Modi Mann Ki Baat: ಸಂವಿಧಾನವು ನಮ್ಮನ್ನು ಉತ್ತಮ ಮಾರ್ಗದೆಡೆ ಕೊಂಡೊಯ್ಯುವ ದೀಪವಿದ್ದಂತೆ: ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಇಂದು 117ನೇ ಮನ್​ ಕಿ ಬಾತ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಸಂವಿಧಾನದ ಪರಂಪರೆಯೊಂದಿಗೆ ದೇಶದ ನಾಗರಿಕರನ್ನು ಸಂಪರ್ಕಿಸಲು ಸಂವಿಧಾನ75.ಕಾಮ್ ಹೆಸರಿನ ವಿಶೇಷ ವೆಬ್‌ಸೈಟ್ ಅನ್ನು ಸಹ ರಚಿಸಲಾಗಿದೆ ಎಂದು ಹೇಳಿದರು. ಇದರಲ್ಲಿ ನೀವು ಸಂವಿಧಾನದ ಪೀಠಿಕೆಯನ್ನು ಓದಿದ ನಂತರ ನಿಮ್ಮ ವೀಡಿಯೊವನ್ನು ಅಪ್‌ಲೋಡ್ ಮಾಡಬಹುದು, ನಿಮ್ಮಭಾಷೆಯಲ್ಲಿ ಸಂವಿಧಾನ ಓದಬಹುದು ಎಂದು ಹೇಳಿದರು.

Modi Mann Ki Baat: ಸಂವಿಧಾನವು ನಮ್ಮನ್ನು ಉತ್ತಮ ಮಾರ್ಗದೆಡೆ ಕೊಂಡೊಯ್ಯುವ ದೀಪವಿದ್ದಂತೆ: ಪ್ರಧಾನಿ ಮೋದಿ
ನರೇಂದ್ರ ಮೋದಿ
Image Credit source: Zee Business

Updated on: Dec 29, 2024 | 11:46 AM

ಸಂವಿಧಾನವು ನಮ್ಮನ್ನು ಉತ್ತಮ ಮಾರ್ಗದೆಡೆಗೆ ಕೊಂಡೊಯ್ಯುವ ದೀಪವಿದ್ದಂತೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 117ನೇ ಮನ್​ಕಿ ಬಾತ್​ನಲ್ಲಿ ಮಾತನಾಡಿದ ಅವರು,  ಸಂವಿಧಾನದ ಪರಂಪರೆಯೊಂದಿಗೆ ದೇಶದ ನಾಗರಿಕರನ್ನು ಸಂಪರ್ಕಿಸಲು constitution75.com ಹೆಸರಿನ ವಿಶೇಷ ವೆಬ್‌ಸೈಟ್ ಅನ್ನು ಸಹ ರಚಿಸಲಾಗಿದೆ ಎಂದು ಹೇಳಿದರು. ಇದರಲ್ಲಿ ನೀವು ಸಂವಿಧಾನದ ಪೀಠಿಕೆಯನ್ನು ಓದಿದ ನಂತರ ನಿಮ್ಮ ವೀಡಿಯೊವನ್ನು ಅಪ್‌ಲೋಡ್ ಮಾಡಬಹುದು. ವಿವಿಧ ಭಾಷೆಗಳಲ್ಲಿ ಸಂವಿಧಾನವನ್ನು ಓದಬಹುದು, ಸಂವಿಧಾನದ ಬಗ್ಗೆ ಪ್ರಶ್ನೆಗಳನ್ನು ಕೇಳಬಹುದು ಎಂದರು.

ಮನ್ ಕಿ ಬಾತ್ ಕೇಳುಗರು, ಶಾಲೆಗಳಲ್ಲಿ ಓದುತ್ತಿರುವ ಮಕ್ಕಳು, ಕಾಲೇಜಿಗೆ ಹೋಗುವ ಯುವಕರು, ಈ ವೆಬ್‌ಸೈಟ್‌ಗೆ ಖಂಡಿತಾ ಭೇಟಿ ನೀಡಿ ಇದರ ಭಾಗವಾಗಬೇಕೆಂದು ನಾನು ವಿನಂತಿಸುತ್ತೇನೆ ಎಂದು ಹೇಳಿದರು.

ಮಹಾಕುಂಭ ವಿಶಿಷ್ಟತೆ ವಿವರಿಸಿದ ಮೋದಿ
ಮಹಾಕುಂಭದ ವಿಶೇಷತೆ ಬಗ್ಗೆ ಮಾತನಾಡಿರುವ ಪ್ರಧಾನಿ ಈ ಕಾರ್ಯಕ್ರಮದಲ್ಲಿ ಕೋಟಿಗಟ್ಟಲೆ ಜನ ಸೇರುತ್ತಾರೆ. ಲಕ್ಷಗಟ್ಟಲೆ ಸಂತರು, ಸಾವಿರಾರು ಸಂಪ್ರದಾಯಗಳು, ನೂರಾರು ಪಂಗಡಗಳು ಎಲ್ಲರೂ ಸಮಾನರಾಗಿ ಭಾಗವಹಿಸುತ್ತಾರೆ. ಎಲ್ಲಿಯೂ ತಾರತಮ್ಯವಿಲ್ಲ, ಯಾರೂ ದೊಡ್ಡವರಲ್ಲ, ಚಿಕ್ಕವರಲ್ಲ. ವಿವಿಧತೆಯಲ್ಲಿ ಏಕತೆಯ ಇಂತಹ ದೃಶ್ಯ ಜಗತ್ತಿನ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ.

ಮತ್ತಷ್ಟು ಓದಿ: ಡಾ ಮನಮೋಹನ್ ಸಿಂಗ್ ಕೊಡುಗೆ ಕೊಂಡಾಡಿದ ಪ್ರಧಾನಿ ನರೇಂದ್ರ ಮೋದಿ

2024 ರಲ್ಲಿ ನಾವು ಚಿತ್ರರಂಗದ ಅನೇಕ ಮಹಾನ್ ವ್ಯಕ್ತಿಗಳ 100 ನೇ ಜನ್ಮ ವರ್ಷಾಚರಣೆಯನ್ನು ಆಚರಿಸುತ್ತಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದರು. ಈ ವ್ಯಕ್ತಿಗಳು ಭಾರತೀಯ ಚಿತ್ರರಂಗಕ್ಕೆ ವಿಶ್ವ ಮಟ್ಟದಲ್ಲಿ ಮನ್ನಣೆ ನೀಡಿದರು. ರಾಜ್ ಕಪೂರ್ ಭಾರತದ ಸಾಫ್ಟ್ ಪವರ್ ಅನ್ನು ಚಲನಚಿತ್ರಗಳ ಮೂಲಕ ಜಗತ್ತಿಗೆ ಪರಿಚಯಿಸಿದರು. ರಫಿ ಸಾಹಬ್ ಅವರ ಧ್ವನಿಯಲ್ಲಿ ಆ ಮ್ಯಾಜಿಕ್ ಇತ್ತು, ಅದು ಪ್ರತಿ ಹೃದಯವನ್ನು ಮುಟ್ಟಿತು ಎಂದರು.

ಮುಂದಿನ ವರ್ಷ ನಮ್ಮ ದೇಶದಲ್ಲಿ ಮೊದಲ ಬಾರಿಗೆ ವಿಶ್ವ ಆಡಿಯೋ ವಿಷುಯಲ್ ಎಂಟರ್‌ಟೈನ್‌ಮೆಂಟ್ ಶೃಂಗಸಭೆ ನಡೆಯಲಿದೆ ಎಂದು ಪ್ರಧಾನಿ ಮೋದಿ ಹೇಳಿದರು. ವೆಬ್ ಶೃಂಗಸಭೆಯಲ್ಲಿ ಪ್ರಪಂಚದಾದ್ಯಂತದ ಮಾಧ್ಯಮ ಮತ್ತು ಮನರಂಜನಾ ದಿಗ್ಗಜರು ಭಾಗವಹಿಸುತ್ತಾರೆ.

ಮುಂದಿನ ತಿಂಗಳಿನಿಂದ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ನಡೆಯಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಸದ್ಯ ಅಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಕುಂಭ ಪ್ರದೇಶವನ್ನು ನೋಡಿದ ತಕ್ಷಣ ಮನಸ್ಸಿನಲ್ಲಿ ತೃಪ್ತಿಯ ಭಾವ ತುಂಬಿತ್ತು. ಕುಂಭ ಸಮಾರಂಭದಲ್ಲಿ ಮೊದಲ ಬಾರಿಗೆ AI ಚಾಟ್‌ಬಾಟ್ ಅನ್ನು ಬಳಸಲಾಗುವುದು ಎಂದು ಅವರು ಹೇಳಿದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ