ತಮಿಳುನಾಡಿನ ಕಾರ್ಖಾನೆಯೊಂದರಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿದ್ದು, ಹಲವು ಮಂದಿ ಅಸ್ವಸ್ಥಗೊಂಡಿದ್ದಾರೆ. ರಸಗೊಬ್ಬರ ತಯಾರಿಕಾ ಕೇಂದ್ರವಾದ ಕೋರಮಂಡಲ್ ಇಂಟರ್‌ನ್ಯಾಶನಲ್ ಲಿಮಿಟೆಡ್ ಎನ್ನೋರ್‌ನಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿದ್ದು, ಹಲವರಲ್ಲಿ ಉಸಿರಾಟ ಸಮಸ್ಯೆ ಎದುರಾಗಿ ಸ್ಥಳದಲ್ಲಿ ಆತಂಕ ವಾತಾವರಣ ಸೃಷ್ಟಿಯಾಗಿದೆ ಎಂದು ವರದಿಗಳು ತಿಳಿಸಿವೆ.
ಅಮೋನಿಯಾವನ್ನು ದ್ರವ ರೂಪದಲ್ಲಿ ಪಂಪ್ ಮಾಡಲು ಪೈಪ್‌ಲೈನ್‌ನಲ್ಲಿ ತಂಪಾಗಿಸುವ ಪ್ರಕ್ರಿಯೆ ನಡೆಯುತ್ತಿತ್ತು. ಈ ವೇಳೆ ಅನಿಲ ಸೋರಿಕೆಯಾಗಿರಬಹುದು ಎಂದು ಹೇಳಲಾಗುತ್ತಿದೆ.
ಸ್ಥಳದಲ್ಲಿ ಇದೀಗ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಪಿ.ವಿಜಯಕುಮಾರ್ ಅವರು ತಿಳಿಸಿದ್ದಾರೆ. ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆಂದು ತಿಳಿದುಬಂದಿದೆ.
ಮತ್ತಷ್ಟು ಓದಿ: ಮಂಗಳೂರಿನ ಮೀನು ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ: ಐವರು ಸಾವು
ಅಮೋನಿಯಾವನ್ನು ದ್ರವ ರೂಪದಲ್ಲಿ ಪಂಪ್ ಮಾಡಲು ಪೈಪ್‌ಲೈನ್‌ನಲ್ಲಿ ತಂಪಾಗಿಸುವ ಪ್ರಕ್ರಿಯೆ ನಡೆಯುತ್ತಿತ್ತು. ಈ ವೇಳೆ ಅನಿಲ ಸೋರಿಕೆಯಾಗಿರಬಹುದು ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ.
ಸ್ಥಳೀಯ ನಿವಾಸಿಗಳು ಮನೆಯ ಬಾಗಿಲು ಮತ್ತು ಕಿಟಕಿಗಳನ್ನು ಮುಚ್ಚುವಂತೆ ಮತ್ತು ಮಾಸ್ಕ್ ಧರಿಸಿ ಮತ್ತು ನೀರಿನಲ್ಲಿ ಅದ್ದಿದ ಕರವಸ್ತ್ರಗಳೊಂದಿಗೆ ಮನೆಗಳಿಂದ ಹೊರ ಬರುವಂತೆ ಮನವಿ ಮಾಡಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ