AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Assembly Election: ಮಹಾರಾಷ್ಟ್ರ ಚುನಾವಣೆಯಿಂದ ಹಿಂದೆ ಸರಿದ ಮನೋಜ್ ಜಾರಂಗೆ ಪಾಟೀಲ್

ಈ ಹಿಂದೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದ ಮರಾಠ ಕೋಟಾ ಕಾರ್ಯಕರ್ತ ಮನೋಜ್ ಜಾರಂಗೆ ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ ಮತ್ತು ತಮ್ಮ ಅಭ್ಯರ್ಥಿಗಳಿಗೆ ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವಂತೆ ಹೇಳಿದ್ದಾರೆ.

Maharashtra Assembly Election: ಮಹಾರಾಷ್ಟ್ರ ಚುನಾವಣೆಯಿಂದ ಹಿಂದೆ ಸರಿದ ಮನೋಜ್ ಜಾರಂಗೆ ಪಾಟೀಲ್
ಮನೋಜ್ ಜಾರಂಗೆ ಪಾಟೀಲ್
ನಯನಾ ರಾಜೀವ್
|

Updated on: Nov 04, 2024 | 11:58 AM

Share

ಮರಾಠ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದ ಮನೋಜ್ ಜಾರಂಗೆ ಪಾಟೀಲ್  ಮಹಾರಾಷ್ಟ್ರ ಚುನಾವಣೆಯಿಂದ ಹಿಂದೆ ಸರಿದಿದ್ದು , ತಮ್ಮ ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯುವಂತೆ ಮನವಿ ಮಾಡಿದ್ದಾರೆ.

ನವೆಂಬರ್ 20 ರ ಚುನಾವಣೆಯಲ್ಲಿ 10-15 ಅಭ್ಯರ್ಥಿಗಳನ್ನು ಬೆಂಬಲಿಸುವುದಾಗಿ ಹೇಳಿದ ಒಂದು ದಿನದ ನಂತರ ಯೂ-ಟರ್ನ್​ ತೆಗೆದುಕೊಂಡಿದ್ದಾರೆ. ಜಾಲ್ನಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ನಿರ್ಧಾರವನ್ನು ಒತ್ತಡದಿಂದ ತೆಗೆದುಕೊಂಡಿಲ್ಲ, ಮೀಸಲಾತಿ ಕುರಿತ ಅಭಿಯಾನ ಮುಂದುವರೆಯುವುದು ಎಂದು ಸ್ಪಷ್ಟಪಡಿಸಿದರು.

ಈ ಚುನಾವಣೆಯಲ್ಲಿ ದಲಿತ ಮತ್ತು ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಹೊರಟಿದ್ದೆವು.ಆದರೆ, ಒಂದು ಜಾತಿಯ ಬಲದ ಮೇಲೆ ಚುನಾವಣೆಗೆ ಸ್ಪರ್ಧಿಸಿ ಗೆಲ್ಲಲು ಸಾಧ್ಯವಿಲ್ಲ ಎಂದರು.

ಮತ್ತಷ್ಟು ಓದಿ: Sharad Pawar: ಶರದ್ ಪವಾರ್ ಒಬಿಸಿ ವರ್ಗಕ್ಕೆ ಸೇರಿದವರೇ? ವೈರಲ್ ಆದ ಜಾತಿ ಪ್ರಮಾಣಪತ್ರದ ನಿಜಾಂಶವೇನು?

ಯಾರನ್ನು ಸೋಲಿಸಬೇಕು ಎಂಬುದನ್ನು ಜನರೇ ನಿರ್ಧರಿಸಬೇಕು, ಯಾವುದೇ ಅಭ್ಯರ್ಥಿಯನ್ನು ಬೆಂಬಲಿಸುವುದಿಲ್ಲ ಎಂದು ಜಾರಂಗೆ ಹೇಳಿದರು. ನಾವು ರಾಜಕೀಯಕ್ಕೆ ಹೊಸಬರು, ನಾವು ಅಭ್ಯರ್ಥಿಯನ್ನು ಕಣಕ್ಕಿಳಿಸಿ, ಅವರು ಸೋತರೆ, ಅದು ಜಾತಿಗೆ ನಾಚಿಕೆಗೇಡಿನ ಸಂಗತಿಯಾಗಲಿದೆ. ಆದ್ದರಿಂದ ಎಲ್ಲಾ ಮರಾಠಾ ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ಹಿಂಪಡೆಯಲು ನಾನು ವಿನಂತಿಸುತ್ತೇನೆ ಎಂದು ಅವರು ಹೇಳಿದರು. ನವೆಂಬರ್ 4 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ಮರಾಠ ಸಮುದಾಯಕ್ಕೆ ರಾಜಕೀಯಕ್ಕೆ ಪ್ರವೇಶಿಸಿ ಮರಾಠ ಮೀಸಲಾತಿ ಪಡೆಯುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಆಗಸ್ಟ್ 6 ರಂದು ಜಾರಂಗೆ ಹೇಳಿದ್ದರು. ಆಗ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.

ಫೆಬ್ರವರಿಯಲ್ಲಿ, ಮಹಾರಾಷ್ಟ್ರ ಶಾಸಕಾಂಗವು ರಾಜ್ಯದ ಜನಸಂಖ್ಯೆಯ ಶೇಕಡಾ 30 ಕ್ಕಿಂತ ಹೆಚ್ಚು ಜನರನ್ನು ಒಳಗೊಂಡಿರುವ ಮರಾಠರಿಗೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಪ್ರತ್ಯೇಕ ವರ್ಗದ ಅಡಿಯಲ್ಲಿ ಶೇಕಡಾ 10 ರಷ್ಟು ಮೀಸಲಾತಿಯನ್ನು ಒದಗಿಸುವ ಮಸೂದೆಯನ್ನು ಅಂಗೀಕರಿಸಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ