ದೆಹಲಿ: ಜಾತಿ ವಿಚಾರಕ್ಕಾಗಿ ಮಣಿಪುರ(Manipur)ದಲ್ಲಿ ದ್ವೇಷದ ಜ್ವಾಲೆಯಲ್ಲಿ ಹೊತ್ತಿ ಉರಿಯುತ್ತಿದೆ. ಮೈತಿ ಜನಾಂಗಕ್ಕೆ ಪರಿಶಿಷ್ಟ ಸ್ಥಾನಮಾನದ ಬೇಡಿಕೆ ವಿರೋಧಿಸಿ ನಡೆದ ಮೆರವಣಿಗೆಯಲ್ಲಿ ಹಿಂಸಾಚಾರ ನಡೆದಿತ್ತು. ಗುಡ್ಡಗಾಡು ಜಿಲ್ಲೆಯಾದ ಚುರಾಚಂದ್‌ಪುರದಿಂದ ರಾಜಧಾನಿ ಇಂಫಾಲ್‌ವರೆಗೆ ಮಣಿಪುರ ರಾಜ್ಯಾದ್ಯಂತ ಕುಕಿ ಬುಡಕಟ್ಟು ಜನಾಂಗ ಮತ್ತು ಬಹುಸಂಖ್ಯಾತ ಮೈತಿ ಸಮುದಾಯದ ನಡುವಿನ ಹಿಂಸಾಚಾರವು ಉತ್ತುಂಗಕ್ಕೇರಿದೆ. ಇದೀಗ ಈ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಮಣಿಪುರ ಹಿಂಸಾಚಾರದ ಬಗ್ಗೆ ಎಸ್‌ಐಟಿ ತನಿಖೆಗೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸುತ್ತಿದ್ದಂತೆ, ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ರಾಜ್ಯದಲ್ಲಿ ಹಿಂಸಾಚಾರದಿಂದಾಗಿ ಜೀವ ಮತ್ತು ಆಸ್ತಿಪಾಸ್ತಿ ನಷ್ಟದ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಈ ಹಿಂಸಾಚಾರದಿಂದಾಗಿ ಮನೆ, ಬದುಕು ಕಳೆದುಕೊಂಡು ನಿರಾಶ್ರಿತರಾಗಿರುವ ಜನರ ರಕ್ಷಣೆ ಸಂಬಂಧಿಸಿದಂತೆ ತಕ್ಷಣದ ಕ್ರಮ ತೆಗೆದುಕೊಳ್ಳುವಂತೆ ಕೇಂದ್ರ ಮತ್ತು ರಾಜ್ಯಕ್ಕೆ ಆದೇಶ ನೀಡಿದೆ. ಈಗಾಗಲೇ ಸ್ಥಳಾಂತರಗೊಂಡ ಜನರ ಬಗ್ಗೆ ಅವರ ಮುಂದಿನ ಜೀವನದ ಬಗ್ಗೆ ಯಾವ ಕ್ರಮ ತೆಗೆದುಕೊಂಡಿದ್ದೀರಾ ಎಂದು ಸುಪ್ರೀಂ ಕೇಳಿದೆ.
ಮೈತಿ ಜನಾಂಗಕ್ಕೆ ಪರಿಶಿಷ್ಟ ಸ್ಥಾನಮಾನದ ಬೇಡಿಕೆ ವಿರೋಧಿಸಿ ನಡೆದ ಮೆರವಣಿಗೆಯಲ್ಲಿ ಹಿಂಸಾಚಾರ ನಡೆದಿತ್ತು. ಗುಡ್ಡಗಾಡು ಜಿಲ್ಲೆಯಾದ ಚುರಾಚಂದ್‌ಪುರದಿಂದ ರಾಜಧಾನಿ ಇಂಫಾಲ್‌ವರೆಗೆ ಮಣಿಪುರ ರಾಜ್ಯಾದ್ಯಂತ ಕುಕಿ ಬುಡಕಟ್ಟು ಜನಾಂಗ ಮತ್ತು ಬಹುಸಂಖ್ಯಾತ ಮೈತಿ ಸಮುದಾಯದ ನಡುವಿನ ಹಿಂಸಾಚಾರವು ಉತ್ತುಂಗಕ್ಕೇರಿದೆ. ಬುಡಕಟ್ಟು ಜನಾಂಗದ ಐಕ್ಯತೆಯ ಮೆರವಣಿಗೆಯಲ್ಲಿ ಎಂಟು ಜಿಲ್ಲೆಗಳು ಹಿಂಸಾಚಾರದ ಹಿಡಿತಕ್ಕೆ ಒಳಗಾದವು. ಇಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಇಂಟರ್ನೆಟ್ ಸ್ಥಗಿತ ಉಂಟಾಗಿದೆ.
ಹಿಂಸಾಚಾರ ಪೀಡಿತ ಮಣಿಪುರದಲ್ಲಿ (Manipur) ಕರ್ಫ್ಯೂ ಜಾರಿಯಲ್ಲಿರುವುದರಿಂದ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದು ಶಾಂತಿ ಕಾಪಾಡುವಂತೆ ಜನತೆಗೆ ಮನವಿ ಮಾಡಿದರು. ಇಂಡಿಯಾ ಟುಡೇ/ಆಜ್ ತಕ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಶಾ, ಮೈತಿ ಸಮುದಾಯಕ್ಕೆ ಪರಿಶಿಷ್ಟ ಪಂಗಡ-ಸ್ಥಾನಮಾನದ ವಿಷಯದಲ್ಲಿ ನಿರ್ಧಾರ ತೆಗೆದುಕೊಳ್ಳುವ ಮೊದಲು ಮಣಿಪುರ ಸರ್ಕಾರವು ಎಲ್ಲಾ ಮಧ್ಯಸ್ಥಗಾರರನ್ನು ಸಂಪರ್ಕಿಸುತ್ತದೆ ಎಂದು ಭರವಸೆ ನೀಡಿದರು. ನ್ಯಾಯಾಲಯವು ಆದೇಶ ನೀಡಿದೆ.ಈ ಬಗ್ಗೆ ಎಲ್ಲಾ ಸಂಬಂಧಿತ ಪಾಲುದಾರರೊಂದಿಗೆ ಚರ್ಚಿಸಲಾಗುವುದು ಮತ್ತು ಸಮಾಲೋಚನೆಯ ನಂತರ ಮಣಿಪುರ ಸರ್ಕಾರವು ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ. ಯಾವುದೇ ವ್ಯಕ್ತಿ ಅಥವಾ ಗುಂಪು ಭಯಪಡುವ ಅಗತ್ಯವಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:58 pm, Mon, 8 May 23