Manish Sisodia Letter: ಪ್ರಧಾನಿ ನರೇಂದ್ರ ಮೋದಿಯ ಶೈಕ್ಷಣಿಕ ಅರ್ಹತೆಯ ಕೊರತೆಯು ದೇಶಕ್ಕೆ ಅಪಾಯಕಾರಿ: ಮನೀಶ್​ ಸಿಸೋಡಿಯಾ ಪತ್ರ ವೈರಲ್

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ(Manish Sisodia) ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು, ಅವರ ಶಿಕ್ಷಣದ ಬಗ್ಗೆ ಪ್ರಶ್ನೆ ಎತ್ತಿದ್ದಾರೆ.

Manish Sisodia Letter: ಪ್ರಧಾನಿ ನರೇಂದ್ರ ಮೋದಿಯ ಶೈಕ್ಷಣಿಕ ಅರ್ಹತೆಯ ಕೊರತೆಯು ದೇಶಕ್ಕೆ ಅಪಾಯಕಾರಿ: ಮನೀಶ್​ ಸಿಸೋಡಿಯಾ ಪತ್ರ ವೈರಲ್
Manish Sisodia

Updated on: Apr 07, 2023 | 11:51 AM

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ(Manish Sisodia) ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು, ಅವರ ಶಿಕ್ಷಣದ ಬಗ್ಗೆ ಪ್ರಶ್ನೆ ಎತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಶೈಕ್ಷಣಿಕ ವಿದ್ಯಾರ್ಹತೆ ಕೊರತೆಯು ದೇಶಕ್ಕೆ ಅಪಾಯಕಾರಿ ಎಂದಿದ್ದಾರೆ. ಮೋದಿಯವರನ್ನು ತರಾಟೆಗೆ ತೆಗೆದುಕೊಂಡಿರುವ ಸಿಸೋಡಿಯಾ ದೇಶದ ಪ್ರಗತಿಗೆ ಪ್ರಧಾನಿ ಮೋದಿ ಶಿಕ್ಷಣ ಪಡೆಯುವುದು ಅಗತ್ಯ ಎಂದಿದ್ದಾರೆ.

ನಾವು ಇಂದು 21 ನೇ ಶತಮಾನದಲ್ಲಿ ವಾಸಿಸುತ್ತಿದ್ದೇವೆ, ಪ್ರಪಂಚದಾದ್ಯಂತ ವಿಜ್ಞಾನ, ತಂತ್ರಜ್ಞಾನದಲ್ಲಿ ಪ್ರತಿ ದಿನ ಹೊಸ ಪ್ರಗತಿಯನ್ನು ಸಾಧಿಸುತ್ತಿದ್ದೇವೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಐ ಬಗ್ಗೆ ಮಾತನಾಡುತ್ತಿದ್ದಾರೆ. ಭಾರತದ ಪ್ರಧಾನಿಗೆ ಶಿಕ್ಷಣ ಕಡಿಮೆ, ವಿಜ್ಞಾನದ ಪ್ರಾಥಮಿಕ ಜ್ಞಾನವೂ ಇಲ್ಲ ಎಂಬುದು ಇಡೀ ಜಗತ್ತಿಗೆ ತಿಳಿದಿದೆ. ಹಾಗೆ ಬೇರೆ ರಾಷ್ಟ್ರಗಳ ಅಧ್ಯಕ್ಷರು ಪ್ರಧಾನಿಯನ್ನು ಅಪ್ಪಿಕೊಂಡಾಗ ಎಷ್ಟು ಹಣ ಕೊಟ್ಟು ಒಪ್ಪಂದಗಳಿಗೆ ಸಹಿ ಹಾಕುತ್ತಾರೋ ಅದೂ ಕೂಡ ಗೊತ್ತಿಲ್ಲ. ಪ್ರಧಾನಿ ಅಜ್ಞಾನದಿಂದ ದೇಶಕ್ಕೆ ಸಮಸ್ಯೆಯಾಗುತ್ತಿದೆ.

ಮತ್ತಷ್ಟು ಓದಿ: Manish Sisodia: ಜಾಮೀನು ವಿಚಾರಣೆಗೆ ಮುನ್ನ ಮನೀಶ್ ಸಿಸೋಡಿಯಾ ಬಂಧಿಸಿದ ಜಾರಿ ನಿರ್ದೇಶನಾಲಯ

ಕಡಿಮೆ ಶಿಕ್ಷಣ ಪಡೆದ ಪ್ರಧಾನಿಗೆ ಇಂದಿನ ಯುವಕರ ಕನಸುಗಳನ್ನು ನನಸು ಮಾಡುವ ಸಾಮರ್ಥ್ಯವಿದೆಯೇ, ಇತ್ತೀಚಿನ ವರ್ಷಗಳಲ್ಲಿ ದೇಶದಾದ್ಯಂತ 60,000 ಸರ್ಕಾರಿ ಶಾಲೆಗಳನ್ನು ಮುಚ್ಚಲಾಯಿತು, ಏಕೆ?. ಸರ್ಕಾರಿ ಶಾಲೆಗಳ ಗುಣಮಟ್ಟ ಸುಧಾರಿಸಿದ್ದರೆ ಮಕ್ಕಳು ಬರುತ್ತಿದ್ದರು, ಈಗ ದೆಹಲಿಯಲ್ಲಿ ನಡೆಯುತ್ತಿರುವಂತೆ ಖಾಸಗಿ ಶಾಲೆಗಳಿಂದ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳುಹಿಸಲು ಪ್ರಾರಂಭಿಸಿದ್ದಾರೆ.

ಕಡಿಮೆ ವಿದ್ಯಾವಂತರೆಂದು ಹೆಮ್ಮೆಪಡುವ ದೇಶದ ಪ್ರಧಾನಿ ಸಾಮಾನ್ಯ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಎಂದಿಗೂ ಒದಗಿಸುವುದಿಲ್ಲ. ಇತ್ತೀಚಿನ ವರ್ಷಗಳಲ್ಲಿ 60000 ಸರ್ಕಾರಿ ಶಾಲೆಗಳನ್ನು ಮುಚ್ಚಿರುವುದು ಇದಕ್ಕೆ ಜೀವಂತ ಸಾಕ್ಷಿ ಎಂದು ಬರೆದಿದ್ದಾರೆ.

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us