Manipur violence: ತುರ್ತು ವಿಚಾರಣೆ ಮನವಿಯನ್ನು ತಿರಸ್ಕರಿಸಿದ ಸುಪ್ರೀಂ

|

Updated on: Jun 20, 2023 | 1:00 PM

ಕುಕಿಗಳ ರಕ್ಷಣೆಗೆ ಸಶಸ್ತ್ರ ಪಡೆಗಳನ್ನು ನಿಯೋಜಿಸಬೇಕು ಮತ್ತು ಮಣಿಪುರದಲ್ಲಿ ಹಿಂಸಾಚಾರ ಮಾಡುತ್ತಿರುವವರ ವಿರುದ್ಧ ಕ್ರಮಕ್ಕೆ ಆದೇಶ ನೀಡಬೇಕು ಎಂಬ ಬೇಡಿಕೆಯ ಮನವಿಯನ್ನು ತುರ್ತು ವಿಚಾರಣೆ ಮಾಡಬೇಕು ಎಂಬ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

Manipur violence: ತುರ್ತು ವಿಚಾರಣೆ ಮನವಿಯನ್ನು ತಿರಸ್ಕರಿಸಿದ ಸುಪ್ರೀಂ
ಸುಪ್ರೀಂಕೋರ್ಟ್
Follow us on

ಇಂಫಾಲ್: ಮಣಿಪುರ ಹಿಂಸಾಚಾರಕ್ಕೆ (Manipur violence) ಸಂಬಂಧಿಸಿದಂತೆ ಈಗಾಗಲೇ ಸುಪ್ರಿಂ ಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದು, ಕುಕಿಗಳ ರಕ್ಷಣೆಗೆ ಸಶಸ್ತ್ರ ಪಡೆಗಳನ್ನು ನಿಯೋಜಿಸಬೇಕು ಮತ್ತು ಮಣಿಪುರದಲ್ಲಿ ಹಿಂಸಾಚಾರ ಮಾಡುತ್ತಿರುವವರ ವಿರುದ್ಧ ಕ್ರಮಕ್ಕೆ ಆದೇಶ ನೀಡಬೇಕು ಎಂಬ ಬೇಡಿಕೆಯ ಮನವಿಯನ್ನು ತುರ್ತು ವಿಚಾರಣೆ ಮಾಡಬೇಕು ಎಂಬ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಇದು ಸಂಪೂರ್ಣವಾಗಿ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆ ಎಂದು ಜುಲೈ 3 ರಂದು ವಿಚಾರಣೆ ಮಾಡಲಾಗುವುದು ಎಂದು ಸುಪ್ರಿಂ ಕೋರ್ಟ್ ಹೇಳಿದೆ.

ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎಂಎಂ ಸುಂದ್ರೇಶ್ ಅವರ ಪೀಠವು ಈ ಆದೇಶವನ್ನು ನೀಡಿದೆ. ಜತೆಗೆ ಇದು ಸಂಪೂರ್ಣವಾಗಿ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆ , ಇದನ್ನು ಸೂಕ್ಷ್ಮವಾಗಿ ವ್ಯವಹರಿಸಬೇಕಾಗಿದೆ ಎಂದು ಹೇಳಿದೆ . ಎನ್‌ಜಿಒ ಮಣಿಪುರ ಟ್ರೈಬಲ್ ಫೋರಂ ಪರವಾಗಿ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವಿಸ್ ಈ ವಿಷಯವನ್ನು ಪ್ರಸ್ತಾಪಿಸಿದರು. ಆದರೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಇದನ್ನು ವಿರೋಧಿಸಿದ್ದರೆ, ಈಗಾಗಲೇ ಮಣಿಪುರ ಹಿಂಸಾಚಾರ ಪ್ರದೇಶದಲ್ಲಿ ಭದ್ರತಾ ಪಡೆ ಇದೆ, ಎಲ್ಲವನ್ನೂ ನಿಭಾಯಿಸುವ ಕೆಲಸ ಮಾಡುತ್ತಿದೆ ಎಂದು ಹೇಳಿದೆ.

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಂಟಿಯಾಗಿ ಈಶಾನ್ಯ ರಾಜ್ಯದ ಕುಕಿ ಬುಡಕಟ್ಟು ಜನಾಂಗದವರ “ಜನಾಂಗೀಯ ನಿರ್ಮೂಲನೆ” ಗುರಿಯನ್ನು ಹೊಂದಿರುವ ಕೋಮುವಾದಿ ಕಾರ್ಯಸೂಚಿಯನ್ನು ಕೈಗೊಂಡಿದ್ದಾರೆ ಎಂದು ಮಣಿಪುರ ಬುಡಕಟ್ಟು ವೇದಿಕೆ ಆರೋಪಿಸಿದೆ. ಕೇಂದ್ರವು ನೀಡಿದ “ಪೊಳ್ಳು ಭರವಸೆಗಳನ್ನು” ನಂಬಬೇಡಿ ಎಂದು ಎನ್‌ಜಿಒ ಸುಪ್ರೀಂ ಕೋರ್ಟ್‌ಗೆ ಒತ್ತಾಯಿಸಿತು ಮತ್ತು ಕುಕಿ ಬುಡಕಟ್ಟು ಜನಾಂಗದವರಿಗೆ ಸೇನೆಯ ರಕ್ಷಣೆಯನ್ನು ಕೋರಿತು.

ಇದನ್ನೂ ಓದಿ:Manipur Violence: ಮಣಿಪುರದಲ್ಲಿ ಸೀಮಿತ ಇಂಟರ್ನೆಟ್ ಸೇವೆ ಒದಗಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದ ಹೈಕೋರ್ಟ್​

ಒಂದು ತಿಂಗಳ ಹಿಂದೆ ಮಣಿಪುರದಲ್ಲಿ ಮೈತೆಯಿ ಮತ್ತು ಕುಕಿ ಸಮುದಾಯಗಳ ನಡುವೆ ಭುಗಿಲೆದ್ದ ಹಿಂಸಾಚಾರದಲ್ಲಿ 100 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಮೇ 3ರಂದು ಮಣಿಪುರದಲ್ಲಿ ಮೊದಲ ಬಾರಿಗೆ ಘರ್ಷಣೆಗಳು ಪ್ರಾರಂಭವಾದವು, ಪರಿಶಿಷ್ಟ ಪಂಗಡದ (ಎಸ್‌ಟಿ) ಸ್ಥಾನಮಾನಕ್ಕಾಗಿ ಮೀಟೈ ಸಮುದಾಯದ ಬೇಡಿಕೆಯನ್ನು ಇಟ್ಟು ಪ್ರತಿಭಟಿಸಲು ಬೆಟ್ಟದ ಜಿಲ್ಲೆಗಳಲ್ಲಿ ‘ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ’ ಆಯೋಜಿಸಲಾಯಿತು.

ಮಣಿಪುರದ ಜನಸಂಖ್ಯೆಯ ಶೇಕಡ 53 ರಷ್ಟಿರುವ ಮೈತೈಗಳು ಇಂಫಾಲ್ ಕಣಿವೆಯಲ್ಲಿ ಹೆಚ್ಚಾಗಿ ವಾಸಿಸುತ್ತಿದ್ದಾರೆ. ಬುಡಕಟ್ಟು ಜನಾಂಗದವರು – ನಾಗಾಗಳು ಮತ್ತು ಕುಕಿಗಳು -ಜನಸಂಖ್ಯೆಯ ಶೇಕಡಾ 40 ರಷ್ಟಿದ್ದಾರೆ ಮತ್ತು ಗುಡ್ಡಗಾಡು ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ ಎಂದು ಹೇಳಿತ್ತು. ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ. ಆದರೂ ಬಿಜೆಪಿ ಶಾಸಕರು ಹಾಗೂ ಸಂಸದ ನಿವಾಸದ ಮೇಲೆ ದಾಳಿ ಹಾಗೂ ಮನೆಗಳಿಗೆ ಬೆಂಕಿ ಹಚ್ಚುವ ಕೆಲಸ, ಸಾರ್ವಜನಿಕ ಆಸ್ತಿಗಳನ್ನು ಹಾನಿಗೊಳಿಸಿರುವ ಘಟನೆ ನಡೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:30 am, Tue, 20 June 23