AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manish Sisodia: ಸಿಬಿಐ ಮುಂದೆ ಇಂದು ಮನೀಶ್ ಸಿಸೋಡಿಯಾ ವಿಚಾರಣೆಗೆ ಹಾಜರು; ಡಿಸಿಎಂ ಬಂಧನದ ಭೀತಿಯಲ್ಲಿ ಆಪ್

ಅಬಕಾರಿ ನೀತಿ 2021-22ರ ರಚನೆ ಮತ್ತು ಅನುಷ್ಠಾನದಲ್ಲಿನ ಭ್ರಷ್ಟಾಚಾರದ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಇಂದು ಬೆಳಿಗ್ಗೆ 11 ಗಂಟೆಗೆ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ.

Manish Sisodia: ಸಿಬಿಐ ಮುಂದೆ ಇಂದು ಮನೀಶ್ ಸಿಸೋಡಿಯಾ ವಿಚಾರಣೆಗೆ ಹಾಜರು; ಡಿಸಿಎಂ ಬಂಧನದ ಭೀತಿಯಲ್ಲಿ ಆಪ್
ಮನೀಶ್ ಸಿಸೋಡಿಯಾ Image Credit source: google image
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Oct 17, 2022 | 10:11 AM

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಅವರಿಗೆ ಇಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್​ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಇಂದ ಮನೀಶ್ ಸಿಸೋಡಿಯಾ ಸಿಬಿಐ ಅಧಿಕಾರಿಗಳ ಮುಂದೆ ಹಾಜರಾಗಲಿದ್ದಾರೆ. ಇಂದು ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಬಹುದು ಎಂದು ಆಮ್ ಆದ್ಮಿ ಪಕ್ಷದ ನಾಯಕರು ಆತಂಕ ವ್ಯಕ್ತಪಡಿಸಿದ್ದಾರೆ. ಮನೀಶ್ ಸಿಸೋಡಿಯಾ ಅವರು ಈ ಸಮನ್ಸ್ ಅನ್ನು ಗುಜರಾತ್‌ನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಜೊತೆ ಜೋಡಿಸಿದ್ದಾರೆ.

ಹಿರಿಯ ಆಪ್ ನಾಯಕರಾಗಿರುವ ಮನೀಶ್ ಸಿಸೋಡಿಯಾ, ಚುನಾವಣೆಗೆ ಒಳಪಟ್ಟಿರುವ ರಾಜ್ಯದಲ್ಲಿ ಪ್ರಚಾರ ಮಾಡುವುದನ್ನು ತಡೆಯಲು ಬಿಜೆಪಿ ನನ್ನನ್ನು “ನಕಲಿ ಪ್ರಕರಣದಲ್ಲಿ ಬಂಧಿಸಬಹುದು” ಎಂದು ನಿನ್ನೆ ಆರೋಪಿಸಿದ್ದರು. ಮುಂದಿನ ದಿನಗಳಲ್ಲಿ ನಾನು ಚುನಾವಣಾ ಪ್ರಚಾರಕ್ಕಾಗಿ ಗುಜರಾತ್‌ಗೆ ಹೋಗಬೇಕಾಗಿತ್ತು. ನಾನು ಗುಜರಾತ್‌ಗೆ ಹೋಗುವುದನ್ನು ತಡೆಯುವುದು ಅವರ ಉದ್ದೇಶವಾಗಿದೆ ಎಂದು ಮನೀಶ್ ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ. ‘ಗುಜರಾತ್‌ನಲ್ಲಿ ಸೋಲುವುದು ಬಿಜೆಪಿಗೆ ಗೊತ್ತಿರುವುದರಿಂದ ಅವರಿಗೆ ಭಯವಾಗುತ್ತಿದೆ. ಹೀಗಾಗಿ, ಇಂತಹ ತಂತ್ರಗಳನ್ನು ಮಾಡುತ್ತಿದ್ದಾರೆ’ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಮನೀಶ್ ಸಿಸೋಡಿಯಾಗೆ ಸಿಬಿಐ ಸಮನ್ಸ್; ಸರಣಿ ಕೊಲೆ ಪ್ರಕರಣ ಬಗ್ಗೆಯೂ ಗಮನ ಹರಿಸಿ ಎಂದು ಕೇಂದ್ರದ ವಿರುದ್ಧ ದೆಹಲಿ ಉಪಮುಖ್ಯಮಂತ್ರಿ ವಾಗ್ದಾಳಿ

ದೆಹಲಿ ಸರ್ಕಾರವು ಈಗ ಹಿಂತೆಗೆದುಕೊಂಡಿರುವ ಅಬಕಾರಿ ನೀತಿ 2021-22ರ ರಚನೆ ಮತ್ತು ಅನುಷ್ಠಾನದಲ್ಲಿನ ಭ್ರಷ್ಟಾಚಾರದ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಇಂದು ಬೆಳಿಗ್ಗೆ 11 ಗಂಟೆಗೆ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಯು ಆಗಸ್ಟ್ 17ರಂದು ದಾಖಲಿಸಿದ ಪ್ರಕರಣದಲ್ಲಿ ಸಿಸೋಡಿಯಾ ಅವರನ್ನು ಆರೋಪಿ ಎಂದು ಹೆಸರಿಸಲಾಗಿತ್ತು.

ನನ್ನ ಮನೆಯ ಮೇಲೆ 14 ಗಂಟೆಗಳ ಕಾಲ ದಾಳಿ ನಡೆಸಲಾಯಿತು. ಆದರೂ ಅವರಿಗೆ ಏನೂ ಸಾಕ್ಷಿಗಳು ಸಿಗಲಿಲ್ಲ. ನನ್ನ ಬ್ಯಾಂಕ್ ಲಾಕರ್ ಅನ್ನು ಸೀಜ್ ಮಾಡಲಾಗಿದೆ. ಆದರೂ ಏನೂ ಸಿಕ್ಕಿಲ್ಲ. ನನ್ನ ಗ್ರಾಮದಲ್ಲಿ ಹುಡುಕಾಟದ ಸಮಯದಲ್ಲಿಯೂ ಅವರಿಗೆ ಏನೂ ಸಿಗಲಿಲ್ಲ. ಈಗ ಇಂದು ಬೆಳಗ್ಗೆ 11 ಗಂಟೆಗೆ ಸಿಬಿಐ ಕೇಂದ್ರ ಕಚೇರಿಗೆ ನನ್ನನ್ನು ಕರೆಸುತ್ತಿದ್ದಾರೆ. ನಾನು ಹೋಗಿ ಅವರಿಗೆ ಎಲ್ಲ ಸಹಕಾರ ನೀಡುತ್ತೇನೆ ಎಂದು ಸಿಸೋಡಿಯಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:11 am, Mon, 17 October 22

ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್