Manipur violence: ಮಣಿಪುರ ಹಿಂಸಾಚಾರ: ಸಚಿವರ ಒಡೆತನದ ಖಾಸಗಿ ಗೋಡೌನ್‌ಗೆ ಬೆಂಕಿ ಹಚ್ಚಿದ ಜನರ ಗುಂಪು

ಇಂಫಾಲ್ ಪಶ್ಚಿಮ ಜಿಲ್ಲೆಯ ಲ್ಯಾಂಫೆಲ್ ಪ್ರದೇಶದಲ್ಲಿ ರಾಜ್ಯದ ಮಹಿಳಾ ಸಚಿವೆ ನೆಮ್ಚಾ ಕಿಪ್‌ಗೆನ್ ಅವರ ಅಧಿಕೃತ ಕ್ವಾರ್ಟರ್ಸ್‌ಗೆ ಜೂನ್ 14 ರ ರಾತ್ರಿ ಅಪರಿಚಿತ ವ್ಯಕ್ತಿಗಳು ಬೆಂಕಿ ಹಚ್ಚಿದ್ದರು. ಕೇಂದ್ರ ಸಚಿವ ಆರ್‌ಕೆ ರಂಜನ್ ಸಿಂಗ್ ಅವರ ಮನೆಯ ಮೇಲೆ ದಾಳಿ ನಡೆದಿದ್ದು, ಮರುದಿನ ಮನೆಗೆ ಬೆಂಕಿ ಹಚ್ಚಲು ಪ್ರಯತ್ನಿಸಲಾಯಿತು.

Manipur violence: ಮಣಿಪುರ ಹಿಂಸಾಚಾರ: ಸಚಿವರ ಒಡೆತನದ ಖಾಸಗಿ ಗೋಡೌನ್‌ಗೆ ಬೆಂಕಿ ಹಚ್ಚಿದ ಜನರ ಗುಂಪು
ಪ್ರಾತಿನಿಧಿಕ ಚಿತ್ರ
Follow us
ರಶ್ಮಿ ಕಲ್ಲಕಟ್ಟ
|

Updated on:Jun 24, 2023 | 5:25 PM

ಮಣಿಪುರದಲ್ಲಿ ಹಿಂಸಾಚಾರ (Manipur violence) ಮುಂದುವರಿದಿದೆ. ಇಂಫಾಲ್ (Imphal) ಪೂರ್ವ ಜಿಲ್ಲೆಯ ಚಿಂಗಾರೆಲ್‌ನಲ್ಲಿ ಮಣಿಪುರ ಸಚಿವ ಎಲ್ ಸುಸಿಂದ್ರೋ (L Susindro) ಅವರ ಖಾಸಗಿ ಗೋಡೌನ್‌ಗೆ ಜನರ ಗುಂಪೊಂದು ಬೆಂಕಿ ಹಚ್ಚಿ ಭಸ್ಮ ಮಾಡಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಶುಕ್ರವಾರ ರಾತ್ರಿ ಅದೇ ಜಿಲ್ಲೆಯ ಖುರೈನಲ್ಲಿರುವ ಗ್ರಾಹಕ ಮತ್ತು ಆಹಾರ ವ್ಯವಹಾರಗಳ ಸಚಿವರ ಮತ್ತೊಂದು ಆಸ್ತಿ ಮತ್ತು ಅವರ ನಿವಾಸಕ್ಕೆ ಬೆಂಕಿ ಹಚ್ಚಲು ಪ್ರಯತ್ನಿಸಲಾಯಿತು. ಆದರೆ ಆ ಸಮಯಕ್ಕೆ ಮಧ್ಯಸ್ಥಿಕೆ ವಹಿಸಿದ್ದ ಕಾರಣ ಅದು ತಪ್ಪಿತು. ಜನರ ಗುಂಪು ಖುರೈನಲ್ಲಿರುವ ಸಚಿವರ ನಿವಾಸವನ್ನು ಘೇರಾವ್ ಮಾಡುವುದನ್ನು ತಡೆಯಲು ಭದ್ರತಾ ಪಡೆಗಳು ಮಧ್ಯರಾತ್ರಿಯವರೆಗೆ ಹಲವಾರು ಸುತ್ತಿನ ಅಶ್ರುವಾಯು ಶೆಲ್‌ ಪ್ರಯೋಗಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಇದಕ್ಕೂ ಮುನ್ನ, ಇಂಫಾಲ್ ಪಶ್ಚಿಮ ಜಿಲ್ಲೆಯ ಲ್ಯಾಂಫೆಲ್ ಪ್ರದೇಶದಲ್ಲಿ ರಾಜ್ಯದ ಮಹಿಳಾ ಸಚಿವೆ ನೆಮ್ಚಾ ಕಿಪ್‌ಗೆನ್ ಅವರ ಅಧಿಕೃತ ಕ್ವಾರ್ಟರ್ಸ್‌ಗೆ ಜೂನ್ 14 ರ ರಾತ್ರಿ ಅಪರಿಚಿತ ವ್ಯಕ್ತಿಗಳು ಬೆಂಕಿ ಹಚ್ಚಿದ್ದರು. ಕೇಂದ್ರ ಸಚಿವ ಆರ್‌ಕೆ ರಂಜನ್ ಸಿಂಗ್ ಅವರ ಮನೆಯ ಮೇಲೆ ದಾಳಿ ನಡೆದಿದ್ದು, ಮರುದಿನ ಮನೆಗೆ ಬೆಂಕಿ ಹಚ್ಚಲು ಪ್ರಯತ್ನಿಸಲಾಯಿತು.

ಈಶಾನ್ಯ ರಾಜ್ಯದಲ್ಲಿ ಇದುವರೆಗೆ ಮೈತಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ 100 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಹಲವು ಮನೆಗಳು ಬೆಂಕಿಗಾಹುತಿಯಾಗಿವೆ.  ಪರಿಶಿಷ್ಟ ಪಂಗಡದ (ಎಸ್‌ಟಿ) ಸ್ಥಾನಮಾನಕ್ಕಾಗಿ ಮೈತಿ ಸಮುದಾಯದ ಬೇಡಿಕೆಯನ್ನು ಪ್ರತಿಭಟಿಸಲು ‘ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ’ ಆಯೋಜಿಸಿದ ನಂತರ ಮೇ 3 ರಂದು ಮೊದಲು ಘರ್ಷಣೆಗಳು ಪ್ರಾರಂಭವಾದವು.

ಇದನ್ನೂ ಓದಿ: Manipur violence: ಮಣಿಪುರ ಹಿಂಸಾಚಾರ ನಮ್ಮ ರಾಷ್ಟ್ರದ ಆತ್ಮಸಾಕ್ಷಿಯಲ್ಲಿ ಆಳವಾದ ಗಾಯವನ್ನುಂಟುಮಾಡಿದೆ: ಸೋನಿಯಾ ಗಾಂಧಿ

ಮಣಿಪುರದ ಜನಸಂಖ್ಯೆಯ ಶೇಕಡ 53 ರಷ್ಟಿರುವ ಮೈತಿಗಳು ಇಂಫಾಲ್ ಕಣಿವೆಯಲ್ಲಿ ಹೆಚ್ಚಾಗಿ ವಾಸಿಸುತ್ತಿದ್ದಾರೆ. ಬುಡಕಟ್ಟು ಜನಾಂಗದವರಾದ ನಾಗಾಗಳು ಮತ್ತು ಕುಕಿಗಳು ಜನಸಂಖ್ಯೆಯ ಶೇಕಡಾ 40 ರಷ್ಟಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:23 pm, Sat, 24 June 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್