ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: ಬಂಧಿತ 4 ಆರೋಪಿಗಳಿಗೆ 11 ದಿನಗಳ ಪೊಲೀಸ್ ಕಸ್ಟಡಿ

|

Updated on: Jul 21, 2023 | 6:47 PM

ಮಹಿಳೆಯರನ್ನು ವಿವಸ್ತ್ರಗೊಳಿಸಿ ನಂತರ ಪರೇಡ್ ಮಾಡಿ ಹಲ್ಲೆ ನಡೆಸಿದ ಗುಂಪಿನ ಭಾಗವಾಗಿದ್ದ ಎಲ್ಲಾ ನಾಲ್ವರು ಆರೋಪಿಗಳನ್ನು ಶುಕ್ರವಾರ 11 ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಮಣಿಪುರ ಪೊಲೀಸರು ಹೇಳಿದ್ದಾರೆ.

ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: ಬಂಧಿತ 4 ಆರೋಪಿಗಳಿಗೆ 11 ದಿನಗಳ ಪೊಲೀಸ್ ಕಸ್ಟಡಿ
ಮಣಿಪುರ
Follow us on

ಇಂಫಾಲ್ ಜುಲೈ 21: ಮಣಿಪುರದಲ್ಲಿ (Manipur) ತೌಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಮೈನಲ್ಲಿ  ಮೇ 4 ರಂದು ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ನಂತರ ಪರೇಡ್ ಮಾಡಿ ಹಲ್ಲೆ ನಡೆಸಿದ ಗುಂಪಿನ ಭಾಗವಾಗಿದ್ದ ಎಲ್ಲಾ ನಾಲ್ವರು ಆರೋಪಿಗಳನ್ನು ಶುಕ್ರವಾರ 11 ದಿನಗಳ ಪೊಲೀಸ್ ಕಸ್ಟಡಿಗೆ(Police Custody) ನೀಡಲಾಗಿದೆ ಎಂದು ಮಣಿಪುರ ಪೊಲೀಸರನ್ನು (Manipur Police) ಉಲ್ಲೇಖಿಸಿ ಎಎನ್ಐ ವರದಿ ಮಾಡಿದೆ. ಆರೋಪಿಗಳನ್ನು ಪೊಲೀಸರು ಗುರುವಾರ ಬಂಧಿಸಿದ್ದರು.

ವೈರಲ್ ವಿಡಿಯೊ ಪ್ರಕರಣದಲ್ಲಿ ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ತೌಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಮೈ  ಪೊಲೀಸ್ ಠಾಣೆ  ಅಡಿಯಲ್ಲಿ ಅಪಹರಣ ಮತ್ತು ಸಾಮೂಹಿಕ ಅತ್ಯಾಚಾರದ ಘೋರ ಅಪರಾಧದಲ್ಲಿ ಮೂರು ಪ್ರಮುಖ ಆರೋಪಿಗಳನ್ನು ಇಂದು ಬಂಧಿಸಲಾಗಿದೆ.  ಒಟ್ಟು 04 ನಾಲ್ಕುವ್ಯಕ್ತಿಗಳನ್ನು ಇಲ್ಲಿಯವರೆಗೆ ಬಂಧಿಸಲಾಗಿದೆ ಎಂದು ಮಣಿಪುರ ಪೊಲೀಸರು ಗುರುವಾರ ಟ್ವೀಟ್ ಮಾಡಿದ್ದಾರೆ.

ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗಳು ಭುಗಿಲೆದ್ದ ಒಂದು ದಿನದ ನಂತರ, ಮೇ 4 ರಂದು ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.
ಅದೇ ವಿಡಿಯೊ ವೈರಲ್ ಆದ ನಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಪ್ರಮುಖ ಆರೋಪಿ ಸೇರಿದಂತೆ 4 ಜನರನ್ನು ಬಂಧಿಸಿದ್ದಾರೆ.
ಪೊಲೀಸರು ಗುರುವಾರ ರಾತ್ರಿ ಅಪರಿಚಿತ ಶಸ್ತ್ರಸಜ್ಜಿತ ವ್ಯಕ್ತಿಗಳ ವಿರುದ್ಧ ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ತೌಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಮೈ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ. ಅಪರಾಧಿಗಳನ್ನು ಶೀಘ್ರವಾಗಿ ಬಂಧಿಸಲು ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದರು.

ಬಹುಸಂಖ್ಯಾತ ಸಮುದಾಯವನ್ನು ಒಳಗೊಂಡ ಗುಂಪು ಬಿಡುಗಡೆ ಮಾಡುವ ಮೊದಲು ಇಬ್ಬರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಕೂಡ ಘಟನೆಯನ್ನು ಖಂಡಿಸಿದ್ದು ಘಟನೆಯು “ಯಾವುದೇ ನಾಗರಿಕ ಸಮಾಜಕ್ಕೆ ನಾಚಿಕೆಗೇಡು” ಎಂದು ಹೇಳಿದರು.ಯಾವುದೇ ಆರೋಪಿಗಳನ್ನು ಸುಮ್ಮನೆ ಬಿಡಲಾಗುವುದಿಲ್ಲ, ಇದರ ಹಿಂದೆ ಇರುವವರನ್ನು ನಾವು ಎಂದಿಗೂ ಕ್ಷಮಿಸುವುದಿಲ್ಲ ಎಂದಿದ್ದಾರೆ ಅವರು.

ಇದನ್ನೂ ಓದಿ: ಮಣಿಪುರ ಸ್ಥಿತಿ ಬಗ್ಗೆ ಚರ್ಚೆಗೆ ಸರ್ಕಾರ ಸಿದ್ಧ, ವಿಪಕ್ಷ ಪ್ರತಿಭಟನೆ ಬಿಟ್ಟು ಸುಗಮ ಕಲಾಪಕ್ಕೆ ಅವಕಾಶ ಮಾಡಿಕೊಡಲಿ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಮೇ 3 ರಂದು ಮಣಿಪುರದ ಆಲ್ ಟ್ರೈಬಲ್ ಸ್ಟೂಡೆಂಟ್ಸ್ ಯೂನಿಯನ್ (ATSUM) ಮೇ 3 ರಂದು ಮೇಟಿ ಸಮುದಾಯಕ್ಕೆ ಸೇರಿದ ಜನರನ್ನು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಪಟ್ಟಿಗೆ ಸೇರಿಸುವುದನ್ನು ಪ್ರತಿಭಟಿಸಿದ ನಂತರ ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:26 pm, Fri, 21 July 23