ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ಮಣಿಪುರದ ಯುಎನ್‌ಎಲ್‌ಎಫ್: ಅಮಿತ್ ಶಾ

ಇದು ಐತಿಹಾಸಿಕ ಮೈಲುಗಲ್ಲು ಎಂದು ಬಣ್ಣಿಸಿರುವ ಅಮಿತ್ ಶಾ, ಯುನೈಟೆಡ್ ನ್ಯಾಶನಲ್ ಲಿಬರೇಶನ್ ಫ್ರಂಟ್ ಇಂದು (ಬುಧವಾರ) ನವದೆಹಲಿಯಲ್ಲಿ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿತು.  ಮಣಿಪುರದ ಅತ್ಯಂತ ಹಳೆಯ ಕಣಿವೆ ಮೂಲದ ಸಶಸ್ತ್ರ ಗುಂಪು UNLF ಹಿಂಸಾಚಾರವನ್ನು ತ್ಯಜಿಸಿ  ಮುಖ್ಯವಾಹಿನಿಗೆ ಸೇರಲು ಒಪ್ಪಿಕೊಂಡಿದೆ. ನಾನು ಅವರನ್ನು ಪ್ರಜಾಪ್ರಭುತ್ವ ಪ್ರಕ್ರಿಯೆಗಳಿಗೆ ಸ್ವಾಗತಿಸುತ್ತೇನೆ ಎಂದಿದ್ದಾರೆ.

ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ಮಣಿಪುರದ ಯುಎನ್‌ಎಲ್‌ಎಫ್: ಅಮಿತ್ ಶಾ
ಯುಎನ್‌ಎಲ್‌ಎಫ್
Follow us
ರಶ್ಮಿ ಕಲ್ಲಕಟ್ಟ
|

Updated on: Nov 29, 2023 | 6:59 PM

ದೆಹಲಿ ನವೆಂಬರ್ 29: ಮಣಿಪುರದ (Manipur) ಅತ್ಯಂತ ಹಳೆಯ ಕಣಿವೆ ಮೂಲದ ಸಶಸ್ತ್ರ ಗುಂಪು ಯುನೈಟೆಡ್ ನ್ಯಾಶನಲ್ ಲಿಬರೇಶನ್ ಫ್ರಂಟ್ (UNLF) ನವದೆಹಲಿಯಲ್ಲಿ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದೆ ಮತ್ತು ಶೀಘ್ರದಲ್ಲೇ “ಮುಖ್ಯವಾಹಿನಿಗೆ ಸೇರಲಿದೆ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಬುಧವಾರ ಹೇಳಿದ್ದಾರೆ. ಈ ಸಾಧನೆಯನ್ನು “ಐತಿಹಾಸಿಕ ಮೈಲಿಗಲ್ಲು” ಎಂದು ಶ್ಲಾಘಿಸಿದ ಶಾ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಈಶಾನ್ಯದಲ್ಲಿ ಶಾಶ್ವತ ಶಾಂತಿ ಸ್ಥಾಪಿಸಲು ಅವಿರತ ಪ್ರಯತ್ನಗಳನ್ನು ಮಾಡಿದೆ ಎಂದು ಹೇಳಿದ್ದಾರೆ.

ಯುನೈಟೆಡ್ ನ್ಯಾಶನಲ್ ಲಿಬರೇಶನ್ ಫ್ರಂಟ್ ಇಂದು ನವದೆಹಲಿಯಲ್ಲಿ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿತು.  ಮಣಿಪುರದ ಅತ್ಯಂತ ಹಳೆಯ ಕಣಿವೆ ಮೂಲದ ಸಶಸ್ತ್ರ ಗುಂಪು UNLF ಹಿಂಸಾಚಾರವನ್ನು ತ್ಯಜಿಸಿ  ಮುಖ್ಯವಾಹಿನಿಗೆ ಸೇರಲು ಒಪ್ಪಿಕೊಂಡಿದೆ. ನಾನು ಅವರನ್ನು ಪ್ರಜಾಪ್ರಭುತ್ವ ಪ್ರಕ್ರಿಯೆಗಳಿಗೆ ಸ್ವಾಗತಿಸುತ್ತೇನೆ. ಶಾಂತಿ ಮತ್ತು ಪ್ರಗತಿಯ ಹಾದಿಯಲ್ಲಿ ಅವರ ಪಯಣಕ್ಕೆ ನಾನು ಶುಭ ಹಾರೈಸುತ್ತೇನೆ ಎಂದು ಶಾ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಬರೆದಿದ್ದಾರೆ.

“ಭಾರತ ಸರ್ಕಾರ ಮತ್ತು ಮಣಿಪುರ ಸರ್ಕಾರವು ಯುಎನ್‌ಎಲ್‌ಎಫ್‌ನೊಂದಿಗೆ ಇಂದು ಸಹಿ ಹಾಕಿರುವ ಶಾಂತಿ ಒಪ್ಪಂದವು ಆರು ದಶಕಗಳ ಸುದೀರ್ಘ ಸಶಸ್ತ್ರ ಚಳವಳಿಯ ಅಂತ್ಯವನ್ನು ಸೂಚಿಸುತ್ತದೆ. ಇದು ಪ್ರಧಾನಿ ಮೋದಿಯವರ ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿಯ ದೃಷ್ಟಿಕೋನವನ್ನು ಅರಿತುಕೊಳ್ಳುವಲ್ಲಿ ಮತ್ತು ಒದಗಿಸುವಲ್ಲಿ ಮಹತ್ವದ ಸಾಧನೆಯಾಗಿದೆ. ಈಶಾನ್ಯ ಭಾರತದ ಯುವಜನರಿಗೆ ಉತ್ತಮ ಭವಿಷ್ಯವಿದೆ ಎಂದು ಅವರು ಹೇಳಿದ್ದಾರೆ.

ಹೀಗೆ ಒಪ್ಪಿಕೊಂಡಿದ್ದು ಇದೇ ಮೊದಲು: ಎಂಎಚ್ಎ

“ಕಣಿವೆ ಮೂಲದ ಮಣಿಪುರಿ ಸಶಸ್ತ್ರ ಗುಂಪು ಹಿಂಸಾಚಾರವನ್ನು ತ್ಯಜಿಸುವ ಮೂಲಕ ಮತ್ತು ಭಾರತದ ಸಂವಿಧಾನ ಮತ್ತು ದೇಶದ ಕಾನೂನುಗಳನ್ನು ಗೌರವಿಸಲು ಒಪ್ಪಿಕೊಳ್ಳುವ ಮೂಲಕ ಮುಖ್ಯವಾಹಿನಿಗೆ ಮರಳಲು ಇದೇ ಮೊದಲ ಬಾರಿಗೆ ಒಪ್ಪಿಕೊಂಡಿದೆ ಎಂದು ಗೃಹ ವ್ಯವಹಾರಗಳ ಸಚಿವಾಲಯ (MHA) ಹೇಳಿದೆ.

ಈ ಒಪ್ಪಂದವು ಯುಎನ್‌ಎಲ್‌ಎಫ್ ಮತ್ತು ಭದ್ರತಾ ಪಡೆಗಳ ನಡುವಿನ ಹಗೆತನವನ್ನು ಕೊನೆಗೊಳಿಸುವುದಲ್ಲದೆ, ಕಳೆದ ಅರ್ಧ ಶತಮಾನಕ್ಕೂ ಹೆಚ್ಚು ಕಾಲ ಎರಡೂ ಕಡೆಗಳಲ್ಲಿ ಹಲವಾರು ಜೀವಗಳನ್ನು ಬಲಿತೆಗೆದುಕೊಂಡಿದೆ. ಇದು ಸಮುದಾಯದ ದೀರ್ಘಕಾಲದ ಕಳವಳಗಳನ್ನು ಪರಿಹರಿಸಲು ಅವಕಾಶವನ್ನು ಒದಗಿಸುತ್ತದೆ. ಯುಎನ್‌ಎಲ್‌ಎಫ್‌ನ ಮುಖ್ಯವಾಹಿನಿಗೆ ಮರಳುವುದು ಇತರ ಕಣಿವೆ ಮೂಲದ ಸಶಸ್ತ್ರ ಗುಂಪುಗಳನ್ನು ಶಾಂತಿ ಪ್ರಕ್ರಿಯೆಯಲ್ಲಿ ಸರಿಯಾದ ಸಮಯದಲ್ಲಿ ಭಾಗವಹಿಸಲು ಪ್ರೋತ್ಸಾಹಿಸುತ್ತದೆ ಎಂದು ಎಂಎಚ್‌ಎ ಹೇಳಿದೆ.

ಇದನ್ನೂ ಓದಿ: ವಿಧಾನಸಭಾ ಚುನಾವಣೆ: ಅಮಿತ್ ಶಾ ನಮ್ಮ ಮನೆಯಲ್ಲಿ ಕುಳಿತುಕೊಂಡು ಜೀವ ತೆಗೆದರು, ಸೋಮಣ್ಣ ಹೇಳಿಕೆಯ ಹಿಂದಿನ ಗುಟ್ಟೇನು?  

ಈಶಾನ್ಯ ರಾಜ್ಯದಲ್ಲಿ  ಹಿಂಸಾಚಾರ

UNLF ಮತ್ತು ಅದರ ಸಶಸ್ತ್ರ ವಿಭಾಗವಾದ ಮಣಿಪುರ ಪೀಪಲ್ಸ್ ಆರ್ಮಿ (MPA) ಸೇರಿದಂತೆ ಮಣಿಪುರದ ಹಲವಾರು ಮೈತಿ ಉಗ್ರಗಾಮಿ ಸಂಘಟನೆಗಳನ್ನು ಈ ತಿಂಗಳ ಆರಂಭದಲ್ಲಿ ಕೇಂದ್ರ ಗೃಹ ಸಚಿವಾಲಯವು ನಿಷೇಧಿಸಿತ್ತು. ಈಶಾನ್ಯ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರದ ಹಿನ್ನೆಲೆಯಲ್ಲಿ ಹಲವು ಮೈತಿ ಉಗ್ರಗಾಮಿ ಸಂಘಟನೆಯನ್ನು “ಕಾನೂನುಬಾಹಿರ” ಎಂದು ಘೋಷಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ತಮ್ಮ ಸರ್ಕಾರವು ಇಂಫಾಲ್ ಕಣಿವೆ ಮೂಲದ ಬಂಡಾಯ ಗುಂಪಿನೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಹೇಳಿದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆಯಾಗಿದೆ. ಶೀಘ್ರದಲ್ಲೇ ಶಾಂತಿ ಒಪ್ಪಂದಕ್ಕೆ ಸಹಿ ಹಾಕಲಾಗುವುದು ಎಂದು ಅವರು ಭರವಸೆ ನೀಡಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ