AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manipur Violence: ಮಣಿಪುರ ಮಹಿಳೆಯರ ಬೆತ್ತಲೆ‌ ಮೆರವಣಿಗೆ ಪ್ರಕರಣ, ಮತ್ತೊಬ್ಬ ಆರೋಪಿಯ ಬಂಧನ

ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ‌ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮತ್ತೊಬ್ಬ ಆರೋಪಿಯನ್ನು ಬಂಧಿಸಿಲಾಗಿದೆ.

Manipur Violence: ಮಣಿಪುರ ಮಹಿಳೆಯರ ಬೆತ್ತಲೆ‌ ಮೆರವಣಿಗೆ ಪ್ರಕರಣ, ಮತ್ತೊಬ್ಬ ಆರೋಪಿಯ ಬಂಧನ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Jul 22, 2023 | 11:13 AM

Share

ಇಂಫಾಲ್, ಜು.22: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ‌ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮತ್ತೊಬ್ಬ ಆರೋಪಿಯನ್ನು ಬಂಧನ ಮಾಡಲಾಗಿದೆ. ಇದೀಗ ಪ್ರಕರಣದಲ್ಲಿ ಒಟ್ಟು 5 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ ಹಲವು ಆರೋಪಿಗಳನ್ನು ಬಂಧನ ಮಾಡಲು ಕಾರ್ಯಚರಣೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ತೌಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಮೈ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರ್ಯಚರಣೆಯ ಬಗ್ಗೆ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಖುದ್ದಾಗಿ ಗಮನಿಸುತ್ತಿದ್ದಾರೆ ಎಂದು ಹೇಳಲಾಗಿದೆ.

ಇನ್ನೂ ತೌಬಲ್ ಜಿಲ್ಲೆಯಲ್ಲಿ ಪರಿಸ್ಥಿತಿ ಉದ್ವಿಗ್ನತೆ ಉಂಟಾಗಿದ್ದು, ಜಿಲ್ಲೆಯ ಹಲವು ಕಡೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವರದಿ ಹೇಳಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಪ್ರಮುಖ ಆರೋಪಿ ಹುಯಿರೆಮ್ ಹೆರೋದಾಸ್ ಮೈತೆ ಸೇರಿದಂತೆ ನಾಲ್ವರನ್ನು ನಿನ್ನೆ ಬಂಧಿಸಲಾಗಿತ್ತು. ಆರೋಪಿ ಹೆರೋದಾಸ್ ಮನೆಗೆ ನಿನ್ನೆ ಪೆಚ್ಚಿ ಗ್ರಾಮದ ಮಹಿಳೆಯರು ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ಪೊಲೀಸ್​​ ಅಧಿಕಾರಿಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 126 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿದ್ದಾರೆ. ಇನ್ನೂ ಚೆಕ್‌ಪೋಸ್ಟ್‌ ನಿಯಮ ಉಲ್ಲಂಘನೆ ಮಾಡಿದ 413 ಜನರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಸರ್ಕಾರದ ವರದಿ ತಿಳಿಸಿದೆ. ಯಾರು ಕೂಡ ವದಂತಿಗಳನ್ನು ನಂಬಬೇಡಿ ಮತ್ತು ವಿಡಿಯೋಗಳನ್ನು ವೈರಲ್​​ ಮಾಡುವ ವ್ಯಕ್ತಿಗಳ ಬಗ್ಗೆ ಅನುಮಾನ ಬಂದರೆ ಅಥವಾ ಯಾವುದೇ ಸಮಸ್ಯೆಯಾದರ ಸಹಾಯವಾಣಿ ಸಂಖ್ಯೆ 9233522822 ಕರೆ ಮಾಡಿ ಎಂದು ಸರ್ಕಾರ ಮನವಿ ಮಾಡಿಕೊಂಡಿದೆ. ಲೂಟಿ ಮಾಡಿದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕಗಳನ್ನು ಪೊಲೀಸರು ಅಥವಾ ಹತ್ತಿರದ ಭದ್ರತಾ ಪಡೆಗಳಿಗೆ ಹಿಂದಿರುಗಿಸುವಂತೆ ಜನರಿಗೆ ಮನವಿ ಮಾಡಲಾಗಿದೆ.

ಇದನ್ನೂ ಓದಿ: ದ್ವೇಷದ ಜ್ವಾಲೆಯಲ್ಲಿ ಹೊತ್ತಿ ಉರಿಯುತ್ತಿದೆ ಮಣಿಪುರ, ಹಿಂಸಾಚಾರಕ್ಕೆ ಕಾರಣವೇನು? ಇಲ್ಲಿದೆ ಮಾಹಿತಿ

ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದ ವಿಡಿಯೋ ವೈರಲ್​​ ಬಗ್ಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಕೂಡ ವಿರೋಧ ವ್ಯಕ್ತಪಡಿದ್ದಾರೆ, ಬಿಜೆಪಿ ಸರ್ಕಾರ ಇರುವ ಈಶ್ಯಾನ ರಾಜ್ಯಗಳಲ್ಲಿ ಇಂತಹ ಘಟನೆಗಳು ನಡೆಯಲು ಸಾಧ್ಯವಿಲ್ಲ, ರಾಜಸ್ಥಾನ ಮತ್ತು ಛತ್ತೀಸ್‌ಗಢದಂತಹ ಕೆಲವು ವಿರೋಧ ಪಕ್ಷದ ಆಡಳಿತವಿರುವ ರಾಜ್ಯಗಳಲ್ಲಿ ಅತ್ಯಾಚಾರದ ಘಟನೆಗಳು ಹೆಚ್ಚು ಮತ್ತು ವೈರಲ್​​ ಆಗಿರುವ ವಿಡಿಯೋ ಹಿಂದೆ ಅನೇಕ ರಾಜಕೀಯವಿದೆ, ಸಂಸತ್​ ಅಧಿವೇಶನದ ಸಮಯದಲ್ಲೇ ಇದನ್ನು ವೈರಲ್​​ ಮಾಡಲಾಗಿದೆ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:10 am, Sat, 22 July 23

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ