ಅನಾರೋಗ್ಯದಿಂದ ದೆಹಲಿಯ ಏಮ್ಸ್ (AIIMS)ಗೆ ದಾಖಲಾಗಿರುವ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್(Manmohan Singh )ಅವರಿಗೆ ಡೆಂಗ್ಯೂ ಇರುವುದು ಪತ್ತೆಯಾಗಿದೆ. ಅಪಾಯವಿಲ್ಲ, ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಎಂದು ಇಂದು ಏಮ್ಸ್ ವೈದ್ಯರು ತಿಳಿಸಿದ್ದಾರೆ. ಮನಮೋಹನ್ ಸಿಂಗ್ ಅವರಲ್ಲಿ ಪ್ಲೇಟ್ಲೆಟ್ ಪ್ರಮಾಣ ಕುಸಿದಿತ್ತು. ಇದೀಗ ಅದರಲ್ಲಿ ಏರಿಕೆಯಾಗುತ್ತಿದೆ ಎಂದೂ ಮಾಹಿತಿ ನೀಡಿದ್ದಾರೆ.
ಮಾಜಿ ಪ್ರಧಾನಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಮನಮೋಹನ್ ಸಿಂಗ್ ಅವರಲ್ಲಿ ಬುಧವಾರ ರಾತ್ರಿ ಜ್ವರ, ಸುಸ್ತು ಕಾಣಿಸಿಕೊಂಡಿತ್ತು. ಅದಾದ ನಂತರ ಅವರನ್ನು ಏಮ್ಸ್ನ ಕಾರ್ಡಿಯೋ-ನ್ಯೂರೋ ಸೆಂಟರ್ನಲ್ಲಿರುವ ಖಾಸಗಿ ವಾರ್ಡ್ಗೆ ದಾಖಲಿಸಲಾಗಿತ್ತು.ಹೃದ್ರೋಗ ತಜ್ಞರು ನಿಗಾವಹಿಸಿದ್ದರು. ಇದೀಗ ಅವರಲ್ಲಿ ಡೆಂಗ್ಯೂ ಇರುವುದು ಗೊತ್ತಾಗಿದ್ದು, ವೈದ್ಯ ನಿತೀಶ್ ನಾಯಕ್ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮನಮೋಹನ್ ಸಿಂಗ್ ಶೀಘ್ರವೇ ಗುಣಮುಖರಾಗಲಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾರೈಸಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಏಮ್ಸ್ಗೆ ಭೇಟಿ ನೀಡಿ, ಅವರ ಆರೋಗ್ಯದ ಬಗ್ಗೆ ವರದಿ ಪಡೆದಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರೂ ಆಸ್ಪತ್ರೆಗೆ ಭೇಟಿ ನೀಡಿದ್ದರು. ಮನಮೋಹನ್ ಸಿಂಗ್ ಏಪ್ರಿಲ್ನಲ್ಲಿ ಕೊರೊನಾಕ್ಕೆ ಒಳಗಾಗಿದ್ದರು. ಆಗಲೂ ಸಹ ಏಮ್ಸ್ಗೆ ದಾಖಲಾಗಿ, ಚಿಕಿತ್ಸೆ ಪಡೆದಿದ್ದರು.
ಇದನ್ನೂ ಓದಿ: ಮೋದಿ ವಿರುದ್ಧ ಮಾತಾಡಿದ್ರೆ ದೇಶದ್ರೋಹಿಯಂತೆ, ಯಾವನ್ರಿ ಇವನು ಪ್ರಧಾನ ಮಂತ್ರಿ? -ಸಿದ್ದರಾಮಯ್ಯ ಗುಡುಗು
Viral Videos: ಆಹಾ, ಇಷ್ಟೊಂದು ಮುದ್ದುಮುದ್ದಾಗಿ ಕದಿಯಬಹುದಾ?; ಚಾಣಾಕ್ಷ ಶ್ವಾನಗಳ ವಿಡಿಯೋ ನೋಡಿ