AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೀಶ್ ಸಿಸೋಡಿಯಾ ನಿರ್ವಹಿಸಿದ್ದ 18 ಇಲಾಖೆಗಳ ಜವಾಬ್ದಾರಿಯನ್ನು ಇಬ್ಬರು ಸಚಿವರಿಗೆ ಹಂಚಿದ ಕೇಜ್ರಿವಾಲ್

Manish Sisodia ದೆಹಲಿಯ ಉಪಮುಖ್ಯಮಂತ್ರಿಯಾಗಿದ್ದ ಸಿಸೋಡಿಯಾ 10 ತಿಂಗಳಿನಿಂದ ಜೈಲಿನಲ್ಲಿರುವ ಸತ್ಯೇಂದ್ರ ಜೈನ್ ಅವರ ಆರೋಗ್ಯ ಖಾತೆ ಸೇರಿದಂತೆ 18 ಸಚಿವಾಲಯಗಳ ಉಸ್ತುವಾರಿ ವಹಿಸಿದ್ದರು.

ಮನೀಶ್ ಸಿಸೋಡಿಯಾ ನಿರ್ವಹಿಸಿದ್ದ 18 ಇಲಾಖೆಗಳ ಜವಾಬ್ದಾರಿಯನ್ನು ಇಬ್ಬರು ಸಚಿವರಿಗೆ ಹಂಚಿದ ಕೇಜ್ರಿವಾಲ್
ಮನೀಶ್ ಸಿಸೋಡಿಯಾ
ರಶ್ಮಿ ಕಲ್ಲಕಟ್ಟ
|

Updated on:Feb 28, 2023 | 7:42 PM

Share

ದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ (Delhi liquor policy case) ಭ್ರಷ್ಟಾಚಾರದ ಆರೋಪದ ಮೇಲೆ ಕೇಂದ್ರೀಯ ತನಿಖಾ ದಳದಿಂದ ಬಂಧಿತರಾಗಿರುವ ಮನೀಶ್ ಸಿಸೋಡಿಯಾ (Manish Sisodia)ಅವರು ಮಂಗಳವಾರ ಅರವಿಂದ ಕೇಜ್ರಿವಾಲ್(Arvind Kejriwal) ನೇತೃತ್ವದ ದೆಹಲಿ ಸರ್ಕಾರದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಚಿವರ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದಿತ್ತು. ಬಂಧಿತ ಆಮ್ ಆದ್ಮಿ ಪಕ್ಷದ (ಎಎಪಿ) ಸಚಿವರಾದ ಸತ್ಯೇಂದ್ರ ಜೈನ್ ಅವರು ಕೂಡಾ ಇಂದು ದೆಹಲಿ ಸಂಪುಟದಿಂದ ಹೊರಬಂದಿದ್ದಾರೆ. ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದು ಖಾತೆಗಳನ್ನು ಮರು ನಿಯೋಜಿಸಿದ್ದಾರೆ.

ರಾಜೀನಾಮೆಗಳು ತಪ್ಪಿತಸ್ಥರು ಎಂದು ಅಂಗೀಕರಿಸಿದ್ದಲ್ಲ, ಎಎಪಿ ಇದನ್ನು “ಆಡಳಿತಾತ್ಮಕ ಹೆಜ್ಜೆ” ಎಂದು ವಿವರಿಸಿದೆ. ಯಾವುದೇ ಹೊಸ ಸಚಿವರು ಸಂಪುಟ ಸೇರುವುದಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಿಸೋಡಿಯಾ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ, ಎಂಟು ವರ್ಷಗಳ ಕಾಲ ಸಂಪೂರ್ಣ ಸಮರ್ಪಣಾಭಾವದಿಂದ ದೆಹಲಿಗೆ ಸೇವೆ ಸಲ್ಲಿಸಿರುವೆ. ನನ್ನ ವಿರುದ್ಧದ ಆರೋಪಗಳು ಸುಳ್ಳು. ನನ್ನ ವಿರುದ್ಧ ಇನ್ನೂ ಹೆಚ್ಚಿನ ಪ್ರಕರಣಗಳಿರುವ ಸಾಧ್ಯತೆಯಿದೆ… ಈ ಆರೋಪಗಳು ಸುಳ್ಳೆಂದು ದೇವರಿಗೆ ಗೊತ್ತು ಎಂದು ಹೇಳಿದ್ದಾರೆ. ಇನ್ನು ದೆಹಲಿ ಸಂಪುಟದಲ್ಲಿ ಅರವಿಂದ ಕೇಜ್ರಿವಾಲ್ ಸೇರಿದಂತೆ ಐವರು ಸಚಿವರಿದ್ದಾರೆ.

ಮನೀಶ್ ಸಿಸೋಡಿಯಾ ಅವರ ಇಲಾಖೆಗಳನ್ನು ಕೈಲಾಶ್ ಗಹ್ಲೋಟ್ ಮತ್ತು ರಾಜ್ ಕುಮಾರ್ ಆನಂದ್ ಅವರಿಗೆ ವಹಿಸಲಾಗುವುದು. ದೆಹಲಿಯ ಉಪಮುಖ್ಯಮಂತ್ರಿಯಾಗಿದ್ದ ಸಿಸೋಡಿಯಾ 10 ತಿಂಗಳಿನಿಂದ ಜೈಲಿನಲ್ಲಿರುವ ಸತ್ಯೇಂದ್ರ ಜೈನ್ ಅವರ ಆರೋಗ್ಯ ಖಾತೆ ಸೇರಿದಂತೆ 18 ಸಚಿವಾಲಯಗಳ ಉಸ್ತುವಾರಿ ವಹಿಸಿದ್ದರು.

ದೆಹಲಿ ಕ್ಯಾಬಿನೆಟ್‌ನಲ್ಲಿ ಈಗ ಐವರು ಮಂತ್ರಿಗಳಿದ್ದಾರೆ. ಕೇಜ್ರಿವಾಲ್ ಅವರು ಯಾವುದೇ ಸಚಿವಾಲಯವನ್ನು ತೆಗೆದುಕೊಂಡಿಲ್ಲ, ಬದಲಿಗೆ ಎಎಪಿಯ ರಾಷ್ಟ್ರೀಯ ಯೋಜನೆಗಳನ್ನು ಮುಂದುವರಿಸಲು ಆದ್ಯತೆ ನೀಡುತ್ತಾರೆ.

ಶಿಕ್ಷಣ ಸಚಿವರಾಗಿ ದೆಹಲಿಯ ಶಾಲೆಗಳಲ್ಲಿ ಶಿಕ್ಷಣ ಕ್ರಾಂತಿ ಉಂಟು ಮಾಡಿದ ಸಿಸೋಡಿಯಾ ಅವರು ಸರ್ಕಾರದಲ್ಲಿ 18 ಇಲಾಖೆಗಳ ಉಸ್ತುವಾರಿ ವಹಿಸಿದ್ದರು. ಅತೀ ಹೆಚ್ಚು ಖಾತೆಗಳನ್ನು ಹೊಂದಿದ ಸಚಿವರಾಗಿದ್ದರು ಅವರು.

ಸಿಸೋಡಿಯಾ ಬಳಿ ಇದ್ದ ಖಾತೆಗಳಿವು

    • ಶಿಕ್ಷಣ
    • ಹಣಕಾಸು
    • ಯೋಜನೆ
    • ಭೂಮಿ ಮತ್ತು ಕಟ್ಟಡ
    • ವಿಜಿಲೆನ್ಸ್
    • ಸೇವೆಗಳು
    • ಪ್ರವಾಸೋದ್ಯಮ
    • ಕಲೆ, ಸಂಸ್ಕೃತಿ ಮತ್ತು ಭಾಷೆ
    • ಕಾರ್ಮಿಕ
    • ಉದ್ಯೋಗ
    • ಲೋಕೋಪಯೋಗಿ ಇಲಾಖೆ
    • ಆರೋಗ್ಯ
    • ಕೈಗಾರಿಕೆಗಳು
    • ವಿದ್ಯುತ್
    • ಗೃಹ
    • ನಗರಾಭಿವೃದ್ಧಿ
    • ನೀರಾವರಿ ಮತ್ತು ಪ್ರವಾಹ ನಿಯಂತ್ರಣ
    • ಜಲ

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:34 pm, Tue, 28 February 23

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ