AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mann Ki Baat: ಪ್ರಯಾಣ ನಿಜವಾಗಿಯೂ ವಿಶೇಷವಾಗಿತ್ತು: ಮನ್​ ಕೀ ಬಾತ್ 100ನೇ ಸಂಚಿಕೆ ಪ್ರಸಾರಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಟ್ವೀಟ್

ಪ್ರಧಾನಿ ನರೇಂದ್ರ ಮೋದಿ(Narendra Modi) ಯವರು ನಡೆಸಿಕೊಡುವ ರೇಡಿಯೋ ಕಾರ್ಯಕ್ರಮ ಮನ್​ ಕೀ ಬಾತ್​(Mann Ki Baat)ನ 100ನೇ ಸಂಚಿಕೆ ಪ್ರಸಾರಕ್ಕೂ ಮುನ್ನ ಪ್ರಧಾನಿ ಟ್ವೀಟ್​ ಮಾಡಿದ್ದಾರೆ.

Mann Ki Baat: ಪ್ರಯಾಣ ನಿಜವಾಗಿಯೂ ವಿಶೇಷವಾಗಿತ್ತು: ಮನ್​ ಕೀ ಬಾತ್ 100ನೇ ಸಂಚಿಕೆ ಪ್ರಸಾರಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಟ್ವೀಟ್
ಮನ್​ ಕಿ ಬಾತ್​
Follow us
ನಯನಾ ರಾಜೀವ್
|

Updated on: Apr 30, 2023 | 10:07 AM

ಪ್ರಧಾನಿ ನರೇಂದ್ರ ಮೋದಿ(Narendra Modi) ಯವರು ನಡೆಸಿಕೊಡುವ ರೇಡಿಯೋ ಕಾರ್ಯಕ್ರಮ ಮನ್​ ಕೀ ಬಾತ್​(Mann Ki Baat)ನ 100ನೇ ಸಂಚಿಕೆ ಪ್ರಸಾರಕ್ಕೂ ಮುನ್ನ ಪ್ರಧಾನಿ ಟ್ವೀಟ್​ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನ 100ನೇ ಸಂಚಿಕೆ ಭಾನುವಾರ (ಏಪ್ರಿಲ್ 30) ಪ್ರಸಾರವಾಗಲಿದೆ. ಈ ಸಂದರ್ಭವನ್ನು ಐತಿಹಾಸಿಕವಾಗಿಸಲು ಬಿಜೆಪಿ ಭರ್ಜರಿ ತಯಾರಿ ನಡೆಸಿದೆ.

100 ಸಂಚಿಕೆಗಳನ್ನು ತಲುಪುವ ಪಯಣ ಅತ್ಯಂತ ವಿಶೇಷ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮವನ್ನು ಆಲಿಸುವಂತೆ ಪ್ರಧಾನಿ ಟ್ವೀಟ್ ಮಾಡುವ ಮೂಲಕ ಜನತೆಗೆ ಮನವಿ ಮಾಡಿದ್ದಾರೆ. ಬಿಜೆಪಿಯ ಇತರ ನಾಯಕರು ಕೂಡ ಕಾರ್ಯಕ್ರಮದ ಬಗ್ಗೆ ಉತ್ಸಾಹ ವ್ಯಕ್ತಪಡಿಸಿದ್ದಾರೆ. ಮನ್ ಕೀ ಬಾತ್ ಕಾರ್ಯಕ್ರಮ ಪ್ರತಿ ತಿಂಗಳ ಕೊನೆಯ ಭಾನುವಾರದಂದು ಪ್ರಸಾರವಾಗುತ್ತದೆ.

ಮತ್ತಷ್ಟು ಓದಿ: Mann Ki Baat Conclave: ಮನ್​ ಕೀ ಬಾತ್​ ಸಮಾವೇಶದಲ್ಲಿ ವಿಶೇಷ ಅತಿಥಿಯಾಗಿ ಬಂದಿದ್ದ ಮಹಿಳೆಗೆ ವೇದಿಕೆಯಲ್ಲೇ ಕಾಣಿಸಿಕೊಂಡಿತ್ತು ಹೆರಿಗೆ ನೋವು

ರಕ್ಷಣಾ ಸಚಿವ ರಾಜ್​ನಾಥ್ ಸಿಂಗ್ ಕೂಡ ಟ್ವೀಟ್​ ಮಾಡಿದ್ದು, ಈ ಕಾರ್ಯಕ್ರಮವು ಸಮೂಹ ಸಂವಹನ ಜಗತ್ತಿನಲ್ಲಿ ಒಂದು ಮೈಲಿಗಲ್ಲಾಗಿದೆ. ಈ ಕಾರ್ಯಕ್ರಮದ ಮೂಲಕ ದೇಶವಾಸಿಗಳೊಂದಿಗೆ ನೇರ ಸಂಪರ್ಕವನ್ನು ಸ್ಥಾಪಿಸುವ ಮೂಲಕ ಮೋದಿ ಅವರಿಗೆ ಹಲವು ವಿಷಯಗಳ ಬಗ್ಗೆ ಅರಿವು ಮೂಡಿಸಿದ್ದಲ್ಲದೆ, ಅವರಿಗೆ ಸ್ಫೂರ್ತಿಯನ್ನೂ ನೀಡಿದ್ದಾರೆ.

ಸ್ವಚ್ಛತೆ, ಕೋವಿಡ್ ಯೋಧರನ್ನು ಉತ್ತೇಜಿಸುವುದು, ಬೇಟಿ ಬಚಾವೋ-ಬೇಟಿ ಪಢಾವೋ, ಮೇಕ್ ಇನ್ ಇಂಡಿಯಾ, ಅಥವಾ ಜಲ ಸಂರಕ್ಷಣೆಯ ವಿಷಯವಾಗಿರಲಿ, ಮೋದಿಯವರು ಸಾಮಾನ್ಯರ ಸಮಸ್ಯೆಗಳಿಗೆ ಹೆಚ್ಚು ಒತ್ತು ನೀಡಿದವರು. ಅವರು ತಮ್ಮ ಅಭಿಪ್ರಾಯವನ್ನು ಬಹುತೇಕ ಎಲ್ಲಾ ಅಂಶಗಳಲ್ಲಿ ಬಹಳ ಪರಿಣಾಮಕಾರಿಯಾಗಿ ಮಂಡಿಸಿದ್ದಾರೆ.

ನಾನು ಬಿಜೆಪಿ ರಾಷ್ಟ್ರೀಯ ಕಚೇರಿಯಲ್ಲಿ ಮನ್ ಕೀ ಬಾತ್ ಕಾರ್ಯಕ್ರಮದ ನೂರನೇ ಸಂಚಿಕೆಯನ್ನು ಕೇಳಲು ಹಾಜರಾಗುತ್ತೇನೆ. ನರೇಂದ್ರ ಮೋದಿಯವರ ಈ ಕಾರ್ಯಕ್ರಮವು ಯಶಸ್ಸಿನ ಹೊಸ ದಾಖಲೆಗಳನ್ನು ಸ್ಥಾಪಿಸಲಿ, ನಾನು ಅವರಿಗೆ ಶುಭ ಹಾರೈಸುತ್ತೇನೆ ಎಂದು ಬರೆದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ