AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹಾನುಭೂತಿ ಪಡೆಯಲು ಕೇಜ್ರಿವಾಲ್ ನಡೆಸಿದ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ: ಮನ್ಸುಖ್ ಮಾಂಡವಿಯಾ

ಇಂದು ಅರವಿಂದ್ ಕೇಜ್ರಿವಾಲ್ ದೆಹಲಿಯ ಜನರ ಆರೋಗ್ಯದ ಬಗ್ಗೆ ಚಿಂತಿಸಬೇಕಾಗಿದೆ. ಆದರೆ ಆದರೆ ರಾಜಧಾನಿಯಲ್ಲಿ 'ಆಯುಷ್ಮಾನ್ ಭಾರತ್' ಅನುಷ್ಠಾನವಾಗಿಲ್ಲ. ಆಸ್ಪತ್ರೆಯಲ್ಲಿ ಬೆಡ್‌ಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಇತರರಿಗೆ ಹೋಲಿಸಿದರೆ ದೆಹಲಿಯ ಮಕ್ಕಳಿಗೆ ರೋಗನಿರೋಧಕ ಶಕ್ತಿ ಕಡಿಮೆಯಾಗಿದೆ, ಅದರ ಬಗ್ಗೆಯೂ ಚರ್ಚಿಸಿ. ಭಾರತದಾದ್ಯಂತ ನಡೆಯುತ್ತಿರುವ ಟಿಬಿ ನಿವಾರಣೆ ಕಾರ್ಯಕ್ರಮದಲ್ಲಿ ದೆಹಲಿಯ ಪ್ರದರ್ಶನ ತೀರಾ ಕಳಪೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ.

ಸಹಾನುಭೂತಿ ಪಡೆಯಲು ಕೇಜ್ರಿವಾಲ್ ನಡೆಸಿದ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ: ಮನ್ಸುಖ್ ಮಾಂಡವಿಯಾ
ಅರವಿಂದ್ ಕೇಜ್ರಿವಾಲ್- ಮನ್ಸುಖ್ ಮಾಂಡವಿಯಾ
ರಶ್ಮಿ ಕಲ್ಲಕಟ್ಟ
|

Updated on: Mar 27, 2024 | 3:44 PM

Share

ದೆಹಲಿ ಮಾರ್ಚ್ 27: ಇಡಿ ಕಸ್ಟಡಿಯಿಂದ (ED) ದೆಹಲಿಯ ಜನರ ಆರೋಗ್ಯ ಸೇವೆಯ ಬಗ್ಗೆ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಕಳವಳ ವ್ಯಕ್ತಪಡಿಸಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ (Mansukh Mandaviya) “ಇಂದು ಅರವಿಂದ್ ಕೇಜ್ರಿವಾಲ್ ದೆಹಲಿಯ ಜನರ ಆರೋಗ್ಯದ ಬಗ್ಗೆ ಚಿಂತಿಸಬೇಕಾಗಿದೆ. ಆದರೆ ಆದರೆ ರಾಜಧಾನಿಯಲ್ಲಿ ‘ಆಯುಷ್ಮಾನ್ ಭಾರತ್’ ಅನುಷ್ಠಾನವಾಗಿಲ್ಲ. ಆಸ್ಪತ್ರೆಯಲ್ಲಿ ಬೆಡ್‌ಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಇತರರಿಗೆ ಹೋಲಿಸಿದರೆ ದೆಹಲಿಯ ಮಕ್ಕಳಿಗೆ ರೋಗನಿರೋಧಕ ಶಕ್ತಿ ಕಡಿಮೆಯಾಗಿದೆ, ಅದರ ಬಗ್ಗೆಯೂ ಚರ್ಚಿಸಿ. ಭಾರತದಾದ್ಯಂತ ನಡೆಯುತ್ತಿರುವ ಟಿಬಿ ನಿವಾರಣೆ ಕಾರ್ಯಕ್ರಮದಲ್ಲಿ ದೆಹಲಿಯ ಪ್ರದರ್ಶನ ತೀರಾ ಕಳಪೆಯಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಕಳೆದ ಹಲವು ವರ್ಷಗಳಿಂದ ವೈದ್ಯಕೀಯ ಕಾಲೇಜುಗಳ ಸಂಖ್ಯೆ ಮೀರಿಲ್ಲ, ವೈದ್ಯಕೀಯ ಸೀಟುಗಳನ್ನು ಮೀರಿಸುತ್ತಿಲ್ಲ.ಅವರು (ಅರವಿಂದ್ ಕೇಜ್ರಿವಾಲ್) ಸಹಾನುಭೂತಿ ಪಡೆಯಲು ನಡೆಸಿದ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ ಎಂದಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಜಾರಿ ನಿರ್ದೇಶನಾಲಯದ (ಇಡಿ) ಕಸ್ಟಡಿಯಿಂದಲೇ ಎರಡನೇ ಆದೇಶವನ್ನು ಹೊರಡಿಸಿದ್ದು ಮೊಹಲ್ಲಾ ಚಿಕಿತ್ಸಾಲಯಗಳು ಮತ್ತು ಆಸ್ಪತ್ರೆಗಳಲ್ಲಿ ಔಷಧಿಗಳು ಮತ್ತು ರೋಗನಿರ್ಣಯ ಪರೀಕ್ಷೆಗಳ ಕೊರತೆಯನ್ನು ಪರಿಹರಿಸಲು ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಅವರನ್ನು ಕೇಳಿದ್ದಾರೆ.

ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮಾತು

“ಅವರು ಬಂಧನದಲ್ಲಿದ್ದರೂ, ಅವರು ದೆಹಲಿಯ ಜನರ ಆರೋಗ್ಯದ ಬಗ್ಗೆ ಚಿಂತಿತರಾಗಿದ್ದಾರೆ. ಅವರು ನನಗೆ ನಿರ್ದೇಶನ ನೀಡಿದ್ದಾರೆ. ಅನೇಕ ಮೊಹಲ್ಲಾ ಚಿಕಿತ್ಸಾಲಯಗಳು ಮತ್ತು ಆಸ್ಪತ್ರೆಗಳಲ್ಲಿ ಔಷಧಿಗಳು ಲಭ್ಯವಿಲ್ಲ ಎಂದು ತಿಳಿದು ಮುಖ್ಯಮಂತ್ರಿಗೆ ಬೇಸರವಾಗಿದೆ. ಕೆಲವು ಆಸ್ಪತ್ರೆಗಳು ಮತ್ತು ಮೊಹಲ್ಲಾ ಚಿಕಿತ್ಸಾಲಯಗಳಲ್ಲಿ ಉಚಿತ ರೋಗನಿರ್ಣಯ ಪರೀಕ್ಷೆಗಳು ಲಭ್ಯವಿಲ್ಲ. ಅವರನ್ನು ಜೈಲಿಗೆ ಹಾಕಲಾಗಿದ್ದರೂ, ದೆಹಲಿಯ ಜನರಿಗೆ ಯಾವುದೇ ತೊಂದರೆಯಾಗಬಾರದು, ಆಸ್ಪತ್ರೆಗೆ ಹೋಗುವ ಜನರು ಔಷಧಿ ಪಡೆಯಬೇಕು ಎಂದು ಸಿಎಂ ಬಯಸುತ್ತಾರೆ ಎಂದು ಭಾರದ್ವಾಜ್ ಹೇಳಿದ್ದಾರೆ.

ದೆಹಲಿಯ ಹತ್ತಾರು ಕುಟುಂಬಗಳು ಸರ್ಕಾರಿ ಆಸ್ಪತ್ರೆಗಳ ಔಷಧಿಗಳ ಮೇಲೆ ಅವಲಂಬಿತವಾಗಿವೆ.ಏಕೆಂದರೆ ಅವುಗಳನ್ನು ಖರೀದಿಸಲು ಸಾಧ್ಯವಾಗುತ್ತಿಲ್ಲ “ಕೆಲವರಿಗೆ ರಕ್ತದ ಒತ್ತಡ ಮತ್ತು ಮಧುಮೇಹದಂತಹ ಔಷಧಿಗಳ ಅಗತ್ಯವಿರುತ್ತದೆ. ಅನೇಕ ಜನರು ನಿಯಮಿತ ಮಧ್ಯಂತರದಲ್ಲಿ ರೋಗನಿರ್ಣಯ ಪರೀಕ್ಷೆಗಳನ್ನು ಮಾಡಬೇಕಾಗಿದೆ. ಅನೇಕ ಮೊಹಲ್ಲಾ ಚಿಕಿತ್ಸಾಲಯಗಳಲ್ಲಿ ಉಚಿತ ಪರೀಕ್ಷೆಗಳಿಗೆ ಅಡ್ಡಿಯಾಗುತ್ತಿದೆ ಎಂದು ಸಿಎಂ ಅರಿತಿರುವುದಾಗಿ ಭಾರದ್ವಾಜ್ ಹೇಳಿದ್ದಾರೆ.

ಸಮಸ್ಯೆಯನ್ನು ಪರಿಹರಿಸಲು ಮತ್ತು ಎಲ್ಲಾ ಆಸ್ಪತ್ರೆಗಳು ಮತ್ತು ಮೊಹಲ್ಲಾ ಕ್ಲಿನಿಕ್‌ಗಳು ಅಗತ್ಯವಿರುವ ಜನರಿಗೆ ಸಾಕಷ್ಟು ಔಷಧಿಗಳನ್ನು ಒದಗಿಸುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ರೋಗನಿರ್ಣಯ ಪರೀಕ್ಷೆಗಳು ಸಹ ಲಭ್ಯವಿವೆ ಎಂದು ಖಚಿತಪಡಿಸಿಕೊಳ್ಳಲು ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಜ್ರಿವಾಲ್ ಹೇಳಿದ್ದಾರೆ. ನನ್ನ ಇಲಾಖೆಯೊಂದಿಗೆ, ಈ ಪರಿಸ್ಥಿತಿಯನ್ನು ಸರಿಪಡಿಸಲು ನಾನು ಸಮರೋಪಾದಿಯಲ್ಲಿ ಕೆಲಸ ಮಾಡುತ್ತೇನೆ. ನಮ್ಮ ಮುಖ್ಯಮಂತ್ರಿಯನ್ನು ಜೈಲಿಗೆ ಹಾಕಿದ್ದರೂ ಅವರು ನಿಮ್ಮ ಬಗ್ಗೆ ಮಾತ್ರ ಯೋಚಿಸುತ್ತಿದ್ದಾರೆ ಎಂದು ಸಿಎಂ ಪರವಾಗಿ ನಾನು ದೆಹಲಿಯ ಜನರಿಗೆ ಭರವಸೆ ನೀಡಲು ಬಯಸುತ್ತೇನೆ ಎಂದು ಭಾರದ್ವಾಜ್ ಹೇಳಿದ್ದಾರೆ.

ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್ ಬಂಧನದ ಕುರಿತು ಅಮೆರಿಕದ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಭಾರತ

ಜೈಲಿನಿಂದ ನೀಡಿದ ಮೊದಲ ಆದೇಶದಲ್ಲಿ, ಕೇಜ್ರಿವಾಲ್ ಅವರು ನೀರು ಮತ್ತು ಒಳಚರಂಡಿ ಸಂಬಂಧಿತ ಕುಂದುಕೊರತೆಗಳನ್ನು ಪರಿಹರಿಸಲು ಸಚಿವ ಅತಿಶಿ ಅವರಿಗೆ ಭಾನುವಾರ ಸೂಚಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚಿಕ್ಕಬಳ್ಳಾಪುರ: 1 ಕೋಟಿ 11 ಲಕ್ಷ ರೂ ಮೌಲ್ಯದ ಕುದುರೆಗೆ ಅದ್ದೂರಿ ಸ್ವಾಗತ
ಚಿಕ್ಕಬಳ್ಳಾಪುರ: 1 ಕೋಟಿ 11 ಲಕ್ಷ ರೂ ಮೌಲ್ಯದ ಕುದುರೆಗೆ ಅದ್ದೂರಿ ಸ್ವಾಗತ
ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು
Weekly Horoscope: ಜುಲೈ 21 ರಿಂದ 27ರವರೆಗಿನ ವಾರ ಭವಿಷ್ಯ
Weekly Horoscope: ಜುಲೈ 21 ರಿಂದ 27ರವರೆಗಿನ ವಾರ ಭವಿಷ್ಯ