Maoist Link Case: ಮಾವೋವಾದಿಗಳ ಜತೆ ನಂಟು, ಮಾಜಿ ಪ್ರೊಫೆಸರ್ ಜಿಎನ್ ಸಾಯಿಬಾಬಾ ಬಿಡುಗಡೆ ಆದೇಶ ತಡೆ ಹಿಡಿದ ಸುಪ್ರೀಂ
ಮಾವೋವಾದಿಗಳ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ದೆಹಲಿ ವಿಶ್ವವಿದ್ಯಾಲಯದ (Delhi University) ಮಾಜಿ ಪ್ರೊಫೆಸರ್ ಜಿಎನ್ ಸಾಯಿಬಾಬಾ (GN Saibaba) ಅವರನ್ನು ಬಿಡುಗಡೆ ಮಾಡುವ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ದೆಹಲಿ: ಮಾವೋವಾದಿಗಳ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ದೆಹಲಿ ವಿಶ್ವವಿದ್ಯಾಲಯದ (Delhi University) ಮಾಜಿ ಪ್ರೊಫೆಸರ್ ಜಿಎನ್ ಸಾಯಿಬಾಬಾ (GN Saibaba) ಅವರನ್ನು ಬಿಡುಗಡೆ ಮಾಡುವ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಮಾವೋವಾದಿಗಳ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ದೆಹಲಿ ವಿಶ್ವವಿದ್ಯಾಲಯದ (Delhi University) ಮಾಜಿ ಪ್ರೊಫೆಸರ್ ಜಿಎನ್ ಸಾಯಿಬಾಬಾ (GN Saibaba) ಅವರನ್ನು ಬಂಧಿಸಲಾಗಿತ್ತು. ಆದರೆ, ಅವರನ್ನು ಈ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ದೋಷಮುಕ್ತಗೊಳಿಸಿದೆ. ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠವು ಅವರನ್ನು ತಕ್ಷಣ ಜೈಲಿನಿಂದ ಬಿಡುಗಡೆ ಮಾಡುವಂತೆ ಆದೇಶಿಸಿದೆ. ಈ ಪ್ರಕರಣದಲ್ಲಿ ಅವರೊಂದಿಗೆ ಇತರೆ ಅಪರಾಧಿಗಳನ್ನೂ ಖುಲಾಸೆಗೊಳಿಸಲಾಗಿದೆ.
ಇದನ್ನು ಓದಿ: ಮಾವೋವಾದಿಗಳ ಜೊತೆ ನಂಟು ಪ್ರಕರಣ; ದೆಹಲಿ ವಿವಿ ಮಾಜಿ ಪ್ರಾಧ್ಯಾಪಕ ಜಿಎನ್ ಸಾಯಿಬಾಬಾ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಆದೇಶ
ಆದರೆ ಇದೀಗ ಮಾವೋವಾದಿ ಸಂಪರ್ಕ ಆರೋಪ ಪ್ರಕರಣದಲ್ಲಿ ಮಾಜಿ ಪ್ರೊಫೆಸರ್ ಜಿಎನ್ ಸಾಯಿಬಾಬಾ ಬಿಡುಗಡೆ ಮಾಡಿದ ಬಾಂಬೆ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ತಡೆ ಹಿಡಿದಿದೆ.
ವಿಕಲಚೇತನರಾಗಿದ್ದ ಸಾಯಿಬಾಬಾ ಪ್ರಸ್ತುತ ನಾಗ್ಪುರ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಅವರನ್ನು 2014ರಲ್ಲಿ ಬಂಧಿಸಲಾಗಿತ್ತು. ನ್ಯಾಯಮೂರ್ತಿ ರೋಹಿತ್ ದೇವ್ ಮತ್ತು ಅನಿಲ್ ಪನ್ಸಾರೆ ಅವರಿದ್ದ ವಿಭಾಗೀಯ ಪೀಠವು ಸಾಯಿಬಾಬಾ ಅವರು 2017ರ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ ಮೇಲ್ಮನವಿಯನ್ನು ಅಂಗೀಕರಿಸಿತು. ನ್ಯಾಯಪೀಠವು ಈ ಪ್ರಕರಣದಲ್ಲಿ ಇತರ ಐವರು ಅಪರಾಧಿಗಳ ಮೇಲ್ಮನವಿಯನ್ನು ಸಹ ಅಂಗೀಕರಿಸಿ, ಅವರನ್ನು ಖುಲಾಸೆಗೊಳಿಸಿತು. ಮಹೇಶ್ ಟಿರ್ಕಿ, ಪಾಂಡು ಪೋರಾ ನರೋಟೆ, ಹೇಮ್ ಕೇಶ್ವದತ್ತ ಮಿಶ್ರಾ, ಪ್ರಶಾಂತ್ ರಾಹಿ ಮತ್ತು ವಿಜಯ್ ನಾನ್ ಟಿರ್ಕಿ ಇತರ ಐದು ಅಪರಾಧಿಗಳಾಗಿದ್ದಾರೆ.
ಈ ಅಪರಾಧಿಗಳು ಬೇರೆ ಯಾವುದೇ ಪ್ರಕರಣದಲ್ಲಿ ಆರೋಪಿಗಳಾಗಿರದಿದ್ದರೆ ಅವರನ್ನು ಕೂಡಲೇ ಜೈಲಿನಿಂದ ಬಿಡುಗಡೆ ಮಾಡುವಂತೆ ನ್ಯಾಯಪೀಠವು ಸೂಚಿಸಿದೆ.
ಮಾರ್ಚ್ 2017 ರಲ್ಲಿ, ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಸೆಷನ್ಸ್ ನ್ಯಾಯಾಲಯವು ಸಾಯಿಬಾಬಾ ಮತ್ತು ಪತ್ರಕರ್ತ ಮತ್ತು ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸೇರಿದಂತೆ ಇತರರನ್ನು ಮಾವೋವಾದಿ ಸಂಪರ್ಕಗಳ ಆರೋಪದ ಮೇಲೆ ಮತ್ತು ದೇಶದ ವಿರುದ್ಧ ಯುದ್ಧ ಸಾರುವ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಶಿಕ್ಷೆ ವಿಧಿಸಲಾಗಿತ್ತು
Published On - 1:05 pm, Sat, 15 October 22