ಮಣಿಪುರ ಗಲಭೆ: ‘ಇಂಡಿಯಾ’ ಮೈತ್ರಿಕೂಟ ದ್ವಂದ್ವ ನೀತಿ ಅನುಸರಿಸುತ್ತಿದೆ: ಕೇಂದ್ರ ಸಚಿವ ಅನುರಾಗ್ ಠಾಕೂರ್ ಕಿಡಿ

|

Updated on: Jul 30, 2023 | 8:55 PM

ಹಿಂಸಾಚಾರ ಪೀಡಿತ ಮಣಿಪುರಕ್ಕೆ ತೆರಳಿರುವ ಇಂಡಿಯಾ ಮೈತ್ರಿಕೂಟದ 21 ಸದಸ್ಯರ ವಿರುದ್ಧ ಕೇಂದ್ರ ಸಚಿವ ಅನುರಾಗ್ ಠಾಕೂರ್ ವಾಗ್ದಾಳಿ ನಡೆಸಿದ್ದು, ಜನಾಂಗೀಯ ಗಲಭೆ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ವಿಷಯದಲ್ಲಿ ಪ್ರತಿಪಕ್ಷ 'ಇಂಡಿಯಾ' ಮೈತ್ರಿಕೂಟ ದ್ವಂದ್ವ ನೀತಿ ಅನುಸರಿಸುತ್ತಿದೆ ಎಂದಿದ್ದಾರೆ.

ಮಣಿಪುರ ಗಲಭೆ: ಇಂಡಿಯಾ ಮೈತ್ರಿಕೂಟ ದ್ವಂದ್ವ ನೀತಿ ಅನುಸರಿಸುತ್ತಿದೆ: ಕೇಂದ್ರ ಸಚಿವ ಅನುರಾಗ್ ಠಾಕೂರ್ ಕಿಡಿ
ಕೇಂದ್ರ ಸಚಿವ ಅನುರಾಗ್ ಠಾಕೂರ್
Follow us on

ನವದೆಹಲಿ, ಜುಲೈ 30: ಮಣಿಪುರದ ಜನಾಂಗೀಯ ಗಲಭೆ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ವಿಷಯದಲ್ಲಿ ಪ್ರತಿಪಕ್ಷ ‘ಇಂಡಿಯಾ’ ಮೈತ್ರಿಕೂಟದ ಸದಸ್ಯರು ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ (Anurag Thakur) ವಾಗ್ದಾಳಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದಿನ ಕಾಂಗ್ರೆಸ್ ಆಡಳಿತಾವಧಿಯಲ್ಲಿ ಮಣಿಪುರ ಹೊತ್ತಿ ಉರಿದಿತ್ತು. ನೂರಾರು ಹತ್ಯೆಗಳು ನಡೆದಿದ್ದವು. ಆದರೆ ಅಂದಿನ ಪ್ರಧಾನಿ ಸದನದಲ್ಲಿ ತುಟಿಬಿಚ್ಚಲಿಲ್ಲ ಎಂದು ಕಿಡಿಕಾರಿದ್ದಾರೆ.

ಮಣಿಪುರ ಗಲಭೆಯ ಸೂಕ್ಷ್ಮತೆಯ ಬಗ್ಗೆ ಚರ್ಚೆ ಮಾಡಲು ನಾವು ಯಾವಾಗಲೂ ಸಿದ್ಧರಿದ್ದೇವೆ. ಮಣಿಪುರಕ್ಕೆ ಹೋದ ಎಲ್ಲಾ ಸಂಸದರು ನಾಳೆ ಚರ್ಚೆಗೆ ಸದನಕ್ಕೆ ಬರುತ್ತಾರೆ ಎಂದು ಆಶಿಸುತ್ತೇವೆ. ಓಡಿಹೋಗದೇ ನಿಮ್ಮ ಅನುಭವಗಳನ್ನು ಹಂಚಿಕೊಳ್ಳಿ ಎಂದು ಸಚಿವ ಅನುರಾಗ್ ಠಾಕೂರ್ ಸವಾಲು ಹಾಕಿದ್ದಾರೆ.

ಇದನ್ನೂ ಓದಿ: Manipur Violence: ಅಕ್ರಮ ಮ್ಯಾನ್ಮಾರ್ ವಲಸಿಗರ ಬಯೋಮೆಟ್ರಿಕ್​ ವಿವರ ಸಂಗ್ರಹ ಪ್ರಕ್ರಿಯೆಗೆ ಚಾಲನೆ

‘ಇಂಡಿಯಾ’ ಮೈತ್ರಿಕೂಟದ ಸದಸ್ಯರು ಕೇವಲ ಮಣಿಪುರಕ್ಕೆ ಭೇಟಿ ನೀಡಿದರೆ ಸಾಲದು. ಮಹಿಳೆಯರು ದೌರ್ಜನ್ಯ ಎದುರಿಸುತ್ತಿರುವ ಪಶ್ಚಿಮ ಬಂಗಾಳಕ್ಕೂ ಭೇಟಿ ನೀಡಬೇಕಿತ್ತು ಎಂದಿದ್ದಾರೆ.

‘ಇಂಡಿಯಾ’ ಮೈತ್ರಿಕೂಟದ 21 ಸದಸ್ಯರು ನಿನ್ನೆ ಮತ್ತು ಇಂದು ಹಿಂಸಾಚಾರ ಪೀಡಿತ ಮಣಿಪುರದಲ್ಲಿನ ವಸ್ತುಸ್ಥಿತಿ ಅಧ್ಯಯನ ಮಾಡಿದ್ದಾರೆ. ಇಂಫಾಲ, ಮೊಯಿರಾಂಗ್ ಸೇರಿದಂತೆ ನಿರಾಶ್ರಿತರ ಶಿಬಿರದಲ್ಲಿ ನೂರಾರು ಮಂದಿ ಸಂತ್ರಸ್ತರನ್ನ ನೋವನ್ನ ಆಲಿಸಿದ್ದಾರೆ. ನಿರಾಶ್ರಿತರ ಕೇಂದ್ರಗಳಲ್ಲಿನ ಸಮಸ್ಯೆಗಳನ್ನ ಪರಿಶೀಲಿಸಿ ಸಂತ್ರಸ್ತರಿಗೆ ಆತ್ಮಸ್ಥೈರ್ಯ ತುಂಬಿದ್ದಾರೆ.

ಇದನ್ನೂ ಓದಿ: ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಬಗ್ಗೆ ಮೌನವೇಕೆ?: ಸ್ಮೃತಿ ಇರಾನಿಯನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ಇಂದು ದೆಹಲಿಗೆ ಆಗಮಿಸುವ ಮುನ್ನ ರಾಜಭವನಕ್ಕೆ ತೆರಳಿದ ನಿಯೋಗ ರಾಜ್ಯಪಾಲರಾದ ಅನುಸೂಯಾ ಉಯಿಕೆ ಅವರನ್ನು ಭೇಟಿ ಮಾಡಿತ್ತು. ಮಣಿಪುರದಲ್ಲಿ ಶಾಂತಿ ಸ್ಥಾಪಿಸಲು ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:51 pm, Sun, 30 July 23