Modi Mann Ki Baat: ಪ್ಯಾರಿಸ್ ಒಲಿಂಪಿಕ್ಸ್​ ಅಥ್ಲೀಟ್​ಗಳನ್ನು ಬೆಂಬಲಿಸುವಂತೆ ಪ್ರಧಾನಿ ಮೋದಿ ಮನವಿ

ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ಭಾಗವಹಿಸುವ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವಂತೆ ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ. ಮನ್​ ಕಿ ಬಾತ್​ನಲ್ಲಿ ಮಾತನಾಡಿದ ಅವರು, 100 ಕ್ಕೂ ಹೆಚ್ಚು ದೇಶಗಳ ಯುವಕರು ಅಂತಾರಾಷ್ಟ್ರೀಯ ಗಣಿತ ಒಲಂಪಿಯಾಡ್‌ನಲ್ಲಿ ಭಾಗವಹಿಸಿದ್ದಾರೆ ಮತ್ತು ಒಟ್ಟಾರೆಯಾಗಿ ನಮ್ಮ ತಂಡವು ಟಾಪ್​ 5 ಸ್ಥಾನಗಳನ್ನು ತಲುಪುವಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದರು.

Modi Mann Ki Baat: ಪ್ಯಾರಿಸ್ ಒಲಿಂಪಿಕ್ಸ್​ ಅಥ್ಲೀಟ್​ಗಳನ್ನು ಬೆಂಬಲಿಸುವಂತೆ ಪ್ರಧಾನಿ ಮೋದಿ ಮನವಿ
ನರೇಂದ್ರ ಮೋದಿ
Follow us
|

Updated on: Jul 28, 2024 | 11:57 AM

ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ಭಾಗವಹಿಸುವ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವಂತೆ ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ. ಮನ್​ ಕಿ ಬಾತ್​ನಲ್ಲಿ ಮಾತನಾಡಿದ ಅವರು, 100 ಕ್ಕೂ ಹೆಚ್ಚು ದೇಶಗಳ ಯುವಕರು ಅಂತಾರಾಷ್ಟ್ರೀಯ ಗಣಿತ ಒಲಂಪಿಯಾಡ್‌ನಲ್ಲಿ ಭಾಗವಹಿಸಿದ್ದಾರೆ ಮತ್ತು ಒಟ್ಟಾರೆಯಾಗಿ ನಮ್ಮ ತಂಡವು ಟಾಪ್​ 5 ಸ್ಥಾನಗಳನ್ನು ತಲುಪುವಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದರು.

ಒಲಿಂಪಿಕ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸಲು ಪ್ಯಾರಿಸ್‌ಗೆ ತೆರಳಿರುವ ಕ್ರೀಡಾಪಟುಗಳನ್ನು ಹುರಿದುಂಬಿಸಲು ಜನರ ಬಳಿ ಮನವಿ ಮಾಡಿ ಶುಭ ಹಾರೈಸಿದರು. ಅಂತಾರಾಷ್ಟ್ರೀಯ ಗಣಿತ ಒಲಿಂಪಿಯಾಡ್‌ನಲ್ಲಿ ಭಾರತದ ವಿದ್ಯಾರ್ಥಿಗಳು ಅದ್ಭುತ ಪ್ರದರ್ಶನ ನೀಡಿದ್ದಾರೆ.

ಭಾರತ ನಾಲ್ಕು ಚಿನ್ನ ಮತ್ತು ಒಂದು ಬೆಳ್ಳಿ ಪದಕ ಗೆದ್ದಿದೆ. 100ಕ್ಕೂ ಹೆಚ್ಚು ದೇಶಗಳ ವಿದ್ಯಾರ್ಥಿಗಳು ಇದ್ದರು. ನಮ್ಮ ತಂಡ ಅಗ್ರ ಐದರಲ್ಲಿ ಬಂದಿತು. ಪುಣೆಯ ಆದಿತ್ಯ ವೆಂಕಟ್ ಗಣೇಶ್, ಸಿದ್ಧಾರ್ಥ್ ಚೋಪ್ರಾ, ದೆಹಲಿಯ ಅರ್ಜುನ್ ಗುಪ್ತಾ, ಗ್ರೇಟರ್ ನೋಯ್ಡಾದ ಕನವ್ ತಲ್ವಾರ್, ಮುಂಬೈನ ರುಸಿಲ್ ಮಾಥುರ್, ಗುವಾಹಟಿಯ ಆನಂದೋ ಭಾದುರಿ ಸೇರಿದಂತೆ ದೇಶಕ್ಕೆ ಕೀರ್ತಿ ತಂದ ವಿದ್ಯಾರ್ಥಿಗಳು.

ಇತ್ತೀಚೆಗಷ್ಟೇ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಯಾದ ಚರೈಡಿಯೋ ಮೊಯ್ದಾಮ್​ಗೆ ಪ್ರತಿಯೊಬ್ಬರು ಭೇಟಿ ನೀಡುವಂತೆ ಪ್ರಧಾನಿ ಮೋದಿ ಸಲಹೆ ನೀಡಿದರು.

ಮನ್​ಕಿ ಬಾತ್​ನಲ್ಲಿ ಮಾತನಾಡಿದ ಅವರು, ಈ ಸ್ಥಳಕ್ಕೆ ತಮ್ಮ ಭವಿಷ್ಯದ ಪ್ರವಾಸಗಳನ್ನು ಯೋಜಿಸುವಂತೆ ಜನರನ್ನು ಒತ್ತಾಯಿಸಿದರು. ಲೋಕಸಭೆ ಚುನಾವಣೆಯ ನಂತರ ಇದು ಅವರ ಎರಡನೇ ಭಾಷಣ ಮತ್ತು 2024-25ರ ಕೇಂದ್ರ ಬಜೆಟ್ ಮಂಡನೆಯ ನಂತರ ಮೊದಲ ಭಾಷಣವಾಗಿದೆ.

ಮತ್ತಷ್ಟು ಓದಿ: Mann Ki Baat: ಅಮ್ಮನ ಹೆಸರಲ್ಲಿ ಗಿಡ ನೆಡುವ ಅಭಿಯಾನಕ್ಕೆ ಮನ್ ಕೀ ಬಾತ್​ನಲ್ಲಿ ಕರೆ ನೀಡಿದ ಪ್ರಧಾನಿ ಮೋದಿ

ಇದೀಗ, ಪ್ಯಾರಿಸ್ ಒಲಿಂಪಿಕ್ಸ್ ಪ್ರಪಂಚದಾದ್ಯಂತ ಗಮನ ಸೆಳೆಯುತ್ತಿದೆ. 22 ಭಾರತೀಯ ಭಾಷೆಗಳು ಮತ್ತು 29 ಉಪಭಾಷೆಗಳನ್ನು ಹೊರತುಪಡಿಸಿ, ‘ಮನ್ ಕಿ ಬಾತ್’ ಅನ್ನು ಫ್ರೆಂಚ್, ಚೈನೀಸ್, ಇಂಡೋನೇಷಿಯನ್, ಟಿಬೆಟಿಯನ್, ಬರ್ಮೀಸ್, ಬಲೂಚಿ, ಅರೇಬಿಕ್, ಪಶ್ತು, ಪರ್ಷಿಯನ್, ಡಾರಿ ಮತ್ತು ಸ್ವಾಹಿಲಿ ಸೇರಿದಂತೆ 11 ವಿದೇಶಿ ಭಾಷೆಗಳಲ್ಲಿ ಪ್ರಸಾರ ಮಾಡಲಾಗುತ್ತದೆ. ಮನ್ ಕಿ ಬಾತ್ ಅನ್ನು ಆಲ್ ಇಂಡಿಯಾ ರೇಡಿಯೋದ 500 ಕ್ಕೂ ಹೆಚ್ಚು ಕೇಂದ್ರಗಳು ಪ್ರಸಾರ ಮಾಡುತ್ತವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ