳು, ಮದ್ದುಗುಂಡುಗಳು, ಸ್ಫೋಟಕಗಳು ಮತ್ತು ಇತರೆ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಯಿತು. ಮಣಿಪುರದಲ್ಲಿ ಹಿಂಸಾಚಾರವನ್ನು ಮುಂದುವರೆಸಲು ನಡೆಸಿದ್ದ ಪ್ರಯತ್ನವನ್ನು ಪೊಲೀಸರು ವಿಫಲಗೊಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಇಂಡಿ ಮೈತ್ರಿಕೂಟದಿಂದ ಸುಪ್ರೀಂ ಚಲೋ ಮೆರವಣಿಗೆ
ಇಂಡಿ ಮೈತ್ರಿಕೂಟದಿಂದ ಸುಪ್ರೀಂ ಚಲೋ ಮೆರವಣಿಗೆ
ನಾಡಹಬ್ಬ ಮೈಸೂರು ದಸರಾದಲ್ಲಿ ಪ್ಲಾಸ್ಟಿಕ್, ಫ್ಲೆಕ್ಸ್​ಗೆ ಸಂಪೂರ್ಣ ಕಡಿವಾಣ
ನಾಡಹಬ್ಬ ಮೈಸೂರು ದಸರಾದಲ್ಲಿ ಪ್ಲಾಸ್ಟಿಕ್, ಫ್ಲೆಕ್ಸ್​ಗೆ ಸಂಪೂರ್ಣ ಕಡಿವಾಣ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ