AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್‌ನಲ್ಲಿ ಭಾರಿ ಮಳೆಯಿಂದ 11 ಜನರು ಸಾವು: ಹಲವೆಡೆ ಹೈಅಲರ್ಟ್‌ ಘೋಷಣೆ

ಗುಜರಾತ್‌ನಲ್ಲಿ ಭಾರಿ ಮಳೆಯಿಂದ ಜಾಮ್‌ನಗರದ 6 ಮತ್ತು ಜುನಾಗಢದ ಐವರು ಸೇರಿದಂತೆ ಒಟ್ಟು 11 ಜನರು ಸಾವನ್ನಪ್ಪಿದ್ದಾರೆ ಎಂದು ಆಜ್‌ತಕ್‌ ವರದಿ ಮಾಡಿದೆ. ಸೂರತ್ ಸೇರಿದಂತೆ ಗುಜರಾತ್‌ನ ಹಲವೆಡೆ ಹೈಅಲರ್ಟ್‌ ಘೋಷಿಸಲಾಗಿದೆ. 

ಗುಜರಾತ್‌ನಲ್ಲಿ ಭಾರಿ ಮಳೆಯಿಂದ 11 ಜನರು ಸಾವು: ಹಲವೆಡೆ ಹೈಅಲರ್ಟ್‌ ಘೋಷಣೆ
ಪ್ರಾತಿನಿಧಿಕ ಚಿತ್ರ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Jul 01, 2023 | 10:07 PM

Share

ಗುಜರಾತ್‌ನಲ್ಲಿ ಭಾರಿ ಮಳೆ (heavy rain) ಯಿಂದ ಜಾಮ್‌ನಗರದ 6 ಮತ್ತು ಜುನಾಗಢದ ಐವರು ಸೇರಿದಂತೆ ಒಟ್ಟು 11 ಜನರು ಸಾವನ್ನಪ್ಪಿದ್ದಾರೆ ಎಂದು ಆಜ್‌ತಕ್‌ ವರದಿ ಮಾಡಿದೆ. ಸೂರತ್ ಸೇರಿದಂತೆ ಗುಜರಾತ್‌ನ ಹಲವೆಡೆ ಹೈಅಲರ್ಟ್‌ ಘೋಷಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ ಗುಜರಾತ್‌ನ ಹಲವೆಡೆ ಸುರಿದ ಭಾರೀ ಮಳೆಗೆ ನಗರಗಳು ಮತ್ತು ಹಳ್ಳಿಗಳಲ್ಲಿನ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಮತ್ತು ಪ್ರವಾಹದಂತಹ ಪರಿಸ್ಥಿತಿಯನ್ನು ಸೃಷ್ಟಿಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಚ್, ಜಾಮ್‌ನಗರ, ಜುನಾಗಢ್ ಮತ್ತು ನವಸಾರಿ ಜಿಲ್ಲೆಗಳಲ್ಲಿ ಪರಿಸ್ಥಿತಿ ಹದಗೆಟ್ಟಿದ್ದು, ನೂರಾರು ಹಳ್ಳಿಗಳು ಮುಳುಗಡೆಯಾಗಿವೆ. ಎಸ್‌ಡಿಆರ್‌ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಭಾರಿ ಮಳೆಯಿಂದಾಗಿ ಧಾಡ್ ಪಂಥಕ್​ನ ಓಜತ್ ಮತ್ತು ಉಬೆನ್ ಗ್ರಾಮಗಳು ಜಲಾವೃತಗೊಂಡಿವೆ.

ಇದನ್ನೂ ಓದಿ: ಭೀಮ್ ಆರ್ಮಿ ಮುಖ್ಯಸ್ಥ ಆಜಾದ್ ಮೇಲೆ ಗುಂಡಿನ ದಾಳಿ ಪ್ರಕರಣ: ನಾಲ್ವರ ಬಂಧನ

ಹಳ್ಳಿ ಹಳ್ಳಿಗೆ ನೀರು ನುಗ್ಗಿತ್ತಿದೆ. ಓಜತ್ ನದಿ ತೀರದ ಮಾನವದಾರ್, ಕೇಶೋಡ್ ಮತ್ತು ಮಂಗ್ರೋಲ್ ತಾಲೂಕಿನ 41 ಗ್ರಾಮಗಳಿಗೆ ಪ್ರವಾಹ ನೀರು ನುಗ್ಗಿದೆ. 50 ಗ್ರಾಮಗಳ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಪ್ರವಾಹದಲ್ಲಿ ಸಿಲುಕಿದ್ದ ಜನರನ್ನು ಹೆಲಿಕಾಪ್ಟರ್‌ಗಳ ಸಹಾಯದಿಂದ ರಕ್ಷಿಸಲಾಗಿದೆ. ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಜನರು ನರಕಯಾತನೆ ಅನುಭವಿಸುವಂತಾಗಿದೆ. ಪ್ರವಾಹ ಸಂತ್ರಸ್ತರ ನೆರವಿಗೆ ಅಧಿಕಾರಿಗಳು ಮುಂದಾಗಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಸಮ್ಮತಿಯ ಸೆಕ್ಸ್​ ವಯಸ್ಸಿನ ಮಿತಿ 18ರಿಂದ 16ಕ್ಕೆ ಇಳಿಸಿ; ಸರ್ಕಾರಕ್ಕೆ ಮಧ್ಯ ಪ್ರದೇಶ ಹೈಕೋರ್ಟ್ ಸಲಹೆ

ವಲ್ಸಾದ್ ಮಳೆಯಿಂದಾಗಿ ಭಾರೀ ಹಾನಿಯಾಗಿದೆ. ಕೆಲವು ಮನೆಗಳು ಕುಸಿದಿವೆ. ಮನೆಗಳಿಗೆ ಮೊಣಕಾಲು ಆಳಕ್ಕೆ ಮಳೆ ನೀರು ನುಗ್ಗಿದೆ. ಇದರಿಂದ ಜನರು ಮನೆಯಲ್ಲಿದ್ದರೂ ಸುರಕ್ಷಿತವಾಗಿಲ್ಲ. ಹಳೆ ಮನೆಗಳು ಯಾವಾಗ ಕುಸಿಯುತ್ತವೋ ಎಂಬ ಆತಂಕ ಜನರನ್ನು ಕಾಡುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:53 pm, Sat, 1 July 23