AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನಮೋಹನ್‌ ಸಿಂಗ್‌ ಸ್ಮಾರಕಕ್ಕೆ ಜಾಗ ನೀಡುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ನಿನ್ನೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ. ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿ ಅವರಿಗೆ ದೆಹಲಿಯಲ್ಲಿ ಡಾ. ಮನಮೋಹನ್ ಸಿಂಗ್ ಸ್ಮಾರಕ ನಿರ್ಮಾಣಕ್ಕೆ ಜಾಗ ನೀಡುವಂತೆ ಮನವಿ ಮಾಡಿದ್ದಾರೆ.

ಮನಮೋಹನ್‌ ಸಿಂಗ್‌ ಸ್ಮಾರಕಕ್ಕೆ ಜಾಗ ನೀಡುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ
ಮನಮೋಹನ್‌ ಸಿಂಗ್‌ ಸ್ಮಾರಕಕ್ಕೆ ಜಾಗ ನೀಡುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ
ಹರೀಶ್ ಜಿ.ಆರ್​. ನವದೆಹಲಿ
| Updated By: ಗಂಗಾಧರ​ ಬ. ಸಾಬೋಜಿ

Updated on: Dec 27, 2024 | 9:46 PM

Share

ದೆಹಲಿ, ಡಿಸೆಂಬರ್​ 27: ನರೇಂದ್ರ ಮೋದಿಗೂ ಮುನ್ನ ಎರಡು ಅವಧಿಗಳ ಕಾಲಕ್ಕೆ ದೇಶದ ಪ್ರಧಾನಿ ಪಟ್ಟವನ್ನು ಅಲಂಕರಿಸಿದ್ದ ಮನಮೋಹನ್‌ ಸಿಂಗ್‌ (Manmohan Singh) ಅವರು ನಿನ್ನೆ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ ಅವರು ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ. ಈ ಮಧ್ಯೆ ದೆಹಲಿಯಲ್ಲಿ ಡಾ. ಮನಮೋಹನ್‌ ಸಿಂಗ್ ಸ್ಮಾರಕಕ್ಕೆ ಜಾಗ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ರಾಜ್ಯಸಭೆ ವಿಪಕ್ಷ ನಾಯಕ & ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ.

ಪ್ರಧಾನಿಯಾಗಿ, ವಿತ್ತ ಸಚಿವರಾಗಿ, ಆರ್ಥಿಕ ತಜ್ಞರಾಗಿ ದೇಶದ ಎಕಾನಾಮಿ ವ್ಯವಸ್ಥೆಗೆ ಮನಮೋಹನ್ ಸಿಂಗ್ ಕೊಟ್ಟ ಕೊಡುಗೆ ಅಪಾರ. ಹಾಗಾಗಿ ಪ್ರಧಾನಿ ಮೋದಿಗೆ ಪತ್ರ ಬರೆದಿರುವ ಮಲ್ಲಿಕಾರ್ಜುನ ಖರ್ಗೆ, ದೆಹಲಿಯಲ್ಲಿ ಸ್ಮಾರಕಕ್ಕೆ ಜಾಗ ನೀಡಬೇಕು. ಸ್ಮಾರಕ ನಿರ್ಮಿಸುವ ಜಾಗದಲ್ಲೇ ಅಂತ್ಯಕ್ರಿಯೆ ಮಾಡಬೇಕು. ಅಂತ್ಯಕ್ರಿಯೆ ಮಾಡುವ ಸ್ಥಳ ಸ್ಮಾರಕ ನಿರ್ಮಾಣ ಮಾಡುವಂತಿರಬೇಕು ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ. ಈ ಪತ್ರಕ್ಕೆ ಪ್ರಧಾನಿ ಮೋದಿ ಸ್ಪಂದಿಸುತ್ತಾರಾ ಕಾದುನೋಡಬೇಕಿದೆ.

ನಾಳೆ ಅಂತ್ಯಕ್ರಿಯೆ 

ಇನ್ನು ನಾಳೆ ಬೆಳಗ್ಗೆ 11.45ಕ್ಕೆ ದೆಹಲಿಯ ನಿಗಮ್ ಬೋಧ್​ ಘಾಟ್​ನಲ್ಲಿ ಡಾ.ಮನಮೋಹನ್​ ಸಿಂಗ್ ಅಂತ್ಯಕ್ರಿಯೆ ನಡೆಯಲಿದೆ. ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ಜರುಗಲಿದ್ದು, ಅಗತ್ಯ ತಯಾರಿ ಮಾಡಿಕೊಳ್ಳಲು ಕೇಂದ್ರ ಗೃಹ ಇಲಾಖೆ ಸೂಚನೆ ನೀಡಿದೆ.

ಇದನ್ನೂ ಓದಿ: ಹಾರ್ಟ್​ ಸರ್ಜರಿ ಬಳಿಕ ಮನಮೋಹನ್ ಸಿಂಗ್ ವೈದ್ಯರ ಬಳಿ ತಮ್ಮ ಆರೋಗ್ಯದ ವಿಚಾರ ಬಿಟ್ಟು ಬೇರೇನೋ ಕೇಳಿದ್ದರಂತೆ

ದೀರ್ಘಕಾಲದಿಂದ ಅನಾರೋಗ್ಯಕ್ಕೀಡಾಗಿದ್ದ ಮನಮೋಹನ್ ಸಿಂಗ್ ನಿನ್ನೆ ರಾತ್ರಿ ಮನೆಯಲ್ಲಿ ದಿಢೀರ್ ಪ್ರಜ್ಞೆ ತಪ್ಪಿದ್ದಾರೆ. ಕೂಡಲೆ ಅವರನ್ನು ರಾತ್ರಿ 8:06 ರ ವೇಳೆಗೆ ಏಮ್ಸ್‌ ಆಸ್ಪತ್ರೆಗೆ ದಾಖಲಿಸಿ, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿಲ್ಲ. ರಾತ್ರಿ 9:51ಕ್ಕೆ ಅವರು ಕೊನೆಯುಸಿರೆಳೆದರು ಎಂದು ಏಮ್ಸ್ ತಿಳಿಸಿದೆ. ಮನಮೋಹನ್ ಸಿಂಗ್ ಅವರು ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. ದೆಹಲಿ ನಿವಾಸದಲ್ಲಿ ಗಣ್ಯಾತೀ ಗಣ್ಯರು ಸಿಂಗ್​ರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಅಪಾಯ ಕಡಿಮೆ: ಡಾ. ಮೋಹಿತ್ ಗುಪ್ತಾ
ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಅಪಾಯ ಕಡಿಮೆ: ಡಾ. ಮೋಹಿತ್ ಗುಪ್ತಾ
ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವುದು ದುಂದು ವೆಚ್ಚವಲ್ಲವೇ?
ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವುದು ದುಂದು ವೆಚ್ಚವಲ್ಲವೇ?
ಸಂವೇದನೆಯಿಲ್ಲದ, ಸೂಕ್ಷ್ಮತೆ ಗೊತ್ತಿರದ ಸಿಬ್ಬಂದಿಯಿಂದ ಸಮೀಕ್ಷೆ ಬೇಕಿತ್ತೇ?
ಸಂವೇದನೆಯಿಲ್ಲದ, ಸೂಕ್ಷ್ಮತೆ ಗೊತ್ತಿರದ ಸಿಬ್ಬಂದಿಯಿಂದ ಸಮೀಕ್ಷೆ ಬೇಕಿತ್ತೇ?
ಎಲ್ಲ ಮಂತ್ರಿಗಳು ಒಂದೇ ವಾಕ್ಯವನ್ನು ಪುನರಾವರ್ತಿಸುತ್ತಿದ್ದಾರೆ
ಎಲ್ಲ ಮಂತ್ರಿಗಳು ಒಂದೇ ವಾಕ್ಯವನ್ನು ಪುನರಾವರ್ತಿಸುತ್ತಿದ್ದಾರೆ