Manipur: ಮಣಿಪುರದಲ್ಲಿ ಮತ್ತೆ ಹಿಂಸಾಚಾರ; ಮಹಿಳೆಯ ಗುಂಡಿಕ್ಕಿ ಹತ್ಯೆ

|

Updated on: Jul 16, 2023 | 12:32 PM

ಮಣಿಪುರ ಪೊಲೀಸರು ಆರೋಪಿಗಳನ್ನು ಬಂಧಿಸಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಗುಂಡಿನ ದಾಳಿ ನಡೆದ ಪ್ರದೇಶವನ್ನು ಪೊಲೀಸರು ಸುತ್ತುವರಿದಿದ್ದು, ಸಮೀಪದ ಪ್ರದೇಶಗಳಲ್ಲಿನ ಮನೆಗಳಲ್ಲೂ ಶೋಧ ನಡೆಸಲಾಗುತ್ತಿದೆ.

Manipur: ಮಣಿಪುರದಲ್ಲಿ ಮತ್ತೆ ಹಿಂಸಾಚಾರ; ಮಹಿಳೆಯ ಗುಂಡಿಕ್ಕಿ ಹತ್ಯೆ
ಸಾಂದರ್ಭಿಕ ಚಿತ್ರ
Follow us on

ಇಂಫಾಲ: ಮಣಿಪುರದಲ್ಲಿ ಮತ್ತೊಂದು ಗುಂಡಿನ ದಾಳಿ ನಡೆದಿದ್ದು, ಪೂರ್ವ ಇಂಫಾಲ್​​ನಲ್ಲಿ (Imphal) ಮಹಿಳೆಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಜಿಲ್ಲೆಯ ಸಾವೊಂಬಂಗ್ ಪ್ರದೇಶದಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದುಷ್ಕರ್ಮಿಗಳು 50 ವರ್ಷ ವಯಸ್ಸಿನ ಮಾರಿಂಗ್ ಎಂಬ ಮಹಿಳೆಯ ಮನೆಗೆ ನುಗ್ಗಿ ಅವರ ಮುಖದ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ. ದಾಳಿಕೋರರು ಮಹಿಳೆಯ ಮೇಲೆ ಗುಂಡು ಹಾರಿಸಿದ್ದರ ಜತೆಗೆ, ಘಟನಾ ಸ್ಥಳದಿಂದ ಪಲಾಯನ ಮಾಡುವ ಮೊದಲು ಆಕೆಯ ಮುಖವನ್ನು ವಿರೂಪಗೊಳಿಸಿದ್ದಾರೆ ಎನ್ನಲಾಗಿದೆ.

ಮಣಿಪುರ ಪೊಲೀಸರು ಆರೋಪಿಗಳನ್ನು ಬಂಧಿಸಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಗುಂಡಿನ ದಾಳಿ ನಡೆದ ಪ್ರದೇಶವನ್ನು ಪೊಲೀಸರು ಸುತ್ತುವರಿದಿದ್ದು, ಸಮೀಪದ ಪ್ರದೇಶಗಳಲ್ಲಿನ ಮನೆಗಳಲ್ಲೂ ಶೋಧ ನಡೆಸಲಾಗುತ್ತಿದೆ. ಘಟನೆ ಸಂಬಂಧ ಪೊಲೀಸರು ಈಗಾಗಲೇ ಸುತ್ತಮುತ್ತಲಿನ ಜನರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.

ಮೃತ ಮಹಿಳೆ ನಾಗಾ ಸಮುದಾಯಕ್ಕೆ ಸೇರಿದವರಾಗಿದ್ದು, ಕೆಲವು ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ವಿದೇದಿಂದ ಬಂದ ಕೂಡಲೇ ದೆಹಲಿ ಲೆಫ್ಟಿನೆಂಟ್ ಗವರ್ನರ್ ಜತೆ ಪ್ರಧಾನಿ ಮೋದಿ ಮಾತುಕತೆ; ಪ್ರವಾಹ ನಿಯಂತ್ರಣ ಕುರಿತು ಚರ್ಚೆ

ಹಿಂಸಾಚಾರದಿಂದಾಗಿ ಸುದೀರ್ಘ ಅವಧಿಗೆ ಮುಚ್ಚಲ್ಪಟ್ಟಿದ್ದ ಶಿಕ್ಷಣ ಸಂಸ್ಥೆಗಳು ಶುಕ್ರವಾರವಷ್ಟೇ ಮರಳಿ ಕಾರ್ಯಾರಂಭ ಮಾಡಿದ್ದವು. ಇದಾದ ನಂತರ ಒಂದು ದಿನದ ಅವಧಿಯಲ್ಲಿ ಪಶ್ಚಿಮ ಇಂಫಾಲ್ ಜಿಲ್ಲೆಯ ಶಾಲೆಯೊಂದರ ಹೊರಗೆ ಮಹಿಳೆಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಈಶಾನ್ಯ ರಾಜ್ಯವಾದ ಮಣಿಪುರದಲ್ಲಿ ಮೇ ತಿಂಗಳಲ್ಲಿ ಹಿಂಸಾಚಾರ ಆರಂಭಗೊಂಡಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ