ಮಣಿಪುರ ಹಿಂಸಾಚಾರ: ಸಿಬಿಐ ತನಿಖೆ ನಡೆಸುತ್ತಿರುವ ಎಲ್ಲ ಪ್ರಕರಣಗಳ ವಿಚಾರಣೆ ಅಸ್ಸಾಂ ಹೈಕೋರ್ಟ್ಗೆ ವರ್ಗಾಯಿಸಿದ ಸುಪ್ರೀಂ
ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಬಿಐ ತನಿಖೆ ನಡೆಸುತ್ತಿರುವ ಎಲ್ಲ ಪ್ರಕರಣಗಳ ವಿಚಾರಣೆಯನ್ನು ಅಸ್ಸಾಂ ಹೈಕೋರ್ಟ್ಗೆ ವರ್ಗಾಯಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಇಂದು (ಆ.25) ಆದೇಶವನ್ನು ನೀಡಿದೆ. ಈ ವಿಷಯವನ್ನು ವ್ಯವಹರಿಸಲು ಒಬ್ಬರು ಅಥವಾ ಹೆಚ್ಚಿನ ನ್ಯಾಯಾಂಗ ಅಧಿಕಾರಿಗಳನ್ನು ನಾಮನಿರ್ದೇಶನ ಮಾಡುವಂತೆ ಗುವಾಹಾಟಿ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರನ್ನು ಕೇಳಿದೆ.
ದೆಹಲಿ, ಆ.25: ಮಣಿಪುರ ಹಿಂಸಾಚಾರಕ್ಕೆ (Manipur violence) ಸಂಬಂಧಿಸಿದಂತೆ ಈಗಾಗಲೇ ಸಿಬಿಐ (Central Bureau of Investigation) ತನಿಖೆ ನಡೆಸುತ್ತಿರುವ ಎಲ್ಲ ಪ್ರಕರಣಗಳ ವಿಚಾರಣೆಯನ್ನು ಅಸ್ಸಾಂ ಹೈಕೋರ್ಟ್ಗೆ ವರ್ಗಾಯಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಇಂದು (ಆ.25) ಆದೇಶವನ್ನು ನೀಡಿದೆ. ಈ ವಿಷಯವನ್ನು ವ್ಯವಹರಿಸಲು ಒಬ್ಬರು ಅಥವಾ ಹೆಚ್ಚಿನ ನ್ಯಾಯಾಂಗ ಅಧಿಕಾರಿಗಳನ್ನು ನಾಮನಿರ್ದೇಶನ ಮಾಡುವಂತೆ ಗುವಾಹಾಟಿ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರನ್ನು ಕೇಳಿದೆ. ಇನ್ನು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಮಣಿಪುರ ಹಿಂಸಾಚಾರದ ಅರ್ಜಿಯನ್ನು ವಿಚಾರಣೆ ನಡೆಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸದಂತೆ ಹಲವು ನಿರ್ದೇಶನಗಳನ್ನು ನೀಡಿದೆ. ಜತೆಗೆ ಆರೋಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸುವ ಪ್ರಕ್ರಿಯೆ, ಬಂಧನ, ನ್ಯಾಯಾಂಗ ಬಂಧನ ಮತ್ತು ಅದರ ವಿಸ್ತರಣೆಗೆ ಸಂಬಂಧಿಸಿದ ನ್ಯಾಯಾಂಗ ಕಾರ್ಯವಿಧಾನಗಳನ್ನು ಗುವಾಹಾಟಿ ಹೈಕೋರ್ಟ್ ಆನ್‌ಲೈನ್ ಮೂಲಕ ನಡೆಸಲಿದೆ ಎಂದು ಹೇಳಿದೆ.
ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಈಗಾಗಲೇ ನ್ಯಾಯಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ಅವರನ್ನು ವಿಚಾರಣೆಗೆ ಮಣಿಪುರದಿಂದ ಗೌಹಾಟಿಯ ಹೈಕೋರ್ಟ್ಗೆ ಕರೆದುಕೊಂಡ ಬರಲು ಸಾಧ್ಯವಾಗದಿದ್ದಾರೆ, ಆನ್‌ಲೈನ್ ಮೂಲಕವೇ ಅವರನ್ನು ನ್ಯಾಯಧೀಶರ ಮುಂದೆ ಹಾಜರು ಪಡಿಸಬಹುದು ಎಂದು ಹೇಳಿದೆ. ಒಂದು ವೇಳೆ ನೆಟ್ವರ್ಕ್ ಸಮಸ್ಯೆ ಅಥವಾ ತಾಂತ್ರಿಕ ದೋಷಗಳಿಂದ ಆನ್ಲೈನ್ನಲ್ಲಿ ಹಾಜರುಪಡಿಸಲು ಸಾಧ್ಯವಾಗದಿದ್ದಾರೆ ಅಥವಾ ಅವರನ್ನು ಕೋರ್ಟ್ ಮುಂದೆ ಕರೆದುಕೊಂಡು ಬರುವುದು ಅನಿವಾರ್ಯ ಇದೆ ಎಂದು ಕಂಡು ಬಂದರೆ ಮಾತ್ರ ಅವರನ್ನು ನ್ಯಾಯಲಯದ ಮುಂದೆ ಕರೆದುಕೊಂಡು ಬರಲು ಅನುಮತಿ ನೀಡಲಾಗಿದೆ.
ಇದನ್ನೂ ಓದಿ: ಮಣಿಪುರ ಲೈಂಗಿಕ ದೌರ್ಜನ್ಯ ಪ್ರಕರಣ ತನಿಖೆ ಸಿಬಿಐಗೆ; ಎಫ್ಐಆರ್ ದಾಖಲು
ಇನ್ನು ಗುವಾಹಾಟಿ ನ್ಯಾಯಾಲಯದಲ್ಲಿ ಆನ್‌ಲೈನ್ ಮೋಡ್ ಮೂಲಕ ಸಿಬಿಐ ಪ್ರಕರಣಗಳ ವಿಚಾರಣೆಗೆ ಅನುಕೂಲವಾಗುವಂತೆ ಸರಿಯಾದ ಇಂಟರ್ನೆಟ್ ಸೇವೆಗಳನ್ನು ಒದಗಿಸುವಂತೆ ಮಣಿಪುರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಆಗಸ್ಟ್ 21ರಂದು, ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದ ಸಂತ್ರಸ್ತರ ಪರಿಹಾರ ಮತ್ತು ಪುನರ್ವಸತಿ ಮೇಲ್ವಿಚಾರಣೆಗೆ ನ್ಯಾಯಮೂರ್ತಿ ಗೀತಾ ಮಿತ್ತಲ್ ಸಮಿತಿಯನ್ನು ಸುಪ್ರೀಂ ಕೋರ್ಟ್ ನೇಮಿಸಿತ್ತು. ಇದರ ಜತೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಇಬ್ಬರು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ ಸೇರಿದಂತೆ 10ಕ್ಕೂ ಹೆಚ್ಚು ಪ್ರಕರಣಗಳನ್ನು ಸಿಬಿಐಗೆ ವರ್ಗಾಯಿಸಲಾಗಿದೆ.
ಈ ಜನಾಂಗೀಯ ಹಿಂಸಾಚಾರದಿಂದ ಹಲವಾರು ಮಣಿಪುರ ನಿವಾಸಿಗಳು ತಮ್ಮ ಗುರುತಿನ ದಾಖಲೆಗಳನ್ನು ಕಳೆದುಕೊಂಡಿರುವುದನ್ನು ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಗಮನಿಸಿದ್ದು, ಈಗಾಗಲೇ ಸುಪ್ರೀಂ ನೇಮಿಸಿದ ಸಮಿತಿಯು ಆಧಾರ್ ಕಾರ್ಡ್ ಮತ್ತು ಇತರ ದಾಖಲೆಗಳನ್ನು ತಕ್ಷಣದಿಂದಲೇ ನೀಡಲು ರಾಜ್ಯ ಸರ್ಕಾರ ಮತ್ತು ಯುಐಡಿಎಐ ಸೇರಿದಂತೆ ಇತರರಿಗೆ ಇಲಾಖೆ ನಿರ್ದೇಶನ ರವಾನಿಸುವಂತೆ ಸುಪ್ರೀಂ ಕೋರ್ಟ್‌ಗೆ ಹೇಳಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 4:06 pm, Fri, 25 August 23