Manohar Lal Khattar Resigns: ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್​ ಖಟ್ಟರ್ ರಾಜೀನಾಮೆ

|

Updated on: Mar 12, 2024 | 12:12 PM

ಹರ್ಯಾಣ ಮುಖ್ಯಮಂತ್ರಿ ಮನೋಹರ ಲಾಲ್​ ಖಟ್ಟರ್ ರಾಜೀನಾಮೆ ನೀಡಿದ್ದಾರೆ.

Manohar Lal Khattar Resigns: ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್​ ಖಟ್ಟರ್ ರಾಜೀನಾಮೆ
ಮನೋಹರ್​ ಲಾಲ್ ಖಟ್ಟರ್
Follow us on

ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್​ ಖಟ್ಟರ್(Manohar Lal Khattar) ರಾಜೀನಾಮೆ ನೀಡಿದ್ದಾರೆ. ಹರ್ಯಾಣದಲ್ಲಿ ರಾಜಕೀಯ ಗೊಂದಲದ ನಡುವೆ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಮಂಗಳವಾರ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮಂಗಳವಾರ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ. ವರದಿಗಳ ಪ್ರಕಾರ, ಜಾಟ್ ಅಲ್ಲದ ನಯಾಬ್ ಸಿಂಗ್ ಸೈನಿ ಅವರ ಸ್ಥಾನಕ್ಕೆ ಬರಲಿದ್ದಾರೆ. ಮೂಲಗಳ ಪ್ರಕಾರ ಮನೋಹರ್ ಲಾಲ್ ಖಟ್ಟರ್ ಕರ್ನಾಲ್ ನಿಂದ ಸ್ಪರ್ಧಿಸಬಹುದು.

ಕೇಂದ್ರ ಸಚಿವ ಅರ್ಜುನ್ ಮುಂಡಾ ಮತ್ತು ತ್ರಿಪುರಾ ಮಾಜಿ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಸೇರಿದಂತೆ ಕೇಂದ್ರ ಬಿಜೆಪಿ ನಾಯಕರು ಬದಲಾವಣೆಗಳ ಮೇಲ್ವಿಚಾರಣೆಗಾಗಿ ರಾಜ್ಯದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮತ್ತಷ್ಟು ಓದಿ: Manohar Lal Khattar: ಹರ್ಯಾಣ ಮುಖ್ಯಮಂತ್ರಿ ಮನೋಹರ್​ ಲಾಲ್​ ಖಟ್ಟರ್ ರಾಜೀನಾಮೆ ಸಾಧ್ಯತೆ

ಪಕ್ಷದ ಹಿರಿಯ ನಾಯಕರು ಮೌನ ವಹಿಸಿರುವುದರಿಂದ ಬದಲಾವಣೆಯ ಸ್ವರೂಪ ಸ್ಪಷ್ಟವಾಗಿಲ್ಲ. ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಸೀಟು ಹಂಚಿಕೆ ಒಪ್ಪಂದಕ್ಕೆ ಬರಲು ವಿಫಲವಾದ ನಂತರ ಬಿಜೆಪಿ ಮತ್ತು ಉಪಮುಖ್ಯಮಂತ್ರಿ ದುಷ್ಯಂತ್ ಚೌಟಾಲಾ ನೇತೃತ್ವದ ಜೆಜೆಪಿ ನಡುವಿನ ಸಂಬಂಧ ಹದಗೆಟ್ಟಿದೆ. 2019 ರ ಚುನಾವಣೆಯಲ್ಲಿ ಬಿಜೆಪಿ ರಾಜ್ಯದ ಎಲ್ಲಾ 10 ಲೋಕಸಭಾ ಸ್ಥಾನಗಳನ್ನು ಗೆದ್ದಿತ್ತು.

ಜತೆಗೆ ಇಡೀ ಸಚಿವ ಸಂಪುಟದ ರಾಜೀನಾಮೆಯನ್ನೂ ರಾಜ್ಯಪಾಲರಿಗೆ ಸಲ್ಲಿಸಲಾಗಿದೆ. ಕೆಲ ಹೊತ್ತಿನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಇದೆ. ಈಗ ರಾಜ್ಯದಲ್ಲಿ ಹೊಸ ಸಚಿವ ಸಂಪುಟ ರಚನೆಯಾಗಲಿದೆ. ಮೂಲಗಳ ಪ್ರಕಾರ ಇಂದು ಮಧ್ಯಾಹ್ನ 1 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಜೆಜೆಪಿ-ಬಿಜೆಪಿ ಮೈತ್ರಿ ಮುರಿದು ಬೀಳುವ ಸುದ್ದಿಯ ನಡುವೆಯೇ ಈ ರಾಜಕೀಯ ಸಂಚಲನ ಉಂಟಾಗಿದೆ.

ದುಷ್ಯಂತ್ ಚೌಟಾಲಾ ಅವರು ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದರು. ದುಷ್ಯಂತ್ ಚೌಟಾಲಾ ಅವರು ಇಂದು ತಮ್ಮ ಪಕ್ಷದ ಶಾಸಕರನ್ನು ದೆಹಲಿಯಲ್ಲಿರುವ ತಮ್ಮ ನಿವಾಸಕ್ಕೆ ಕರೆಸಿಕೊಂಡಿದ್ದರು.

90 ಸದಸ್ಯ ಬಲದ ಹರ್ಯಾಣ ವಿಧಾನಸಭೆಯಲ್ಲಿ ಬಿಜೆಪಿ 41, ಕಾಂಗ್ರೆಸ್ 30 ಮತ್ತು ಜೆಜೆಪಿ 10. ಏಳು ಮಂದಿ ಸ್ವತಂತ್ರರು, ಭಾರತೀಯ ರಾಷ್ಟ್ರೀಯ ಲೋಕದಳ (ಐಎನ್‌ಎಲ್‌ಡಿ) ಮತ್ತು ಎಚ್‌ಎಲ್‌ಪಿಯಿಂದ ತಲಾ ಒಬ್ಬ ಶಾಸಕರಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆಯ ಭಿನ್ನಾಭಿಪ್ರಾಯಗಳ ನಂತರ ಬಿಜೆಪಿ ಮತ್ತು ಜೆಜೆಪಿ ನಡುವಿನ ಸಂಬಂಧ ಹದಗೆಟ್ಟಿದೆ. 2019 ರಲ್ಲಿ ಹರಿಯಾಣದಲ್ಲಿ ಬಿಜೆಪಿ ಎಲ್ಲಾ 10 ಲೋಕಸಭಾ ಸ್ಥಾನಗಳನ್ನು ಗೆದ್ದಿತ್ತು.

 

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Published On - 11:52 am, Tue, 12 March 24