AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manipur Violence: ಮಣಿಪುರದಲ್ಲಿ ಹಿಂಸಾಚಾರದ ವೇಳೆ ಮತ್ತಿಬ್ಬರು ಯುವತಿಯರ ಮೇಲೆ ನಡೆದಿತ್ತು ಸಾಮೂಹಿಕ ಅತ್ಯಾಚಾರ

ಮಣಿಪುರ ಹಿಂಸಾಚಾರ(Manipur Violence) ದ ಬೆಂಕಿಯಲ್ಲಿ ಬೇಯುತ್ತಿದೆ, ಹಿಂಸಾಚಾರದ ಸಂದರ್ಭದಲ್ಲಿ ಇಬ್ಬರು ಯುವತಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಬಳಿಕ ಅವರನ್ನು ಹತ್ಯೆ ಮಾಡಲಾಗಿತ್ತು ಎನ್ನುವ ವಿಚಾರ ಬೆಳಕಿಗೆ ಬಂದಿದೆ.

Manipur Violence: ಮಣಿಪುರದಲ್ಲಿ ಹಿಂಸಾಚಾರದ ವೇಳೆ ಮತ್ತಿಬ್ಬರು ಯುವತಿಯರ ಮೇಲೆ ನಡೆದಿತ್ತು ಸಾಮೂಹಿಕ ಅತ್ಯಾಚಾರ
ಮಣಿಪುರImage Credit source: Indian Express
ನಯನಾ ರಾಜೀವ್
|

Updated on:Jul 23, 2023 | 9:07 AM

Share

ಮಣಿಪುರ ಹಿಂಸಾಚಾರ(Manipur Violence) ದ ಬೆಂಕಿಯಲ್ಲಿ ಬೇಯುತ್ತಿದೆ, ಹಿಂಸಾಚಾರದ ಸಂದರ್ಭದಲ್ಲಿ ಮತ್ತಿಬ್ಬರು ಯುವತಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಬಳಿಕ ಅವರನ್ನು ಹತ್ಯೆ ಮಾಡಲಾಗಿತ್ತು ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಈ ಯುವತಿಯರು ಕುಕಿ ಬುಡಕಟ್ಟಿಗೆ ಸೇರಿದವರು ಎನ್ನಲಾಗಿದೆ, ಈ ಘಟನೆ ಬಗ್ಗೆ ಪೊಲೀಸರು ಗಂಭೀರ ತನಿಖೆ ನಡೆಸಿಲ್ಲ ಎನ್ನುವ ಆರೋಪ ಕೇಳಿಬಂದಿದೆ. ಆ ವಿಡಿಯೋ ವೈರಲ್ ಆದ ಬಳಿಕ ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ.

ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಸ್ಥಳದಿಂದ 40 ಕಿಮೀ ದೂರದಲ್ಲಿರುವ ಇಂಫಾಲ್‌ನ ಕೊನುಂಗ್ ಮಮಾಂಗ್‌ನಲ್ಲಿ ಈ ಘಟನೆ ನಡೆದಿದೆ. 21ರಿಂದ 24 ವರ್ಷದೊಳಗಿನ ಯುವತಿಯರನ್ನು ಗುಂಪು ಗುರಿಯಾಗಿಸಿತ್ತು. ಈ ಹುಡುಗಿಯರು ಕಾರು ತೊಳೆಯುತ್ತಿದ್ದ ವೇಳೆ, ಈ ಇಬ್ಬರು ಬಾಲಕಿಯರ ಮೇಲೆ ಕೆಲವು ಪುರುಷರ ಗುಂಪು ಹಲ್ಲೆ ನಡೆಸಿ ಅತ್ಯಾಚಾರವೆಸಗಿ ಬಳಿಕ ಕೊಲೆ ಮಾಡಿದ್ದರು.

ಮತ್ತಷ್ಟು ಓದಿ: ಮಣಿಪುರ ಹಿಂಸಾಚಾರದ ವೇಳೆ ಸ್ವಾತಂತ್ರ್ಯ ಹೋರಾಟಗಾರನ ಪತ್ನಿ ಸಜೀವ ದಹನ

ಸಂತ್ರಸ್ತರನ್ನು ಕೋಣೆಯೊಳಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸುವಂತೆ ಗುಂಪಿನಲ್ಲಿದ್ದ ಮಹಿಳೆಯರು ಪುರುಷರನ್ನು ಉತ್ತೇಜಿಸಿದರು ಎಂದು ಘಟನೆಯನ್ನು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ. ಬಾಲಕಿಯರಿಬ್ಬರನ್ನೂ ಕೋಣೆಗೆ ಎಳೆದೊಯ್ದು ಲೈಟ್ ಆಫ್ ಮಾಡಿ ಕಿರುಚಾಡದಂತೆ ಬಾಯಿಗೆ ಬಟ್ಟೆ ಕಟ್ಟಿದ್ದರು.

ಇನ್ನೂ ಕಡಿಮೆಯಾಗದ ಜನಾಂಗೀಯ ಹಿಂಸಾಚಾರದ ಅಲೆಯ ನಡುವೆ ರಾಜ್ಯದ ಕಾಂಗ್‌ಪೋಕ್ಪಿ ಜಿಲ್ಲೆಯ ಮತ್ತೆ ಇಬ್ಬರು ಯುವತಿಯರ ಮೇಲೆ ಬರ್ಬರವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ ಎನ್ನುವ ವಿಚಾರ ಬಯಲಿಗೆ ಬಂದಿದೆ.

ಮೇ 4ರಂದು ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ನಡೆದಿದ್ದ ಹಿಂಸಾಚಾರದ ವೇಳೆ ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ್ದ ವಿಡಿಯೊ ಜುಲೈ 19ರಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಇದರಿಂದ ಈಶಾನ್ಯ ರಾಜ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನಗೊಂಡಿತ್ತು.

ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಕೃತ್ಯಕ್ಕೆ ದೇಶದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಕೃತ್ಯವನ್ನು ಖಂಡಿಸಿ ಮಣಿಪುರದ ಹಲವೆಡೆ ಪ್ರತಿಭಟನೆಗಳು ನಡೆದಿವೆ. ಕುಕಿ ಜೋ ಬುಡಕಟ್ಟು ಮಹಿಳೆಯರನ್ನು ಬೆತ್ತಲೆಗೊಳಿಸಿ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದ ಇಬ್ಬರು ಆರೋಪಿಗಳ ಮನೆಗೆ, ಅವರದ್ದೇ ಗ್ರಾಮದ ಮಹಿಳೆಯರು ಬೆಂಕಿ ಹಚ್ಚಿದ್ದರು.

19 ವರ್ಷದ ಆರೋಪಿಯನ್ನು ಬಂಧಿಸಲಾಗಿದ್ದು, ಇದರೊಂದಿಗೆ ಪ್ರಕರಣ ಸಂಬಂಧ ಈ ವರೆಗೂ ಐವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದಂತಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, 11 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎನ್ನುವ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:06 am, Sun, 23 July 23