Manipur Violence: ಮಣಿಪುರ ಹಿಂಸಾಚಾರ ವಿಚಾರ: ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳಿಂದ ಅವಿಶ್ವಾಸ ನಿರ್ಣಯ ಮಂಡನೆ

ಮಣಿಪುರ ಹಿಂಸಾಚಾರ(Manipur Violence) ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಿವೆ

Manipur Violence: ಮಣಿಪುರ ಹಿಂಸಾಚಾರ ವಿಚಾರ:  ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳಿಂದ ಅವಿಶ್ವಾಸ ನಿರ್ಣಯ ಮಂಡನೆ
ಪ್ರತಿಪಕ್ಷಗಳು
Follow us
ನಯನಾ ರಾಜೀವ್
|

Updated on:Jul 26, 2023 | 12:57 PM

ಮಣಿಪುರ ಹಿಂಸಾಚಾರ(Manipur Violence) ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಿವೆ. ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದ ಕುರಿತು ಮುಂಗಾರು ಅಧಿವೇಶನ ಪ್ರಾರಂಭವಾದಾಗಿನಿಂದಲೂ ಸಂಸತ್ತಿನ  ಉಭಯ ಸದನಗಳಲ್ಲಿ ನಿರಂತರವಾಗಿ ಗದ್ದಲ ನಡೆಯುತ್ತಲೇ ಇತ್ತು.

ಕೇವಲ ಇಂಡಿಯಾ ಒಕ್ಕೂಟ ಮಾತ್ರವಲ್ಲದೆ ಬಿಆರ್​ಎಸ್​ ಪಕ್ಷ ಕೂಡ ಪ್ರತ್ಯೇಕ ಅವಿಶ್ವಾಸ ನಿರ್ಣಯ ಸಲ್ಲಿಸಿದೆ. ಪ್ರಧಾನಿ ಮೋದಿಯವರು ಈ ಕುರಿತು ಮೌನ ಮುರಿಯಬೇಕು ಆಗ ಮಾತ್ರ ದೇಶದ ಜನರಲ್ಲಿ ಶಾಂತಿ ನೆಲೆಸುತ್ತದೆ ಆದ್ದರಿಂದ ಈ ಪ್ರಯತ್ನ ಮಾಡುತ್ತಿದ್ದೇವೆ ಎಂದು ಬಿಆರ್​ಎಸ್ ಸಂಸದ ನಾಮ ನಾಗೇಶ್ವರ ತಿಳಿಸಿದ್ದಾರೆ.

ಅಧಿವೇಶನ ಆರಂಭವಾದಾಗಿನಿಂದ ಎಲ್ಲಾ ಪ್ರತಿಪಕ್ಷಗಳ ನಾಯಕರು ಮಣಿಪುರ ವಿಷಯದ ಬಗ್ಗೆಯೇ ಚರ್ಚೆ ನಡೆಸುತ್ತಿದ್ದಾರೆ. ಲೋಕಸಭೆಯಲ್ಲಿ 543 ಸದಸ್ಯರಿದ್ದು, ಆಡಳಿತಾರೂಢ ಎನ್‍ಡಿಎ ಪ್ರಸ್ತುತ 331 ಬಲವನ್ನು ಹೊಂದಿದೆ. ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟವು ಸದನದಲ್ಲಿ 144 ಸದಸ್ಯ ಬಲ ಹೊಂದಿದೆ.

ವಿರೋಧ ಪಕ್ಷಗಳು ನೆಲ ಪರೀಕ್ಷೆಯಲ್ಲಿ ಗೆಲ್ಲುವ ಸಂಖ್ಯಾಬಲವನ್ನು ಹೊಂದಿಲ್ಲದಿದ್ದರೂ, ಚರ್ಚೆಯ ಸಮಯದಲ್ಲಿ ಮಣಿಪುರ ವಿಷಯದ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಹೇಳಿಕೆ ಪಡೆದುಕೊಳ್ಳುವ ಮೂಲಕ ಸರ್ಕಾರಕ್ಕೆ ಮುಜುಗರ ಉಂಟು ಮಾಡುವ ಉದ್ದೇಶದಿಂದ ಅವಿಶ್ವಾಸ ನಿರ್ಣಯ ಮಂಡನೆ ಮಾಡಿದೆ.

ಮತ್ತಷ್ಟು ಓದಿ: No-Confidence Motion: ಇಂದು ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಪ್ರತಿಪಕ್ಷಗಳ ನಿರ್ಧಾರ

ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭವಾದಾಗಿನಿಂದ ಎರಡೂ ಸದನಗಳನ್ನು ಮುಂದೂಡುವಂತೆ ಒತ್ತಾಯಿಸಿ ವಿರೋಧ ಪಕ್ಷದ ಸದಸ್ಯರು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪ್ರತಿಭಟನೆ ಮತ್ತು ಘೋಷಣೆಗಳನ್ನು ನಡೆಸುತ್ತಿದ್ದಾರೆ.

ಮಣಿಪುರದ ಪರಿಸ್ಥಿತಿ ಕುರಿತು ಕೇಂದ್ರ ಸಚಿವ ಅಮಿತ್ ಶಾ ಉತ್ತರ ನೀಡುತ್ತಾರೆ ಎಂದು ಕೇಂದ್ರ ಸರ್ಕಾರ ಹೇಳುತ್ತಿದ್ದರೂ, ರ್ಣಾಯಕ ವಿಷಯದ ಬಗ್ಗೆ ಸಂಸತ್ತಿನಲ್ಲಿ ಪ್ರಧಾನಿ ಮಾತನಾಡುವಂತೆ ಮಾಡುವುದು ಒಂದು ತಂತ್ರವಾಗಿದೆ ಎಂದು ಅವರು ವಾದಿಸುತ್ತಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:54 pm, Wed, 26 July 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ