AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mann Ki Baat: 10 ವರ್ಷಗಳ ಪೂರೈಸಿದ ಮನ್​ ಕಿ ಬಾತ್ ಕಾರ್ಯಕ್ರಮ, ಪ್ರಧಾನಿ ಮೋದಿ ಹಂಚಿಕೊಂಡ ಒಂದಷ್ಟು ವಿಚಾರಗಳು ಇಲ್ಲಿವೆ

ಮನ್​ ಕಿ ಬಾತ್​ ಕಾರ್ಯಕ್ರಮವು 10 ವರ್ಷಗಳನ್ನು ಪೂರೈಸಿದ್ದು, ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಇವತ್ತಿನ ಸಂಚಿಕೆ ನನ್ನನ್ನು ಭಾವುಕರನ್ನಾಗಿಸಿದೆ, ಹಲವು ಹಳೆಯ ನೆನಪುಗಳು ನನ್ನನ್ನು ಸುತ್ತುತ್ತಿವೆ, ಮನ್ ಕಿ ಬಾತ್ ಪಯಣ 10 ವರ್ಷ ಪೂರೈಸುತ್ತಿದೆ.

Mann Ki Baat: 10 ವರ್ಷಗಳ ಪೂರೈಸಿದ ಮನ್​ ಕಿ ಬಾತ್ ಕಾರ್ಯಕ್ರಮ, ಪ್ರಧಾನಿ ಮೋದಿ ಹಂಚಿಕೊಂಡ ಒಂದಷ್ಟು ವಿಚಾರಗಳು ಇಲ್ಲಿವೆ
ನರೇಂದ್ರ ಮೋದಿImage Credit source: News 18
ನಯನಾ ರಾಜೀವ್
|

Updated on: Sep 29, 2024 | 11:41 AM

Share

ಮನ್​ ಕಿ ಬಾತ್​ ಕಾರ್ಯಕ್ರಮವು 10 ವರ್ಷಗಳನ್ನು ಪೂರೈಸಿದ್ದು, ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಇವತ್ತಿನ ಸಂಚಿಕೆ ನನ್ನನ್ನು ಭಾವುಕರನ್ನಾಗಿಸಿದೆ, ಹಲವು ಹಳೆಯ ನೆನಪುಗಳು ನನ್ನನ್ನು ಸುತ್ತುತ್ತಿವೆ, ಮನ್ ಕಿ ಬಾತ್ ಪಯಣ 10 ವರ್ಷ ಪೂರೈಸುತ್ತಿದೆ.

ಮನ್ ಕಿ ಬಾತ್’ 10 ವರ್ಷಗಳ ಹಿಂದೆ ಅಕ್ಟೋಬರ್ 3 ರಂದು ವಿಜಯದಶಮಿ ದಿನದಂದು ಪ್ರಾರಂಭವಾಯಿತು. ಮನ್ ಕಿ ಬಾತ್ ಮೂಲಕ ಪ್ರಧಾನಿ ಮೋದಿ ಅವರು ಪುದುಚೇರಿಯ ಕಡಲತೀರಗಳಲ್ಲಿ ಸ್ವಚ್ಛತಾ ಅಭಿಯಾನದ ಕುರಿತು ಚರ್ಚಿಸಿದರು.

ದೇಶದ ಪ್ರತಿಯೊಂದು ಭಾಗದಲ್ಲೂ ಸ್ವಚ್ಛತೆಯ ಬಗ್ಗೆ ಕೆಲವು ವಿಶಿಷ್ಟ ಪ್ರಯತ್ನಗಳು ನಡೆಯುತ್ತಿರುವುದು ನಮಗೆ ಕಂಡುಬರುತ್ತದೆ. ಕೆಲವೇ ದಿನಗಳಲ್ಲಿ, ಅಕ್ಟೋಬರ್ 2 ರಂದು, ಸ್ವಚ್ಛ ಭಾರತ್ ಮಿಷನ್ 10 ವರ್ಷಗಳನ್ನು ಪೂರೈಸುತ್ತಿದೆ. ಭಾರತೀಯ ಇತಿಹಾಸದಲ್ಲಿ ಇದನ್ನು ಇಷ್ಟು ದೊಡ್ಡ ಜನಾಂದೋಲನವನ್ನಾಗಿ ಮಾಡಿದವರನ್ನು ಅಭಿನಂದಿಸುವ ಸಂದರ್ಭವಿದು ಎಂದರು.

ಮತ್ತಷ್ಟು ಓದಿ: Mann Ki Baat: ಅಮ್ಮನ ಹೆಸರಲ್ಲಿ ಗಿಡ ನೆಡುವ ಅಭಿಯಾನಕ್ಕೆ ಮನ್ ಕೀ ಬಾತ್​ನಲ್ಲಿ ಕರೆ ನೀಡಿದ ಪ್ರಧಾನಿ ಮೋದಿ

ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದು ‘ಮನ್ ಕಿ ಬಾತ್’ ಕಾರ್ಯಕ್ರಮದ ನಾಲ್ಕನೇ ಸಂಚಿಕೆ. ಕಾರ್ಯಕ್ರಮವನ್ನು ಆಲ್ ಇಂಡಿಯಾ ರೇಡಿಯೊ ಮತ್ತು ದೂರದರ್ಶನ, ಆಲ್ ಇಂಡಿಯಾ ರೇಡಿಯೊ ಸುದ್ದಿ ವೆಬ್‌ಸೈಟ್ ಮತ್ತು ನ್ಯೂಸ್‌ಆನ್ ಏರ್ ಮೊಬೈಲ್ ಅಪ್ಲಿಕೇಶನ್‌ನ ಸಂಪೂರ್ಣ ನೆಟ್‌ವರ್ಕ್‌ನಲ್ಲಿ ಪ್ರಸಾರ ಮಾಡಲಾಗುತ್ತದೆ.

ಕಳೆದ ಕೆಲವು ವಾರಗಳಿಂದ ದೇಶದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿರುವ ರೀತಿ, ನೀರು ಎಷ್ಟು ಮುಖ್ಯ ಎಂಬುದನ್ನು ನಮಗೆ ನೆನಪಿಸುತ್ತದೆ. ಝಾನ್ಸಿಯ ಕೆಲವು ಮಹಿಳೆಯರು ಘುರಾರಿ ನದಿಗೆ ಹೊಸ ಜೀವ ನೀಡಿದ್ದಾರೆ ಎಂದು ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮೋದಿ ಹೇಳಿದ್ದಾರೆ. ಜಲ್ ಸಹೇಲಿ’ ಆಗುವ ಮೂಲಕ ಈ ಅಭಿಯಾನವನ್ನು ಮುನ್ನಡೆಸಿದ್ದಾರೆ.

ಅಳಿವಿನಂಚಿನಲ್ಲಿದ್ದ ಘುರಾರಿ ನದಿಯನ್ನು ಈ ಮಹಿಳೆಯರು ರಕ್ಷಿಸಿದ ರೀತಿಯನ್ನು ಯಾರೂ ಊಹಿಸಿರಲಿಲ್ಲ. ಮಧ್ಯಪ್ರದೇಶದ ಛತ್ತರ್‌ಪುರದಲ್ಲಿಯೂ ಮಹಿಳೆಯರ ಪ್ರಯತ್ನ ಶ್ಲಾಘನೀಯ. ಇಲ್ಲಿನ ಖೊಂಪ್ ಗ್ರಾಮದ ದೊಡ್ಡ ಹೊಂಡ ಬತ್ತಲು ಆರಂಭಿಸಿದಾಗ ಮಹಿಳೆಯರು ಪುನಶ್ಚೇತನಕ್ಕೆ ಮುಂದಾಗಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ