AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mann Ki Baat ಇಂದು ಬೆಳಗ್ಗೆ 11 ಗಂಟೆಗೆ ಮನ್ ಕಿ ಬಾತ್ ಮೂಲಕ ರಾಷ್ಟ್ರವನ್ನುದ್ದೇಶಿಸಿ ಮೋದಿ ಭಾಷಣ

ಮನ್ ಕಿ ಬಾತ್ ರೇಡಿಯೊ ಕಾರ್ಯಕ್ರಮ 78 ನೇ ಸಂಚಿಕೆಯಾಗಿದ್ದು, ಬೆಳಿಗ್ಗೆ 11 ಗಂಟೆಗೆ ಪ್ರಧಾನಿ ಮೋದಿಯವರ ಅಧಿಕೃತ ಯೂಟ್ಯೂಬ್ ಚಾನೆಲ್ ಮತ್ತು ಪಿಎಂಒನಲ್ಲಿ ಪ್ರಸಾರವಾಗಲಿದೆ.

Mann Ki Baat ಇಂದು ಬೆಳಗ್ಗೆ 11 ಗಂಟೆಗೆ ಮನ್ ಕಿ ಬಾತ್ ಮೂಲಕ ರಾಷ್ಟ್ರವನ್ನುದ್ದೇಶಿಸಿ ಮೋದಿ ಭಾಷಣ
ನರೇಂದ್ರ ಮೋದಿ
TV9 Web
| Edited By: ಆಯೇಷಾ ಬಾನು|

Updated on:Jun 27, 2021 | 9:02 AM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ಮೂಲಕ ಇಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ದೇಶದಲ್ಲಿ ಮುಂದಿನ ಹಂತದ ವಿಶ್ವದ ಅತಿದೊಡ್ಡ ಇನಾಕ್ಯುಲೇಷನ್ ಡ್ರೈವ್‌ ಆರಂಭವಾಗಿದ್ದು 18 ವರ್ಷ ಮೇಲ್ಪಟ್ಟ ಎಲ್ಲಾ ಭಾರತೀಯ ನಾಗರಿಕರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಈ ಅಭಿಯಾನ ಶುರುವಾದ ಕೆಲವೇ ದಿನಗಳ ಬಳಿಕ ಇಂದು ಪ್ರಧಾನಿ ಮೋದಿ ‘ಮನ್ ಕಿ ಬಾತ್’ ಕಾರ್ಯಕ್ರಮ ಬಂದಿದ್ದು ಮೋದಿ ಮಾತನಾಡಲಿದ್ದಾರೆ.

ಮನ್ ಕಿ ಬಾತ್ ರೇಡಿಯೊ ಕಾರ್ಯಕ್ರಮ 78 ನೇ ಸಂಚಿಕೆಯಾಗಿದ್ದು, ಬೆಳಿಗ್ಗೆ 11 ಗಂಟೆಗೆ ಪ್ರಧಾನಿ ಮೋದಿಯವರ ಅಧಿಕೃತ ಯೂಟ್ಯೂಬ್ ಚಾನೆಲ್ ಮತ್ತು ಪಿಎಂಒನಲ್ಲಿ ಪ್ರಸಾರವಾಗಲಿದೆ. ಈ ಕಾರ್ಯಕ್ರಮವನ್ನು ಆಲ್ ಇಂಡಿಯಾ ರೇಡಿಯೋ ಮತ್ತು ದೂರದರ್ಶನದ ಸಂಪೂರ್ಣ ನೆಟ್‌ವರ್ಕ್‌ನಲ್ಲಿ ಮತ್ತು ಪ್ರತಿ ತಿಂಗಳ ಕೊನೆಯ ಭಾನುವಾರದಂದು ಎಐಆರ್ ನ್ಯೂಸ್ ವೆಬ್‌ಸೈಟ್ www.newsonair.com ಮತ್ತು ನ್ಯೂಸೊನೈರ್ ಮೊಬೈಲ್ ಆ್ಯಪ್‌ನಲ್ಲಿ ಪ್ರಸಾರ ಮಾಡಲಾಗುತ್ತದೆ.

ನಿನ್ನೆ, ಪ್ರಧಾನಿ ನರೇಂದ್ರ ಮೋದಿ ಹಳೆಯ ಮನ್ ಕಿ ಬಾತ್ ಎಪಿಸೋಡ್ ಅನ್ನು ಹಂಚಿಕೊಂಡಿದ್ದಾರೆ, ಇದು ಮಾದಕವಸ್ತು ದುರುಪಯೋಗ ಮತ್ತು ಅಕ್ರಮ ಕಳ್ಳಸಾಗಣೆ ವಿರುದ್ಧ ಅಂತರರಾಷ್ಟ್ರೀಯ ದಿನದಂದು ಮಾದಕವಸ್ತು ಭೀತಿಯನ್ನು ನಿವಾರಿಸುವ ಹಲವು ಅಂಶಗಳನ್ನು ಒಳಗೊಂಡಿದೆ ಎಂದು ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

ಕೊರೊನಾ ವೈರಸ್ ಮೂರನೇ ಅಲೆಯನ್ನು ಎದುರಿಸಲು ಭಾರತ ಸಜ್ಜಾಗುತ್ತಿದೆ. ಈ ಕಾರಣ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಈ ಬಗ್ಗೆ ಮಾತನಾಡುವ ಸಾಧ್ಯತೆ ಇದೆ. ಹಾಗೂ ಈ ಹಿಂದೆ ನಡೆದ ಕಾರ್ಯಕ್ರಮಗಳ ಸಮಯದಲ್ಲಿ ಭಾರತ ಕೊರೊನಾದ ಎರಡನೇ ಅಲೆಯನ್ನು ಎದುರಿಸುತ್ತಿತ್ತು. ಆಗ ಕೊರೊನಾದಿಂದಾಗಿ ಭಾರತದಲ್ಲಿ ಅನೇಕ ಸಾವು-ನೋವುಗಳು ಸಂಭವಿಸಿದ್ದವು. ಮತ್ತು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಮತ್ತು ಬೆಡ್ಗಳ ಕೊರತೆ ಉಂಟಾಗಿತ್ತು. ಇನ್ನು ಕಳೆದ ಬಾರಿಯ ಮನ್ ಕಿ ಬಾತ್ ಕಾರ್ಯಕ್ರಮದ ದಿನದಂದೇ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಏಳು ವರ್ಷದ ಆಳ್ವಿಕೆಯನ್ನು ಪೂರೈಸಿದ ದಿನವಾಗಿತ್ತು.

ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಲು ಮಾಡಿರುವ ಪ್ರಯತ್ನಗಳನ್ನು ಶ್ಲಾಘಿಸಿರುವ ನಿವೃತ್ತ ಪೊಲೀಸ್ ಅಧಿಕಾರಿಗಳು

Published On - 9:01 am, Sun, 27 June 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!