DMK Letter to Narendra Modi: ಮನೀಶ್ ಸಿಸೋಡಿಯಾ ಬಂಧನ ಕುರಿತು ಕಾಂಗ್ರೆಸ್ಗಿಂತ ಭಿನ್ನ ನಿಲುವು ತಳೆದ ಡಿಎಂಕೆ
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬೇಷರತ್ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬೇಷರತ್ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ. ದೆಹಲಿಯ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಲಾಗಿದೆ. ಆಮ್ ಆದ್ಮಿ ಪಕ್ಷದ ನಾಯಕನನ್ನು ಸಿಬಿಐ ನ್ಯಾಯಾಲಯ ಸೋಮವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅವರನ್ನು ವಿಚಾರಣೆ ನಡೆಸಿತು.
ವೈಯಕ್ತಿಕ ಲಾಭಕ್ಕಾಗಿ ಕೇಂದ್ರ ಸರ್ಕಾರ ಕಾನೂನು ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಆರೋಪಿಸಿದ್ದಾರೆ. ಮೋದಿ ಸರ್ಕಾರದ ವಿರುದ್ಧ ಆರೋಪ ಮಾಡಿದ ಅವರು, 9 ವರ್ಷಗಳ ಕಾಲ ಅಧಿಕಾರದಲ್ಲಿರುವ ಬಿಜೆಪಿ ವಿರೋಧ ಪಕ್ಷಗಳ ರಾಜಕೀಯ ನಾಯಕರಿಗೆ ಕಿರುಕುಳ ನೀಡಲು ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದೆ.
ಮತ್ತಷ್ಟು ಓದಿ: ಕೇಂದ್ರೀಯ ತನಿಖಾ ಸಂಸ್ಥೆಗಳ ದುರ್ಬಳಕೆ: ಕಾಂಗ್ರೆಸ್ ಬಿಟ್ಟು 8 ಪ್ರತಿಪಕ್ಷಗಳಿಂದ ಪ್ರಧಾನಿ ಮೋದಿಗೆ ಪತ್ರ
ಮದ್ಯದ ಹಗರಣದ ಬಗ್ಗೆ ಕಾಂಗ್ರೆಸ್ ನಿರಂತರವಾಗಿ ಆಮ್ ಆದ್ಮಿ ಪಕ್ಷವನ್ನು ಗುರಿಯಾಗಿಸುತ್ತಿದೆ. ಈ ವೇಳೆ ಆ ಇತರೆ ವಿರೋಧ ಪಕ್ಷಗಳೂ ಪ್ರತ್ಯೇಕವಾಗಿ ತಮ್ಮ ನಿಲುವು ಸ್ಪಷ್ಟಪಡಿಸಲು ಆರಂಭಿಸಿವೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದಿರುವ ಪತ್ರದಲ್ಲಿ ಸ್ಟಾಲಿನ್, ನನ್ನ ಅಭಿಪ್ರಾಯವನ್ನು ನೀವು ಒಪ್ಪುತ್ತೀರಿ ಎಂಬ ಸಂಪೂರ್ಣ ವಿಶ್ವಾಸವಿದೆ. ವಿಭಿನ್ನ ಸಿದ್ಧಾಂತಗಳು ಮತ್ತು ರಾಜಕೀಯ ಪಕ್ಷಗಳು ಭಾರತೀಯ ಪ್ರಜಾಪ್ರಭುತ್ವದಲ್ಲಿ ಎರಡು ಪ್ರಮುಖ ಅಂಶಗಳಾಗಿವೆ.
ಮನೀಶ್ ಸಿಸೋಡಿಯಾ ಅವರನ್ನು ಸುಳ್ಳು ಆರೋಪದಲ್ಲಿ ಬಂಧಿಸಲಾಗಿದೆ ಎಂದು ತಿಳಿದಾಗಿನಿಂದ ನಾನು ನಿರಾಶೆಗೊಂಡಿದ್ದೇನೆ. ಈ ವೇಳೆ ವಿನಾಕಾರಣ ಚಿತ್ರಹಿಂಸೆ ನೀಡಲಾಗುತ್ತಿದೆ. ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಿರಂತರವಾಗಿ ಎಎಪಿಯನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ