AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಧಮುಕ್ತರಾದ ನಂತರ ಮಹಾತ್ಮ ಗಾಂಧಿಯವರ ಸ್ಮಾರಕ, ಹನುಮಾನ್ ಮಂದಿರಕ್ಕೆ ಭೇಟಿ ನೀಡಿದ ಮನೀಶ್ ಸಿಸೋಡಿಯಾ

ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಮಾತನಾಡಿದ ಸಿಸೋಡಿಯಾ, "ಹನುಮಾನ್ ದೆಹಲಿಯ ಎಲ್ಲಾ ಜನರನ್ನು ಆಶೀರ್ವದಿಸಲಿ" ಎಂದು ಹೇಳಿದರು. ಹನುಮಂತನ ಆಶೀರ್ವಾದದಿಂದ ಈ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಕೂಡ ಶೀಘ್ರದಲ್ಲೇ ಬಿಡುಗಡೆಯಾಗಲಿದ್ದಾರೆ ಎಂದು ಅವರು ಆಶಿಸಿದರು.

ಬಂಧಮುಕ್ತರಾದ ನಂತರ ಮಹಾತ್ಮ ಗಾಂಧಿಯವರ ಸ್ಮಾರಕ, ಹನುಮಾನ್ ಮಂದಿರಕ್ಕೆ ಭೇಟಿ ನೀಡಿದ ಮನೀಶ್ ಸಿಸೋಡಿಯಾ
ಮನೀಶ್ ಸಿಸೋಡಿಯಾ
ರಶ್ಮಿ ಕಲ್ಲಕಟ್ಟ
|

Updated on: Aug 10, 2024 | 12:50 PM

Share

ದೆಹಲಿ ಆಗಸ್ಟ್ 10: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ (Delhi liquor policy case) ಜೈಲಿನಿಂದ ಹೊರಬಂದ ಒಂದು ದಿನದ ನಂತರ ಎಎಪಿ ನಾಯಕ ಮತ್ತು ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia)ಅವರು ಶನಿವಾರ ರಾಜ್‌ಘಾಟ್ ಸ್ಮಾರಕದಲ್ಲಿ ಮಹಾತ್ಮ ಗಾಂಧಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಕನ್ನಾಟ್ ಪ್ಲೇಸ್‌ನಲ್ಲಿರುವ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಅವರು ಗಾಂಧಿ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ. ಸಂಸದ ಸಂಜಯ್ ಸಿಂಗ್ ಮತ್ತು ಸಚಿವರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಸೇರಿದಂತೆ ಹಲವು ಆಮ್ ಆದ್ಮಿ ಪಕ್ಷದ (AAP) ನಾಯಕರು ಸಿಸೋಡಿಯಾ ಜೊತೆಗಿದ್ದರು.

ಆಪಾದಿತ ಮದ್ಯ ನೀತಿ “ಹಗರಣ” ಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಸಿಸೋಡಿಯಾ ಅವರಿಗೆ ಸುಪ್ರೀಂಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ವಿಚಾರಣೆಯಿಲ್ಲದೆ 17 ತಿಂಗಳುಗಳ ಸುದೀರ್ಘ ಸೆರೆವಾಸವು ತ್ವರಿತ ನ್ಯಾಯದ ಹಕ್ಕನ್ನು ವಂಚಿತಗೊಳಿಸಿದೆ ಎಂದು ಹೇಳಿದೆ.

ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಮಾತನಾಡಿದ ಸಿಸೋಡಿಯಾ, “ಹನುಮಾನ್ ದೆಹಲಿಯ ಎಲ್ಲಾ ಜನರನ್ನು ಆಶೀರ್ವದಿಸಲಿ” ಎಂದು ಹೇಳಿದರು. ಹನುಮಂತನ ಆಶೀರ್ವಾದದಿಂದ ಈ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಕೂಡ ಶೀಘ್ರದಲ್ಲೇ ಬಿಡುಗಡೆಯಾಗಲಿದ್ದಾರೆ ಎಂದು ಅವರು ಆಶಿಸಿದರು.

ಇದನ್ನೂ ಓದಿ: ವಯನಾಡು ಭೂಕುಸಿತವನ್ನು ರಾಷ್ಟ್ರೀಯ ವಿಪತ್ತೆಂದು ಘೋಷಿಸಬಹುದೇ? ಕೇಂದ್ರದ ನಿಯಮಗಳಲ್ಲೇನಿದೆ?

ಮಧ್ಯಾಹ್ನ 12 ಗಂಟೆ ಸುಮಾರಿಗೆ ಡಿಡಿಯು ಮಾರ್ಗದಲ್ಲಿರುವ ಎಎಪಿ ಕೇಂದ್ರ ಕಚೇರಿಗೆ ಸಿಸೋಡಿಯಾ ಭೇಟಿ ನೀಡಿ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.  ಶುಕ್ರವಾರ ಸಂಜೆ ತಿಹಾರ್ ಜೈಲಿನಿಂದ ಹೊರನಡೆದ ನಂತರ ಸಿಸೋಡಿಯಾ ಅವರು ಸಂವಿಧಾನದಿಂದಾಗಿ ತನಗೆ ಜಾಮೀನು ಸಿಕ್ಕಿದೆ. ಇದೇ ಸಂವಿಧಾನ ಕೇಜ್ರಿವಾಲ್ ಬಿಡುಗಡೆಯನ್ನು ಖಚಿತಪಡಿಸುತ್ತದೆ ಎಂದು ಹೇಳಿದ್ದಾರೆ. ಈಗ ರದ್ದಾದ ದೆಹಲಿ ಮದ್ಯ ನೀತಿ 2021-22 ರ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳಿಗಾಗಿ ಸಿಸೋಡಿಯಾ ಅವರನ್ನು ಕಳೆದ ವರ್ಷ ಫೆಬ್ರವರಿ 26 ರಂದು ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಬಂಧಿಸಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ