AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಕಾರ್ಖಾನೆಯಲ್ಲಿ ಅಮೋನಿಯಾ ಅನಿಲ ಸೋರಿಕೆ, ಹಲವು ಮಂದಿ ಅಸ್ವಸ್ಥ

ತಮಿಳುನಾಡಿನ ಕಾರ್ಖಾನೆಯೊಂದರಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿದ್ದು, ಹಲವು ಮಂದಿ ಅಸ್ವಸ್ಥಗೊಂಡಿದ್ದಾರೆ. ರಸಗೊಬ್ಬರ ತಯಾರಿಕಾ ಕೇಂದ್ರವಾದ ಕೋರಮಂಡಲ್ ಇಂಟರ್‌ನ್ಯಾಶನಲ್ ಲಿಮಿಟೆಡ್ ಎನ್ನೋರ್‌ನಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿದ್ದು, ಹಲವರಲ್ಲಿ ಉಸಿರಾಟ ಸಮಸ್ಯೆ ಎದುರಾಗಿ ಸ್ಥಳದಲ್ಲಿ ಆತಂಕ ವಾತಾವರಣ ಸೃಷ್ಟಿಯಾಗಿದೆ ಎಂದು ವರದಿಗಳು ತಿಳಿಸಿವೆ.

ಅಮೋನಿಯಾ ಅನಿಲ ಸೋರಿಕೆ
Follow us
ನಯನಾ ರಾಜೀವ್
|

Updated on: Dec 27, 2023 | 10:47 AM

ತಮಿಳುನಾಡಿನ ಕಾರ್ಖಾನೆಯೊಂದರಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿದ್ದು, ಹಲವು ಮಂದಿ ಅಸ್ವಸ್ಥಗೊಂಡಿದ್ದಾರೆ. ರಸಗೊಬ್ಬರ ತಯಾರಿಕಾ ಕೇಂದ್ರವಾದ ಕೋರಮಂಡಲ್ ಇಂಟರ್‌ನ್ಯಾಶನಲ್ ಲಿಮಿಟೆಡ್ ಎನ್ನೋರ್‌ನಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿದ್ದು, ಹಲವರಲ್ಲಿ ಉಸಿರಾಟ ಸಮಸ್ಯೆ ಎದುರಾಗಿ ಸ್ಥಳದಲ್ಲಿ ಆತಂಕ ವಾತಾವರಣ ಸೃಷ್ಟಿಯಾಗಿದೆ ಎಂದು ವರದಿಗಳು ತಿಳಿಸಿವೆ.

ಅಮೋನಿಯಾವನ್ನು ದ್ರವ ರೂಪದಲ್ಲಿ ಪಂಪ್ ಮಾಡಲು ಪೈಪ್‌ಲೈನ್‌ನಲ್ಲಿ ತಂಪಾಗಿಸುವ ಪ್ರಕ್ರಿಯೆ ನಡೆಯುತ್ತಿತ್ತು. ಈ ವೇಳೆ ಅನಿಲ ಸೋರಿಕೆಯಾಗಿರಬಹುದು ಎಂದು ಹೇಳಲಾಗುತ್ತಿದೆ.

ಸ್ಥಳದಲ್ಲಿ ಇದೀಗ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಪಿ.ವಿಜಯಕುಮಾರ್ ಅವರು ತಿಳಿಸಿದ್ದಾರೆ. ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆಂದು ತಿಳಿದುಬಂದಿದೆ.

ಮತ್ತಷ್ಟು ಓದಿ: ಮಂಗಳೂರಿನ ಮೀನು ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ: ಐವರು ಸಾವು

ಅಮೋನಿಯಾವನ್ನು ದ್ರವ ರೂಪದಲ್ಲಿ ಪಂಪ್ ಮಾಡಲು ಪೈಪ್‌ಲೈನ್‌ನಲ್ಲಿ ತಂಪಾಗಿಸುವ ಪ್ರಕ್ರಿಯೆ ನಡೆಯುತ್ತಿತ್ತು. ಈ ವೇಳೆ ಅನಿಲ ಸೋರಿಕೆಯಾಗಿರಬಹುದು ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ.

ಸ್ಥಳೀಯ ನಿವಾಸಿಗಳು ಮನೆಯ ಬಾಗಿಲು ಮತ್ತು ಕಿಟಕಿಗಳನ್ನು ಮುಚ್ಚುವಂತೆ ಮತ್ತು ಮಾಸ್ಕ್ ಧರಿಸಿ ಮತ್ತು ನೀರಿನಲ್ಲಿ ಅದ್ದಿದ ಕರವಸ್ತ್ರಗಳೊಂದಿಗೆ ಮನೆಗಳಿಂದ ಹೊರ ಬರುವಂತೆ ಮನವಿ ಮಾಡಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್

ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...

ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ

ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್

ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ

ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ

ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್

ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ

ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ