AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manipur: ಮಣಿಪುರದಲ್ಲಿ ಕಮಾಂಡೋ ಕಾರ್ಯಾಚರಣೆ; ಕೆಲವೇ ಗಂಟೆಯಲ್ಲಿ 40 ಮಂದಿ ಎನ್​ಕೌಂಟರ್

Commando Operation In Manipur: ಈಶಾನ್ಯ ರಾಜ್ಯವಾದ ಮಣಿಪುರದಲ್ಲಿ ಹಿಂಸಾಚಾರ ಮುಂದುವರಿಯುತ್ತಿದೆ. ಮೇ 27-28ರ ಮಧ್ಯರಾತ್ರಿಯಲ್ಲಿ ಹಲವು ಪ್ರದೇಶಗಳ ಮೇಲೆ ಏಕಕಾಲದಲ್ಲಿ ದಾಳಿ ಮಾಡಿದ ಉಗ್ರರ ವಿರುದ್ಧ ಕಮಾಂಡೋಗಳು ಪ್ರತಿದಾಳಿ ನಡೆಸಿ 40 ಮಂದಿಯನ್ನು ಹತ್ಯೆಗೈದಿದ್ದಾರೆ.

Manipur: ಮಣಿಪುರದಲ್ಲಿ ಕಮಾಂಡೋ ಕಾರ್ಯಾಚರಣೆ; ಕೆಲವೇ ಗಂಟೆಯಲ್ಲಿ 40 ಮಂದಿ ಎನ್​ಕೌಂಟರ್
ಮಣಿಪುರ ಹಿಂಸಾಚಾರ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 28, 2023 | 5:45 PM

Share

ನವದೆಹಲಿ: ಮಣಿಪುರದಲ್ಲಿ ಎಗ್ಗಿಲ್ಲದೇ ಮುಂದುವರಿಯುತ್ತಿರುವ ಹಿಂಸಾಚಾರಗಳನ್ನು ನಿಗ್ರಹಿಸಲು ಅಲ್ಲಿನ ಪೊಲೀಸ್ ಪಡೆಯ ಕಮಾಂಡೋಗಳು ಉಗ್ರ ಕಾರ್ಯಾಚರಣೆ ನಡೆಸಿದ್ದಾರೆ. ಮೇ 28, ಇಂದು ಬೆಳಗ್ಗೆಯಿಂದ ಮಣಿಪುರದ ವಿವಿಧೆಡೆ ಕಮಾಂಡೋಗಳು ಸಾಕಷ್ಟು ದಂಗೆಕೋರರನ್ನು ಹತ್ಯೆಗೈಯುವಲ್ಲಿ ಸಲಫಲರಾಗಿದ್ದಾರೆ. ಅಲ್ಲಿನ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ನೀಡಿರುವ ಮಾಹಿತಿ ಪ್ರಕಾರ 40 ಉಗ್ರರು ಹತರಾಗಿದ್ದಾರೆ.

ಈ ಉಗ್ರರು ಎಂ-16 ಮತ್ತು ಎಕೆ-47 ರೈಫಲ್​ಗಳು ಮತ್ತು ಸ್ನೈಪರ್ ಗನ್​ಗಳನ್ನು ಜನಸಾಮಾನ್ಯರ ಮೇಲೆ ಉಪಯೋಗಿಸುತ್ತಿದ್ದಾರೆ. ಹಳ್ಳಿಗಳಿಗೆ ಹೋಗಿ ಮನೆಗಳನ್ನು ಸುಟ್ಟುಹಾಕುತ್ತಿದ್ದಾರೆ. ನಮ್ಮ ಸೇನೆ ಮತ್ತು ಭದ್ರತಾ ಪಡೆಗಳ ಸಹಾಯದಿಂದ ಈ ಉಗ್ರರ ಮೇಲೆ ಕಠಿಣ ಕ್ರಮ ಜರುಗಿಸುತ್ತಿದ್ದೇವೆ. 40 ಮಂದಿ ಉಗ್ರರನ್ನು ಸಂಹರಿಸಲಾಗಿರುವ ಬಗ್ಗೆ ನಮಗೆ ವರದಿಗಳು ಬಂದಿವೆ ಎಂದು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಭಾನುವಾರ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿWrestlers Protest: ನೂತನ ಸಂಸತ್ತಿನವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳ ಬಂಧನ

ಮಣಿಪುರದ ಇಂಫಾಲ್ ಕಣಿವೆ ಪ್ರದೇಶದ ಸುತ್ತಲಿನ ಸೆಕ್ಮಾಯ್, ಸುಗ್ನು, ಕುಂಬಿ, ಫಯೆಂಗ್ ಮತ್ತು ಸೆರೌ ಈ ಐದು ಪ್ರದೇಶಗಳ ಮೇಲೆ ಬಂಡುಕೋರರು ರಾತ್ರಿ 2ರ ವೇಳೆಯಲ್ಲಿ ಏಕಕಾಲದಲ್ಲಿ ದಾಳಿ ಆರಂಭಿಸಿದ್ದರು. ಈ ವೇಳೆ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ್ದಾರೆ. ಈಗಲೂ ಕೂಡ ಇಲ್ಲಿ ಗುಂಡಿನ ಕಾಳಗ ಮುಂದುವರಿದಿದೆ. ಸಾಕಷ್ಟು ಮಂದಿ ಸಾವನ್ನಪ್ಪಿದ್ದಾರೆ. ಆದರೆ, ಕೆಲವರ ಶವದ ಗುರುತು ಇನ್ನೂ ಪತ್ತೆಯಾಗಿಲ್ಲ. ಬಿಶೇನ್​ಪುರ್​ನ ಚಂದನ್​ಪೋಕಪಿ ಎಂಬಲ್ಲಿ 27 ವರ್ಷದ ರೈತರೊಬ್ಬರು ಮೃತಪಟ್ಟಿರುವುದು ದೃಢಪಟ್ಟಿದೆ.

‘ಉಗ್ರಗಾಮಿಗಳು ನಿಶ್ಶಸ್ತ್ರಧಾರಿ ನಾಗರಿಕರ ಮೇಲೆ ಗುಂಡಿನ ದಾಳಿ ನಡೆಸುತ್ತಿದ್ದಾರೆ. ಮಣಿಪುರದ ಪತನಕ್ಕೆ ಪ್ರಯತ್ನಿಸುತ್ತಿರುವ ಸಶಸ್ತ್ರಧಾರಿ ಉಗ್ರರು ಹಾಗೂ ಕೇಂದ್ರದಿಂದ ಬೆಂಬಲಿತವಾದ ರಾಜ್ಯ ಸರ್ಕಾರದ ಮಧ್ಯೆ ನಡೆಯುತ್ತಿರುವ ಯುದ್ಧ,’ ಎಂದು ಮಣಿಪುರ ಸಿಎಂ ಬಣ್ಣಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು