Manipur violence: ಮಣಿಪುರ ಹಿಂಸಾಚಾರ ಪ್ರಕರಣ ನ್ಯಾಯಾಂಗ ತನಿಖೆಗೆ ಆದೇಶ: ಅಮಿತ್ ಶಾ

ಈಶಾನ್ಯ ರಾಜ್ಯ ಮಣಿಪುರದಲ್ಲಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪುರ ಹಿಂಸಾಚಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆದೇಶ ನೀಡಿದ್ದಾರೆ.

Manipur violence: ಮಣಿಪುರ ಹಿಂಸಾಚಾರ ಪ್ರಕರಣ ನ್ಯಾಯಾಂಗ ತನಿಖೆಗೆ ಆದೇಶ: ಅಮಿತ್ ಶಾ
ಅಮಿತ್​​​ ಶಾ

Updated on: Jun 01, 2023 | 11:33 AM

ಇಂಫಾಲ್: ಈಶಾನ್ಯ ರಾಜ್ಯ ಮಣಿಪುರದಲ್ಲಿ ಹಿಂಸಾಚಾರ ಪ್ರಕರಣಕ್ಕೆ (Manipur violence) ಸಂಬಂಧಿಸಿದಂತೆ ಮಣಿಪುರ ಹಿಂಸಾಚಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆದೇಶ ನೀಡಿದ್ದಾರೆ. ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಮಾಜಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ಸಮಿತಿ ತನಿಖೆ ನಡೆಸಲಿದೆ ಮತ್ತು ಶಾಂತಿ ಸಮಿತಿಯನ್ನು ರಚಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ. ರಾಜ್ಯಕ್ಕೆ ನಾಲ್ಕು ದಿನಗಳ ಭೇಟಿ ನೀಡಿದ ಅಮಿತ್​ ಶಾ ಈ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಮಣಿಪುರದಲ್ಲಿ ಆದಷ್ಟು ಬೇಗ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ನಿರಾಶ್ರಿತರನ್ನು ಅವರ ಮನೆಗಳಿಗೆ ಹಿಂದಿರುಗಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಮಣಿಪುರ ಶಾಂತವಾಗಿದೆ . ನಾವು ಜನರಿಗೆ ಅಭಿವೃದ್ಧಿ ಮತ್ತು ಕಲ್ಯಾಣವನ್ನು ತಲುಪಿಸುತ್ತಿದ್ದೇವೆ ಎಂದು ಹೇಳಿದರು.

ಮಣಿಪುರದಲ್ಲಿ ಕುಕಿ ಮತ್ತು ಮೇಟಿ ಸಮುದಾಯದ ನಡುವಿನ ಸಂಘರ್ಷಕ್ಕೆ ಕಾರಣವಾದ ಆತುರದ ನಿರ್ಧಾರದಿಂದ ಮೀಟಿ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ಎಸ್‌ಟಿ) ಸ್ಥಾನಮಾನವನ್ನು ನೀಡಲು ರಾಜ್ಯ ಸರ್ಕಾರವನ್ನು ಶಿಫಾರಸು ಮಾಡುವಂತೆ ಕೇಳಿದೆ. ಕುಕಿಗಳು ಮತ್ತು ಮೇಟಿಗಳೆರಡೂ ನೆಲೆಸಿರುವ ಪರಿಹಾರ ಶಿಬಿರಗಳಿಗೆ ಭೇಟಿ ನೀಡಿದ ಅವರು ಈ ಹೇಳಿಕೆಯನ್ನು ನೀಡಿದ್ದಾರೆ. ಕುಕಿಗಳು ಮತ್ತು ಮೇಟಿ ಸುರಕ್ಷಿತವಾಗಿ ಮನೆಗೆ ಮರುಳುವಂತೆ ಮಾಡುವುದು ನಮ್ಮ ಕರ್ತವ್ಯ , ಆ ಕೆಲಸವನ್ನು ಮಾಡುತ್ತೇವೆ ಎಂದು ಭರವಸೆ ನೀಡಿದರು. ಅವರು ಕಾಂಗ್‌ಪೊಕ್ಪಿ ಮತ್ತು ಮೊರೆಯಲ್ಲಿ ಕುಕಿ ಸಮುದಾಯದ ಮುಖಂಡರು ಮತ್ತು ಸದಸ್ಯರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಇದನ್ನೂ ಓದಿ: Manipur Violence Explainer: ದ್ವೇಷದ ಜ್ವಾಲೆಯಲ್ಲಿ ಹೊತ್ತಿ ಉರಿಯುತ್ತಿದೆ ಮಣಿಪುರ, ಹಿಂಸಾಚಾರಕ್ಕೆ ಕಾರಣವೇನು? ಇಲ್ಲಿದೆ ಮಾಹಿತಿ

ತುರ್ತು ಪರಿಸ್ಥಿತಿಗಳಿಗೆ ಹೆಲಿಕಾಪ್ಟರ್ ಸೇವೆಗಳು ಸೇರಿದಂತೆ ಅಗತ್ಯ ವಸ್ತುಗಳ ಸುರಕ್ಷತೆ ಮತ್ತು ಪೂರೈಕೆಯ ಭರವಸೆ ಕೂಡ ನೀಡಿದರು. ಮೇ 3ರಿಂದ ಪ್ರಕ್ಷುಬ್ಧ ಸ್ಥಿತಿಯಲ್ಲಿರುವ ಮಣಿಪುರಕ್ಕೆ ಷಾ ಭೇಟಿ ನೀಡಿದ್ದು, ಪ್ರಬಲ ಮೈತೆ ಸಮುದಾಯ ಮತ್ತು ಬುಡಕಟ್ಟು ಕುಕಿ ಸಮುದಾಯದ ನಡುವೆ ಘರ್ಷಣೆಗಳು ಭುಗಿಲೆದ್ದಿವೆ. ಹಿಂಸಾಚಾರದಲ್ಲಿ 80 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:22 am, Thu, 1 June 23

Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us