Video: ಸಭೆಯಲ್ಲಿ ಪ್ರಧಾನಿ ಮೋದಿ ಮಾತನಾಡುತ್ತಿದ್ದರೆ, ಅರವಿಂದ್ ಕೇಜ್ರಿವಾಲ್ ಹೀಗೆ ಕುಳಿತುಕೊಳ್ಳೋದಾ?- ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ನಾಯಕರು
ಇಂದು ಪ್ರಧಾನಿ ನರೇಂದ್ರ ಮೋದಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕೊವಿಡ್ 19 ಪರಿಶೀಲನಾ ಸಭೆ ನಡೆಸಿದ್ದರೂ, ಈ ಸಭೆಯಲ್ಲಿ ಹೆಚ್ಚುತ್ತಿರುವ ಇಂಧನಗಳ ಬೆಲೆಯ ಬಗ್ಗೆಯೂ ಪ್ರಸ್ತಾಪ ಮಾಡಿದ್ದಾರೆ.
ಇಂದು ಪ್ರಧಾನಿ ನರೇಂದ್ರ ಮೋದಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೊವಿಡ್ 19 ಪರಿಶೀಲನಾ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಪಾಲ್ಗೊಂಡಿದ್ದ ಅರವಿಂದ್ ಕೇಜ್ರಿವಾಲ್ ಇದೀಗ ಸಿಕ್ಕಾಪಟೆ ಟೀಕೆಗೆ ಗುರಿಯಾಗಿದ್ದಾರೆ. ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿರುವ ದೆಹಲಿ ಬಿಜೆಪಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಶಿಷ್ಟಾಚಾರದ ಬಗ್ಗೆ ಅರಿವಿಲ್ಲ. ಸಭೆಯಲ್ಲಿ ನಡೆದುಕೊಂಡ ರೀತಿ ಸರಿಯಿಲ್ಲ ಎಂದು ಕಿಡಿಕಾರಿದೆ. ಪ್ರಧಾನಿ ನರೇಂದ್ರ ಮೋದಿ ಸಭೆಯಲ್ಲಿ ಮಾತನಾಡುತ್ತಿದ್ದಾಗ ಅರವಿಂದ್ ಕೇಜ್ರಿವಾಲ್ ಕುಳಿತುಕೊಂಡ ಭಂಗಿಯನ್ನು ನೋಡಿ ಬಿಜೆಪಿ ಈ ಟೀಕೆ ಮಾಡಿದೆ. ಮೊದಲು ಕೆನ್ನೆಗೆ ಕೈಕೊಟ್ಟು ಕುಳಿತಿದ್ದ ಅರವಿಂದ್ ಕೇಜ್ರಿವಾಲ್, ಬಳಿಕ ತಮ್ಮ ಎರಡೂ ಕೈಯನ್ನು ಎತ್ತಿ, ಹಿಂದಕ್ಕೆ ತೆಗೆದುಕೊಂಡು ಹೋಗಿ, ಒಂಥರ ರಿಲ್ಯಾಕ್ಸ್ ಮೂಡ್ನಲ್ಲಿ ಕುಳಿತುಕೊಳ್ಳುತ್ತಾರೆ. ಪ್ರಧಾನಿಯೊಂದಿಗಿನ ಸಭೆಯಲ್ಲಿ ಪಾಲ್ಗೊಂಡಾಗ, ಅಲ್ಲೊಂದು ಶಿಷ್ಟಾಚಾರ, ಶಿಸ್ತು ಪಾಲನೆಯ ಅಗತ್ಯವಿರುತ್ತದೆ. ಆದರೆ ಅರವಿಂದ್ ಕೇಜ್ರಿವಾಲ್ ಅದನ್ನು ಪಾಲಿಸಿಲ್ಲ ಎಂಬುದು ಬಿಜೆಪಿಯ ಆರೋಪ.
Mannerless CM of Delhi! pic.twitter.com/yswnLNI6Ty
— BJP Delhi (@BJP4Delhi) April 27, 2022
ಇಂದು ಪ್ರಧಾನಿ ನರೇಂದ್ರ ಮೋದಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕೊವಿಡ್ 19 ಪರಿಶೀಲನಾ ಸಭೆ ನಡೆಸಿದ್ದರೂ, ಈ ಸಭೆಯಲ್ಲಿ ಹೆಚ್ಚುತ್ತಿರುವ ಇಂಧನಗಳ ಬೆಲೆಯ ಬಗ್ಗೆಯೂ ಪ್ರಸ್ತಾಪ ಮಾಡಿದ್ದಾರೆ. ಎಲ್ಲ ರಾಜ್ಯಗಳೂ ಸಹ ಪೆಟ್ರೋಲ್-ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆ (VAT)ಯನ್ನು ಕಡಿತಗೊಳಿಸಬೇಕು. ಇದರಿಂದ ಸಾಮಾನ್ಯ ಜನರಿಗೆ ತುಂಬ ಅನುಕೂಲವಾಗುತ್ತದೆ ಎಂದು ಇಂದಿನ ಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ. ನಾನು ಯಾರನ್ನೂ ಟೀಕಿಸುವುದಿಲ್ಲ, ಕೇವಲ ಚರ್ಚಿಸುತ್ತಿದ್ದೇನೆ. ಯಾವುದೋ ಕಾರಣಕ್ಕಾಗಿ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕೇರಳ ಮತ್ತು ಜಾರ್ಖಂಡ್‌ನಂತಹ ರಾಜ್ಯಗಳು ಇಂಧನದ ಮೇಲಿನ ವ್ಯಾಟ್ ಅನ್ನು ಕಡಿತಗೊಳಿಸಲು ಒಪ್ಪಲಿಲ್ಲ. ಹೆಚ್ಚಿನ ಬೆಲೆಗಳ ಹೊರೆ ನಾಗರಿಕರ ಮೇಲೆ ಉಳಿಯಿತು” ಎಂದು ಅವರು ಹೇಳಿದರು. ತಮ್ಮ ತೆರಿಗೆಯನ್ನು ಕಡಿಮೆ ಮಾಡುವ ರಾಜ್ಯಗಳು ಆದಾಯದಲ್ಲಿ ನಷ್ಟವನ್ನು ಅನುಭವಿಸುವುದು ಸಹಜ ಆದರೆ ಹಲವಾರು ರಾಜ್ಯಗಳು ಆ “ಸಕಾರಾತ್ಮಕ ಹೆಜ್ಜೆ” ತೆಗೆದುಕೊಂಡಿವೆ ಎಂದೂ ಮೋದಿಯವರು ಹೇಳಿದ್ದಾರೆ.
ಇದನ್ನೂ ಓದಿ: ಸುಮಲತಾ ಬಿಜೆಪಿ ಸೇರಿ ಮಗ ಅಭಿಷೇಕ್ ಗೆ ಮದ್ದೂರು ಕ್ಷೇತ್ರದಿಂದ ಟಿಕೆಟ್ ಗಿಟ್ಟಿಸಲು ಪ್ರಯತ್ನಿಸುತ್ತಿದ್ದಾರೆಯೇ?